ಕಾರಿಂಜದಲ್ಲಿ ರುದ್ರಗಿರಿಯ ರಣಕಹಳೆ ಸಮಾವೇಶ
ಗಣಿಗಾರಿಕೆ ಸ್ಥಗಿತಕ್ಕೆ ಡಿ. 21ರ ಗಡು ; ಇಲ್ಲದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ
Team Udayavani, Nov 22, 2021, 4:50 AM IST
ಬಂಟ್ವಾಳ: ಕಡಿದಾದ ಬಂಡೆಗಳ ತುದಿಯಲ್ಲಿ ಭಗವಂತನೇ ನಿರ್ಮಿಸಿರುವ ಕಾರಿಂಜ ಕ್ಷೇತ್ರವನ್ನು ಉಳಿಸುವ ನಿಟ್ಟಿನಲ್ಲಿ ರಣಕಹಳೆ ಊದಿದ್ದು, ಡಿ. 21ರೊಳಗೆ ಕ್ಷೇತ್ರದ ಸುತ್ತಲೂ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲದೇ ಹೋದರೆ ದ.ಕ., ಉಡುಪಿ ಜಿಲ್ಲೆಯ ಸಹಸ್ರಾರು ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನ ಕಾರ್ಯದರ್ಶಿ ಜಗದೀಶ ಕಾರಂತ ಎಚ್ಚರಿಸಿದರು.
ಅವರು ರವಿವಾರ ಕಾರಿಂಜ ಕ್ಷೇತ್ರದ ರಥಬೀದಿಯಲ್ಲಿ ಕಾರಿಂಜ ಕ್ಷೇತ್ರದ ರಕ್ಷಣೆಗಾಗಿ, ಅಕ್ರಮ ಗಣಿಗಾರಿಕೆ, ಗೋಮಾಳ ಭೂಮಿಯ ಅತಿಕ್ರಮಣ ಹಾಗೂ ಅಪವಿತ್ರತೆಯ ವಿರುದ್ಧ ಬಂಟ್ವಾಳ ತಾಲೂಕು ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ನಡೆದ ರುದ್ರಗಿರಿಯ ರಣಕಹಳೆ ಬೃಹತ್ ಜನಜಾಗೃತಿ ಸಮಾವೇಶದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಕ್ಷೇತ್ರವನ್ನು ಸಂರಕ್ಷಿಸಲು ಬೀದಿಗಿಳಿಯಬೇಕಾದ ಅನಿವಾರ್ಯ ಸೃಷ್ಟಿಯಾಗಿರುವುದು ದುರ್ದೈವವೇ ಸರಿ. ಆದಾಯ ಬರುವ ಕ್ಷೇತಗಳ ಮೇಲಿರುವ ಕಣ್ಣು ಈ ಕ್ಷೇತ್ರದ ರಕ್ಷಣೆಯ ಮೇಲೆ ಯಾಕಿಲ್ಲ ಎಂಬುದು ಗಂಭೀರ ಪ್ರಶ್ನೆಯಾಗಿದೆ. ಇದರ ಹಿಂದೆ ವ್ಯವಸ್ಥಿತ ಸಂಚಿದ್ದು, ಹಿಂದೆ ಆಡಳಿತ ಮಾಡಿದವರ ಕಣ್ಣು ಇಲ್ಲಿನ ಬಂಡೆಗಳ ಮೇಲಿತ್ತು ಎಂಬುದು ಗಣಿಗಾರಿಕೆಯಿಂದ ಸ್ಪಷ್ಟವಾಗಿದೆ ಎಂದರು.
