ಜಲಾವೃತ ಬೆಳೆಗೆ ತಕ್ಷಣ ಪರಿಹಾರ: ನಿರ್ಮಲಾ
Team Udayavani, Aug 11, 2019, 3:09 AM IST
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಸೇರಿ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಜಲಾವೃತವಾಗಿರುವ ಬೆಳೆಗಳಿಗೆ ತಕ್ಷಣವೇ ತಾತ್ಕಾಲಿಕ ಪರಿಹಾರ ನೀಡಲು ವಿಮಾ ಕಂಪೆನಿಗಳಿಗೆ ಸೂಚಿಸಲಾಗುವುದು. ಅಲ್ಲದೇ ನೆರೆ ಸಂತ್ರಸ್ತರಿಗೆ ತಕ್ಷಣ ನೆರವಾಗಲು ಪ್ರತಿ ಕುಟುಂಬಕ್ಕೆ 3,800ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬೆಳೆವಿಮೆ ಕಂಪನಿಗಳು, ಪ್ರವಾಹ ಪೀಡಿತ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿ ಮುಳುಗಡೆಯಾಗಿರುವ ಬೆಳೆ ಸಮೀಕ್ಷೆಗೆ ಮುಂದಾಗದೇ ತಕ್ಷಣವೇ ತಾತ್ಕಾಲಿಕವಾಗಿ ಪರಿಹಾರ ನೀಡಬೇಕು. ಸಮೀಕ್ಷೆ ಹಾಗೂ ಹೆಚ್ಚಿನ ಪರಿಹಾರದ ಬಗ್ಗೆ ನಂತರ ನಿರ್ಧರಿಸಬೇಕೆಂದು ಸೂಚನೆ ನೀಡಲಾಗುವುದು ಎಂದರು.
ತೀವ್ರ ಪ್ರವಾಹದ ಹಿನ್ನೆಲೆಯಲ್ಲಿ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಿಸುವ ಅಗತ್ಯವಿದೆ ಎಂಬುದು ತಮಗೆ ಮನವರಿಕೆಯಾಗಿದ್ದು, ಈಗಿರುವ ಆ.15ರ ಬೆಳೆವಿಮೆ ಕಂತು ಪಾವತಿಸುವ ಅವಧಿ ವಿಸ್ತರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಾಲ ವಸೂಲಾತಿಗೆ ಒತ್ತಡ ಬೇಡ: ಸಾಲ ಮರುಪಾವತಿಸುವಂತೆ ನೆರೆ ಹಾವಳಿ ಸಂತ್ರಸ್ತರಿಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಒತ್ತಾಯಿಸುವುದು ಸಲ್ಲ. ಸದ್ಯದ ಸ್ಥಿತಿಯಲ್ಲಿ ಯಾರೂ ಸಾಲ ಪಾವತಿ ಮಾಡುವ ಸ್ಥಿತಿಯಲ್ಲಿ ಇಲ್ಲ. ಈ ಹಿನ್ನೆಲೆಯಲ್ಲಿ ಕಿರುಕುಳ ಕೊಡದೇ ಮರುಪಾವತಿಗೆ ಅವಕಾಶ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಆದೇಶ ನೀಡಲಿದೆ ಎಂದು ಭರವಸೆ ನೀಡಿದರು.
ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಾಗ ನೇಕಾರ ಕುಟುಂಬಗಳು ತುಂಬಾ ಸಂಕಷ್ಟಕೀಡಾಗಿರುವುದು ಕಂಡುಬಂದಿದೆ. ಆದ್ದರಿಂದ ನೇಕಾರರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಅವಕಾಶ ನೀಡುವಂತೆ ಕ್ರಮ ವಹಿಸಲಾಗುವುದು ಎಂದರು.
ಕೆಸರಿನಲ್ಲೇ ನಡೆದುಕೊಂಡು ಹೋದ ಸಚಿವೆ: ನಿರ್ಮಲಾ ಸೀತಾರಾಮನ್ ಅವರು ಧಾಮಣೆ ರಸ್ತೆಯಲ್ಲಿ ಆಗಿರುವ ಹಾನಿಯ ವೀಕ್ಷಣೆ ಮಾಡಿದರು. ಆಗ ಸಚಿವರ ಬಳಿ ಬಂದ ಮಹಿಳೆಯರು ಕಾಲಿಗೆ ಬೀಳಲು ಮುಂದಾದರು. ಕೂಡಲೇ ಮಹಿಳೆಯ ಕೈಹಿಡಿದು ನಿಲ್ಲಿಸಿದ ಸಚಿವರು, ನಿಮ್ಮ ಸಮಸ್ಯೆ ಏನೆಂಬುದನ್ನು ಹೇಳಿ ಎಂದರು.
ಆಗ ಮಹಿಳೆಯರು, ಮೇಡಂ, ನಮ್ಮ ಮನೆಗೆ ಬಂದು ಸ್ಥಿತಿ ನೋಡಿ. ಆಗ ನಿಮಗೆಲ್ಲವೂ ಅರ್ಥವಾಗುತ್ತದೆ ಎಂದಾಗ, ನಿರ್ಮಲಾ ಅವರು ಕೆಸರಿನಲ್ಲಿಯೇ ನಡೆದುಕೊಂಡೇ ಹೋಗಿ ನೀರು ನುಗ್ಗಿದ ಮನೆಗಳು ಹಾಗೂ ಮಗ್ಗಗಳನ್ನು ಪರಿಶೀಲಿಸಿದರು. ನೇಕಾರ ಕಾಲೋನಿ ರಸ್ತೆ ಬಹುತೇಕ ಕೆಸರುಮಯವಾಗಿತ್ತು. ಸಚಿವರ ನಡೆ ಕಂಡು ಸ್ಥಳೀಯ ನಿವಾಸಿಗಳು ಭಾರತ ಮಾತಾಕೀ ಜೈ ಎಂದು ಘೋಷಣೆ ಕೂಗಿದರು.
ಬಾಗಲಕೋಟೆಗೆ ಪ್ರಯಾಣ: ಬಳ್ಳಾರಿ ನಾಲಾ ಪ್ರವಾಹದಿಂದ ಹಾನಿಗೊಳಗಾದ ಮನೆಗಳನ್ನು ವೀಕ್ಷಿಸಿ ರಸ್ತೆ ಮೂಲಕ ಸಂಕೇಶ್ವರಕ್ಕೆ ತೆರಳುತ್ತಿದ್ದ ಸಚಿವೆ ನಿರ್ಮಲಾ ಪ್ರಯಾಣ ಅರ್ಧಕ್ಕೆ ಮೊಟಕುಗೊಳಿಸಿದರು. ಹತ್ತರಗಿಯಿಂದ ವಾಪಸ್ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಾಗಲಕೋಟೆ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅರಿಯಲು ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.