Illegal Property Case: ಸಿಬಿಐ, ಲೋಕಾದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ: ಡಿಸಿಎಂ
ಲೋಕಾಯುಕ್ತಗಿಂತ ಸಿಬಿಐಯವರೇ ವಾಸಿ!
Team Udayavani, Aug 23, 2024, 6:15 AM IST
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರಕಾರ ಸಿಬಿಐಯಿಂದ ಲೋಕಾಯುಕ್ತಕ್ಕೆ ವರ್ಗಾ ವಣೆ ಮಾಡಿತ್ತು. ಆದರೆ ಸಿಬಿಐ ಯವರು ತನಿಖೆಯನ್ನು ಮುಂದುವರಿಸಿದ್ದಾರೆ. ನೂರಕ್ಕೂ ಹೆಚ್ಚು ನನ್ನ ಸ್ನೇಹಿತರು, ಕುಟುಂಬಸ್ಥರಿಗೆ ತುಂಬಾ ಕಿರುಕುಳ ನೀಡುತ್ತಿದ್ದಾರೆ. ಇದೇ ಕೆಲಸವನ್ನು ಲೋಕಾಯುಕ್ತ ಕೂಡ ಮುಂದುವರಿಸಿದೆ. ಅವರಿಂದಲೂ ಕಿರುಕುಳ ಆಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಗುರುವಾರ ಲೋಕಾಯುಕ್ತ ವಿಚಾರಣೆ ಎದುರಿಸಿದ ಬಳಿಕ ಮಾಧ್ಯಮದ ಜತೆಗೆ ಮಾತನಾಡಿ, ಲೋಕಾಯುಕ್ತ 6 ತಿಂಗಳಿನಿಂದ ತನಿಖೆ ಮಾಡುತ್ತಿದೆ. ಇವರಿಗಿಂತ ಸಿಬಿಐಯವರೇ ಪರವಾಗಿಲ್ಲ. ಲೋಕಾಯುಕ್ತದವರು ವಿಚಿತ್ರ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸಿಬಿಐಯವರು ಇನ್ನೂ ಪ್ರಶ್ನೆಗಳನ್ನೇ ಕೇಳಿಲ್ಲ, ಒಂದು ದಿನವೂ ವಿಚಾರಣೆಗೆ ಕರೆಯಲಿಲ್ಲ ಎಂದರು.
ದಾಖಲೆ ಸಲ್ಲಿಸುತ್ತೇನೆ
ಲೋಕಾಯುಕ್ತದ ಪ್ರಶ್ನೆಗಳಿಗೆ ಉತ್ತರಗಳನ್ನು ಕೊಟ್ಟಿದ್ದೇನೆ. ಒಂದಷ್ಟು ವಿಚಾರಗಳಲ್ಲಿ ಸ್ಪಷ್ಟನೆ ಪಡೆದುಕೊಳ್ಳಲು ಪ್ರಶ್ನೆಗಳನ್ನು ಕೇಳಿದ್ದು ಇದಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಇರುವ ಪೂರಕವಾದ ದಾಖಲೆಗಳನ್ನು ಸಲ್ಲಿಸುತ್ತೇನೆ. ಬುಧವಾರ (ಆ. 21) ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮವಿದ್ದ ಕಾರಣ ಗುರುವಾರ ಹಾಜರಾಗುತ್ತೇನೆ ಎಂದು ಮನವಿ ಮಾಡಿಕೊಂಡಿದ್ದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.