Politics: “ಗ್ಯಾರಂಟಿ ಅನುಷ್ಠಾನ ಸವಾಲು ಎನಿಸಲಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ
Team Udayavani, Aug 29, 2023, 11:16 PM IST
ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಅನಂತರ ಕೊಟ್ಟ ಭರವಸೆಯಂತೆ ಗ್ಯಾರಂಟಿಗಳನ್ನು ಜಾರಿ ಮಾಡುವುದು ಸವಾಲು ಎನಿಸಲಿಲ್ಲ. ನಮ್ಮ ಸರಕಾರಕ್ಕೆ ಅವುಗಳನ್ನು ಜಾರಿ ಮಾಡಬೇಕೆಂಬ ರಾಜಕೀಯ ಇಚ್ಛಾಶಕ್ತಿ ಇತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ಶ್ರೀ ಚಾಮುಂಡೇಶ್ವರೀ ದೇಗುಲದಲ್ಲಿ ದೇವಿಯ ದರ್ಶನ ಪಡೆದ ಅನಂತರ ಸುದ್ದಿಗಾರರ ಜತೆ ಮಾತನಾಡಿ, ವಿಪಕ್ಷಗಳು ಹಾಗೂ ದೇಶದ ಪ್ರಧಾನಮಂತ್ರಿಗಳೇ ಗ್ಯಾರಂಟಿ ಅನುಷ್ಠಾನವಾದರೆ ರಾಜ್ಯ ದಿವಾಳಿಯಾಗುತ್ತದೆ ಎಂದಿದ್ದರು. ಆದರೆ ನಾವು ಯಶಸ್ವಿಯಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಲ್ಲದೇ, ಪ್ರಣಾಳಿಕೆಯಲ್ಲಿ ಹೇಳಿರುವ 76 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತೇವೆ ಎಂದರು.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಚುನಾವಣೆ ಹಿಂದಿನ ದಿನ ಮೇ 9ರಂದು ನಾನು ಮತ್ತು ಡಿ.ಕೆ. ಶಿವಕುಮಾರ್ ಅವರು ಗ್ಯಾರಂಟಿ ಕಾರ್ಡುಗಳನ್ನು ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪೂಜೆ ಮಾಡಿ ವಿತರಿಸಿ¨ªೆವು. ಬುಧವಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯುತ್ತಿದೆ. ಗೃಹಲಕ್ಷ್ಮಿಯ ರೀತಿ ದೇಶದಲ್ಲಿಯೇ ಒಂದೇ ಯೋಜನೆಗೆ ಇಷ್ಟೊಂದು ಹಣ ಖರ್ಚು ಮಾಡುತ್ತಿರುವ ಬೇರೆ ಯಾವ ಯೋಜನೆಯೂ ಇಲ್ಲ ಎಂದರು.
ನುಡಿದಂತೆ ನಡೆದಿರುವುದು ಸರಕಾರದ ಸಾಧನೆ: ಡಿಕೆಶಿ
ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರಕಾರ ನಡೆದಿದೆ. ನುಡಿದಂತೆ ನಡೆದಿರುವುದು ನಮ್ಮ ಸರಕಾರದ ಸಾಧನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರೀ ದೇವಿಗೆ ಮಂಗಳವಾರ ಪೂಜೆ ಸಲ್ಲಿಸಿದ ಅನಂತರ ಸುದ್ದಿಗಾರರ ಜತೆ ಮಾತನಾಡಿ, ಈ ನಾಡಿನ ಅಧಿದೇವತೆ ಚಾಮುಂಡೇಶ್ವರೀ ದೇವಿಯ ಸನ್ನಿಧಾನದಲ್ಲಿ ಚುನಾವಣೆಗೂ ಮುನ್ನ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸಿ¨ªೆವು. ರಾಜ್ಯದಲ್ಲಿ 1.10 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತಲುಪಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.