ಮತ್ತೊಬ್ಬ ಆಚಾರ್ಯ ಹುಟ್ಟಿ ಬರಲಿ
ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ನಿಮ್ಮ ಪ್ರಾಮಾಣಿಕತೆ ಪರೀಕ್ಷೆ ಕಾರಿಂಜ ಬೆಟ್ಟವನ್ನು ಉಳಿಸುವ ಕಾರ್ಯದಿಂದಲೇ ನಡೆಯಲಿ. ಹಿಂದೆ ಸಚಿವರಾಗಿದ್ದ ವಿ.ಎಸ್. ಆಚಾರ್ಯರು ಕ್ಷೇತ್ರದ ಗಣಿಗಾರಿಕೆಯನ್ನು ನಿಲ್ಲಿಸಿದ್ದು, ಈಗ ಮತ್ತೊಬ್ಬ ಆಚಾರ್ಯರು ಹುಟ್ಟಿಬರಬೇಕಿದೆ. ಜಿಲ್ಲಾಧಿಕಾರಿಗಳು, ಸಚಿವರು, ಶಾಸಕರಿಗೆ 30 ದಿನಗಳ ಕಾಲಾವಾಕಾಶ ನೀಡುತ್ತೇವೆ. ನಿಮಗೆ ಸಾಧ್ಯವಾಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕಾರಂತ ಆಗ್ರಹಿಸಿದರು.
ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಬಂಟ್ವಾಳ ಕಾರ್ಯದರ್ಶಿ ಪದ್ಮನಾಭ ಮಯ್ಯ ಮಾತನಾಡಿ, ಗಣಿ, ಕಂದಾಯ, ಪೊಲೀಸ್ ಇಲಾಖೆಯಲ್ಲಿ ಭ್ರಷ್ಟ ಅಧಿಕಾರಿಗಳೇ ತುಂಬಿದ್ದು, ಅಕ್ರಮ ಗಣಿಗಾರಿಕೆಯ ವಿರುದ್ಧ ಹೋರಾಟ ಮಾಡುವವರನ್ನೇ ಸಂಶಯದ ದೃಷ್ಟಿಯಿಂದ ನೋಡುವಂತಾಗಿದೆ ಎಂದು ಆರೋಪಿಸಿದರು.
ಇದನ್ನೂ ಓದಿ:ಪಟಿಯಾಲಾದಿಂದ ನನ್ನ ಸ್ಪರ್ಧೆ: ಅಮರಿಂದರ್
ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ಪ್ರಸ್ತಾವನೆಗೈದರು. ಸಂಘಟನೆಯ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಮಂಗಳೂರು ವಿಭಾಗ ಕಾರ್ಯದರ್ಶಿ ಚಿನ್ಮಯಿ ಈಶ್ವರಮಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ ಉಪಸ್ಥಿತರಿದ್ದರು.
ಬೃಹತ್ ಪಾದಯಾತ್ರೆ
ಸಮಾವೇಶಕ್ಕೆ ಮೊದಲು ವಗ್ಗದಿಂದ ನಡೆದ ಸಾವಿರಾರು ಸಂಖ್ಯೆಯ ಕಾರ್ಯಕರ್ತರ ಪಾದಯಾತ್ರೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಸೇರಿದಂತೆ ಗಣ್ಯರು ಉದ್ಘಾಟಿಸಿದರು.
ಹಿಂಜಾವೇ ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಸ್ವಾಗತಿಸಿದರು. ದಿನೇಶ್ ಸುವರ್ಣ ರಾಯಿ ನಿರ್ವಹಿಸಿದರು.
ಸರಕಾರಕ್ಕೆ ಆಗ್ರಹ
– ಕಾರಿಂಜ ಕ್ಷೇತ್ರದ 10 ಕಿ.ಮೀ. ವ್ಯಾಪ್ತಿಯನ್ನು ಧಾರ್ಮಿಕ ಸೂಕ್ಷ್ಮವಲಯ ಎಂದು ಘೋಷಿಸಿ
– ಕ್ಷೇತ್ರಕ್ಕೆ ಹಿಂದೂ ಧರ್ಮದವರಿಗೆ ಮಾತ್ರ ಪ್ರವೇಶ ನೀಡಿ
– ಶಿವಮಾಲಾಧಾರಣೆ ಎಂಬ ಹೆಸರಿನಲ್ಲಿ ಕ್ಷೇತ್ರಕ್ಕೆ ಯಾತ್ರೆ ಬರುವಂತೆ ಹೊಸ ಸಂಪ್ರದಾಯ ಆರಂಭಿಸಿ
– ಪ್ರವಾಸೋದ್ಯಮದ ಹೆಸರಿನಲ್ಲಿ ದೇವಸ್ಥಾನದ ಪಾವಿತ್ರ್ಯವನ್ನು ಹಾಳುಗೆಡವದಂತೆ ಕ್ರಮ ಕೈಗೊಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.