ಮಾನವನಿಗೆ ಲಸಿಕೆ ಪ್ರಯೋಗ ಶುರು ; ಲಂಡನ್ ಇಂಪೀರಿಯಲ್ ಕಾಲೇಜು ವಿಜ್ಞಾನಿಗಳ ತಂಡದ ಪ್ರಯತ್ನ
Team Udayavani, Jun 17, 2020, 11:22 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ /ಲಂಡನ್: ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ವೈರಸ್ ಸೋಂಕು ವ್ಯಾಪಕವಾಗುತ್ತಿರುವ ನಡುವೆಯೇ ಭರವಸೆಯ ಬೆಳಕೊಂದು ಮೂಡಿದೆ. ಅದೇನೆಂದರೆ, ಲಂಡನ್‌ನ ಇಂಪೀರಿಯಲ್ ಕಾಲೇಜು ವಿಜ್ಞಾನಿಗಳು ಅಭಿವೃದ್ಧಿಪಡಿಸಿರುವ ಕೋವಿಡ್ ವೈರಸ್ ಲಸಿಕೆಯ ಮಾನವ ಪ್ರಯೋಗ ಆರಂಭವಾಗಿದೆ. ಈ ಹೊಸ ಲಸಿಕೆಯನ್ನು ವೈದ್ಯಕೀಯ ಸಂಶೋಧಕರು ಇದೇ ಮೊದಲ ಬಾರಿ ಮಾನವನ ಮೇಲೆ ಪ್ರಯೋಗಿಸುತ್ತಿದ್ದಾರೆ. ಸೋಂಕು ನಿವಾರಿಸುವಲ್ಲಿ ಲಸಿಕೆಯು ಪರಿಣಾಮ ಕಾರಿಯಾಗಿ ಕಾರ್ಯನಿರ್ವಹಿಸುವುದೇ, ಇಲ್ಲವೇ ಎಂಬುದನ್ನು ತಿಳಿಯಲು ಪ್ರಯೋಗ ನಡೆಸಲಾಗುತ್ತಿದೆ ಎಂದು ಈ ಪ್ರಯೋಗದ ನೇತೃತ್ವ ವಹಿಸಿರುವ ಪ್ರೊ| ರಾಬಿನ್ ಶಟ್ಟಾಕ್ ಅಭಿಪ್ರಾಯಪಟ್ಟಿದ್ದಾರೆ.
ಅತಿ ಪ್ರಬಲ ಪ್ರತಿಕಾಯಗಳ ಪತ್ತೆ: ಚೇತರಿಸಿಕೊಂಡ ವ್ಯಕ್ತಿಗಳ ರಕ್ತದಲ್ಲಿನ ಅತಿಪ್ರಬಲ ಪ್ರತಿಕಾಯಗಳನ್ನು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಈ ಆ್ಯಂಟಿಬಾಡಿಗಳನ್ನು ಲಸಿಕೆ ರೂಪದಲ್ಲಿ ಬಳಸಿ ಕೊರೊನಾವನ್ನು ನಿಯಂತ್ರಿಸಬಹುದು ಎಂಬ ಆಶಾವಾದ ವ್ಯಕ್ತಪಡಿಸಿದ್ದಾರೆ.
“ಆರೋಗ್ಯ ಕಾರ್ಯಕರ್ತರು, ವೃದ್ಧರು ಮತ್ತು ಸಾಂಪ್ರದಾಯಿಕ ಲಸಿಕೆಗಳಿಗೆ ಸ್ಪಂದಿಸದೇ ಇರುವ ರೋಗಿಗಳಿಗೆ ಈ ಪ್ರಬಲ ಪ್ರತಿಕಾಯಗಳ ಲಸಿಕೆ ನೀಡಬಹುದು. ಸೋಂಕನ್ನು ಆರಂಭಿಕ ಹಂತದಲ್ಲಿ ತಡೆಗಟ್ಟಲು, ತೀವ್ರ ಸೋಂಕಿಗೊಳಗಾದವರ ಜೀವ ರಕ್ಷಿಸಲು ಇದನ್ನು ಬಳಸಬಹುದು’ ಎಂದು ಅಮೆರಿಕದ ಸ್ಕ್ರಿಪ್ಟ್ ಸಂಶೋಧನಾ ಸಂಸ್ಥೆಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.