ಭಾರತ-ಚೀನಾ ಗಡಿ ಕಾಯಲು ಹೊರಟ ವನಿತೆಯರು
ಇದೇ ಮೊದಲ ಬಾರಿಗೆ ಐಟಿಬಿಪಿಗೆ ಮಹಿಳಾ ಅಧಿಕಾರಿಗಳ ಸೇರ್ಪಡೆ
Team Udayavani, Aug 8, 2021, 9:30 PM IST
ನವದೆಹಲಿ: ಭಾರತ-ಚೀನಾ ಗಡಿ (ಎಲ್‌ಎಸಿ) ಕಾವಲು ಕಾಯುವ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಪಡೆ(ಐಟಿಬಿಪಿ)ಯು ಇದೇ ಮೊದಲ ಬಾರಿಗೆ ತನ್ನ ಯುದ್ಧ ಸಂಬಂಧಿ ಘಟಕಕ್ಕೆ ಇಬ್ಬರು ಮಹಿಳಾ ಅಧಿಕಾರಿಗಳನ್ನು ಸೇರ್ಪಡೆ ಮಾಡಿದೆ.
ಐಟಿಬಿಪಿ ಅಧಿಕಾರಿಗಳ ತರಬೇತಿ ಅಕಾಡೆಮಿಯಿಂದ ಉತ್ತೀರ್ಣರಾದ 53 ಸಿಬ್ಬಂದಿಗೆ ಭಾನುವಾರ ಪ್ರಮಾಣ ವಚನ ಬೋಧಿಸಲಾಯಿತು. ಪ್ರಕೃತಿ ಹಾಗೂ ದೀಕ್ಷಾ ಹೆಸರಿನ ಇಬ್ಬರು ಮಹಿಳೆಯರು ಕೂಡ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಮಾಣ ವಚನ ಸ್ವೀಕ ರಿಸಿದ್ದಾರೆ. ಅವರಿಬ್ಬರನ್ನು ಅರೆ ಸೇನಾಪಡೆಯ ಪ್ರವೇಶ ಮಟ್ಟದ ಹುದ್ದೆಯಾದ ಸಹಾಯಕ ಕಮಾಂಡೆಂಟ್ ಹುದ್ದೆಗೆ ನೇಮಿಸಿಕೊಳ್ಳಲಾಗಿದೆ.
ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಹೊಂದಿರುವ ಪ್ರಕೃತಿಯ ತಂದೆ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿ ಇನ್ನು ದೀಕ್ಷಾ ಅವರ ತಂದೆ ಕಮಲೇಶ್ ಕುಮಾರ್ ಐಟಿಬಿಪಿಯಲ್ಲಿ ಅಧಿಕಾರಿಯಾಗಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದ ನಂತರ ಸಮವಸ್ತ್ರದಲ್ಲಿದ್ದ ತಂದೆ ಮಗಳಿಬ್ಬರು ಪರಸ್ಪರ ಸೆಲ್ಯೂಟ್ ಹೊಡೆದು, ಆಲಿಂಗಿಸಿಕೊಂಡಿದ್ದಾರೆ.
ಐಟಿಬಿಪಿ 2016ರಿಂದ ಮಹಿಳಾ ಸಿಬ್ಬಂದಿಯನ್ನು ಪಡೆಗೆ ನೇಮಿಸಿಕೊಳ್ಳುತ್ತಿದೆ. ಯುಪಿಎಸ್‌ಸಿ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವ ರಿಗೆ ಮುಂದಿನ ಹಂತದ ನೇಮಕಾತಿ ಪ್ರಕ್ರಿಯೆ ಇರುತ್ತದೆ. ಈವರೆಗೆ ಸ್ಥಿರ ಶ್ರೇಣಿ (ಕಾನ್‌ಸ್ಟೆಬುಲರಿ ರ್‍ಯಾಂಕ್) ಹುದ್ದೆಗಳಿಗೆ ಮಾತ್ರ ಮಹಿಳೆಯ ರನ್ನು ನೇಮಕ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇದೇ ಮೊದಲ ಬಾರಿಗೆ, ಯುದ್ಧಕ್ಕೆ ಸಂಬಂಧಿಸಿದ ಕಾರ್ಯಾಚರಣೆಗಳಲ್ಲೂ ಮಹಿಳೆಯರು ಸಕ್ರಿಯರಾಗಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.