ದಿಲ್ಲಿಯಲ್ಲಿ ಕೈ ಮಹತ್ವದ ಸಭೆ – ಇಂದು CM , DCM ಸೇರಿ ಪ್ರಮುಖರೊಂದಿಗೆ ಚರ್ಚೆ
Team Udayavani, Aug 2, 2023, 6:51 AM IST
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ 20 ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್ ಹೈಕ ಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಜತೆಗೆ ಹೊಸದಿಲ್ಲಿಯಲ್ಲಿ ಬುಧವಾರ ಅತೀ ಮಹತ್ವದ ಸಭೆ ನಡೆಸಲಿದೆ. ಇದರ ಜತೆಗೆ ಆಂತರಿಕ ಸಂಘರ್ಷಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಪರಾಮರ್ಶೆಯೂ ನಡೆಯಲಿದೆ.
ಲೋಕಸಭೆ ಚುನಾವಣೆ, ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಹಿರಿಯ ಸಚಿವರ ಸಹಿತ 50ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಕೂಡ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಹೈಕಮಾಂಡ್ ಈಗಾಗಲೇ ನಾಲ್ಕು ರಾಜ್ಯಗಳ ಸಭೆ ನಡೆಸಿದೆ. ಈಗ ಕರ್ನಾಟಕದ ವಿದ್ಯಮಾನಗಳತ್ತ ಚಿತ್ತಹರಿಸಿದೆ. ಎಐಸಿಸಿ ವತಿಯಿಂದ 28 ಲೋಕಸಭಾ ಕ್ಷೇತ್ರಗಳ ವರದಿ ತರಿಸಿಕೊಳ್ಳಲಾಗಿದ್ದು, 2018, 2023ರ ವಿಧಾನಸಭಾ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆಯ ಮತ ಗಳಿಕೆಯ ಏರಿಳಿತ, ಸಂಭಾವ್ಯ ಟಿಕೆಟ್ ಆಕಾಂಕ್ಷಿಗಳು, ಜಾತಿ ಲೆಕ್ಕಾಚಾರದ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಯಾರೆಲ್ಲ ಭಾಗಿ?
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ| ಜಿ. ಪರಮೇಶ್ವರ, ಸಚಿವರಾದ ಎಂ.ಬಿ. ಪಾಟೀಲ…, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಬಿ.ಕೆ. ಹರಿಪ್ರಸಾದ್, ಆರ್.ವಿ. ದೇಶಪಾಂಡೆ, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಎಚ್.ಕೆ. ಪಾಟೀಲ…, ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಖಾನ್, ಎನ್. ಚೆಲುವರಾಯಸ್ವಾಮಿ, ಶಿವಾನಂದ ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ, ಮಧು ಬಂಗಾರಪ್ಪ, ಎನ್.ಎಸ್. ಬೋಸರಾಜು, ಪ್ರಿಯಾಂಕ್ ಖರ್ಗೆ, ರಾಘವೇಂದ್ರ ಹಿಟ್ನಾಳ್, ಇ. ತುಕಾರಾಮ…, ಚಂದ್ರಪ್ಪ, ಜಗದೀಶ ಶೆಟ್ಟರ್ , ಲಕ್ಷ್ಮಣ ಸವದಿ, ವಿನಯ್ ಕುಲಕರ್ಣಿ, ರಮೇಶ್ ಕುಮಾರ್, ಬಿ.ಎಲ್. ಶಂಕರ್, ಡಿ.ಕೆ. ಸುರೇಶ್, ಜಿ.ಸಿ. ಚಂದ್ರಶೇಖರ್, ಡಾ| ಎಲ್. ಹನುಮಂತಯ್ಯ ಮತ್ತಿತರ ಪ್ರಮುಖ ನಾಯ ಕರು ಭಾಗಿಯಾಗಲಿದ್ದಾರೆ.
ಮೂರು ಸಭೆ
ರಾಜ್ಯ ನಾಯಕರ ಜತೆಗೆ ಒಟ್ಟು ಮೂರು ಹಂತಗಳಲ್ಲಿ ಸಭೆ ನಡೆಯಲಿದೆ. ಅಪರಾಹ್ನ 3.30ಕ್ಕೆ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುಜೇìವಾಲಾ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ಆಯ್ದ ನಾಯಕರು ಚರ್ಚೆ ನಡೆಸುತ್ತಾರೆ. ಆ ಬಳಿಕ 4.30ಕ್ಕೆ ನಡೆಯುವ ಸಭೆಯಲ್ಲಿ ಎಲ್ಲ ಸಚಿವರು ಭಾಗಿಯಾಗಲಿದ್ದಾರೆ. 7.30ಕ್ಕೆ ಮೂರನೇ ಸಭೆ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿ ಬುಧವಾರ ಕರ್ನಾಟಕದ ವಿದ್ಯಮಾನವೇ ಮಹತ್ವ ಪಡೆದುಕೊಳ್ಳಲಿದೆ.
ಲೋಕಸಭೆ ಚುನಾವಣೆ, ಪಕ್ಷದ ಹಿತದೃಷ್ಟಿ, ಚುನಾವಣ ತಂತ್ರಗಾರಿಕೆ, ಜವಾಬ್ದಾರಿಗಳ ಹಂಚಿಕೆ ಕುರಿತು ಚರ್ಚೆ ಮಾಡಲು ನಮ್ಮ ನಾಯಕರು ದಿಲ್ಲಿಯಲ್ಲಿ ಸಭೆ ಕರೆದಿ¨ªಾರೆ. ಇದರ ಜತೆಗೆ ನಮ್ಮ ಎಲ್ಲ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗುವುದು. ಕೇವಲ ಸಚಿವರಿಗೆ ಮಾತ್ರ ಆಹ್ವಾನ ನೀಡಿಲ್ಲ. ಒಟ್ಟು ಐವತ್ತು ಜನರನ್ನು ಮೂರು ವಿಭಾಗಗಳಂತೆ ಸಭೆಗೆ ಆಹ್ವಾನಿಸಲಾಗಿದೆ.
ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.