ಉಡುಪಿ: ನಕಲಿ ವೈದ್ಯ ನಡೆಸುತ್ತಿದ್ದ, ಡೆಂಟಲ್ ಕ್ಲಿನಿಕ್ ಗೆ ಬೀಗ ಜಡಿದ ಅಧಿಕಾರಿಗಳು
Team Udayavani, Nov 4, 2020, 2:53 PM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ
ಉಡುಪಿ: ನಗರದಲ್ಲಿ ನಕಲಿ ದಂತ ವೈದ್ಯ ನಡೆಸುತ್ತಿದ್ದ ಡೆಂಟಲ್ ಕ್ಲಿನಿಕ್ ಲ್ಯಾಬ್‌ನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಸೀಲ್ ಮಾಡಿದ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದೆ.
ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಶ್ವೇತಾ ಎನ್ನುವವರಿಗೆ ಶಾಶ್ವತ್ ಡೆಂಟಲ್ ಕ್ಲಿನಿಕ್ ಲ್ಯಾಬ್ ಹೆಸರಿನ ವೈದ್ಯಕೀಯ ಸಂಸ್ಥೆಯನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರ ಅಡಿಯಲ್ಲಿ ಅನುಮತಿಯನ್ನು ನೀಡಲಾಗಿತ್ತು. ಈ ಅನುಮತಿಯನ್ನು ಶ್ವೇತಾ ವೈದ್ಯಕೀಯ ಪದವಿ ಹೊಂದಿರದ ಗೋವಿಂದ ಭಂಡಾರಿ ಅವರಿಗೆ ಕ್ಲಿನಿಕ್ ನಡೆಸಲು ಅವಕಾಶ ನೀಡಿದ್ದಾರೆ. ಮಾಹಿತಿ ತಿಳಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕ್ಲಿನಿಕ್ ಮೇಲೆ ದಾಳಿ ನಡೆಸಿದ್ದಾರೆ.
ಆರೋಪಿಗಳು ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕರಿಗೆ ನಂಬಿಕೆ ದ್ರೋಹವೆಸಗಿ, ವಂಚನೆ ಮಾಡಿರುವುದಾಗಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗರತ್ನ ಅವರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ;ಫಲಿತಾಂಶ ಇನ್ನಷ್ಟು ವಿಳಂಬ:ಸೋಲು, ಗೆಲುವು: ಸುಪ್ರೀಂಕೋರ್ಟ್ ಮೆಟ್ಟಿಲೇರುತ್ತೇನೆ ಎಂದ ಟ್ರಂಪ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.