ಕಣದಲ್ಲಿ “ಮಧ್ಯಂತರ ಚುನಾವಣೆ’ಯದ್ದೇ ಮಾತು
Team Udayavani, Nov 27, 2019, 3:09 AM IST
ಹದಿನೈದು ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಯ ರಣಕಣದಲ್ಲಿ ರಾಜಕೀಯ ಮುಖಂಡರ ವಾಗ್ಧಾಳಿ ಮುಗಿಲು ಮುಟ್ಟಿದೆ. ಬಿರುಸಿನ ಚುನಾವಣಾ ಪ್ರಚಾರದ ನಡುವೆಯೇ, ಉಪಚುನಾವಣೆ ನಂತರ ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಮಾತುಗಳೂ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಂದ ಕೇಳಿ ಬರುತ್ತಿವೆ. ಆದರೆ “ಮಧ್ಯಂತರ ಚುನಾವಣೆ ಸಾಧ್ಯವೇ ಇಲ್ಲ. ಇನ್ನೂ ಮೂರೂವರೆ ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ’ ಎಂಬುದು ಸಿಎಂ ಯಡಿಯೂರಪ್ಪ ಅವರ ಸ್ಪಷ್ಟನೆ.
ಮಧ್ಯಂತರ ಚುನಾವಣೆ ಸಾಧ್ಯತೆ ಇಲ್ಲ
ಮೈಸೂರು: ಅಧಿಕಾರ ಇಲ್ಲದೆ ಹತಾಶೆಯಿಂದ ಸಿದ್ದರಾಮಯ್ಯ ಮಧ್ಯಂತರ ಚುನಾವಣೆಯ ಮಾತನ್ನಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಇನ್ನೂ ಮೂರೂವರೆ ವರ್ಷ ವಿರೋಧ ಪಕ್ಷದ ನಾಯಕರಾಗಿಯೇ ಇರಬೇಕು. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಜನತೆಗೆ ಮಧ್ಯಂತರ ಚುನಾವಣೆ ಬೇಡವಾಗಿದೆ.
ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇಲ್ಲ ಎಂದು ಹೇಳಿದರು. ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ನೀಡುವ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಉಪ ಚುನಾವಣೆಯಲ್ಲಿ 15ಕ್ಕೆ ಹದಿನೈದೂ ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲ್ಲಲಿದೆ. ನಾನಿದನ್ನು ಕೇವಲ ಪ್ರಚಾರಕ್ಕಾಗಿ ಹೇಳುತ್ತಿಲ್ಲ. ಎಲ್ಲವನ್ನೂ ಅಳೆದು ತೂಗಿ ಈ ಮಾತನ್ನು ಹೇಳುತ್ತಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಅವರ ಮಧ್ಯಂತರ ಚುನಾವಣೆಯ ಆಸೆ ಈಡೇರುವುದಿಲ್ಲ ಎಂದರು.
ಕಾಂಗ್ರೆಸ್, ಜೆಡಿಎಸ್‌ನವರು ಚುನಾವಣೆಗೆ ಹೋಗೋಣ ಎನ್ನುತ್ತಿದ್ದಾರೆ. ಬಿಜೆಪಿ ಉಪಚುನಾವಣೆಯಲ್ಲಿ ಸೋತು ಸರ್ಕಾರ ಬಹುಮತ ಕಳೆದುಕೊಳ್ಳಬೇಕು, ಮುಂದೆ ಮತ್ತೆ ಚುನಾವಣೆ ನಡೆಯಬೇಕು ಎಂಬುದು ಕಾಂಗ್ರೆಸ್, ಜೆಡಿಎಸ್ ಉದ್ದೇಶ. ಹಾಗೆಂದು ಆರು ತಿಂಗಳಿಗೊಮ್ಮೆ ಚುನಾವಣೆಗೆ ಹೋಗೋಕಾಗುತ್ತಾ?
-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ
ಶಂಕರ್ ನನ್ನ ಬೆನ್ನಿಗೆ ಚೂರಿ ಹಾಕಿದ
ರಾಣಿಬೆನ್ನೂರು/ಹುಬ್ಬಳ್ಳಿ: ಆರ್.ಶಂಕರ್ ಅವರನ್ನು ಎರಡು ಬಾರಿ ಮಂತ್ರಿ ಮಾಡಿದೆ. ಆದರೆ ನನಗೇ ಚೂರಿ ಹಾಕಿ ಹೋದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಮಂಗಳವಾರ ನಡೆದ ಮತ ಪ್ರಚಾರ ಸಭೆಯಲ್ಲಿ ಮಾತನಾಡಿ, ಶಂಕರ್ ರಾಜಕಾರಣದಲ್ಲಿ ಇರಲೇಬಾರದು. ಯಾರೇ ಆಗಲಿ ಜನರಿಗೆ, ನಾಯಕರಿಗೆ ದ್ರೋಹ ಮಾಡಿದವರಿಗೆ ಬೆಂಬಲ ಕೊಡಬಾರದು. ಇಂತಹವರಿಂದ ಪ್ರಜಾಪ್ರಭುತ್ವ ಹಾಳಾಗುತ್ತದೆ. ಆಯ್ಕೆಯಾದ ಪಕ್ಷಕ್ಕೆ, ಮತದಾರರಿಗೆ ದ್ರೋಹ ಮಾಡಿದವರನ್ನು ಮತ್ತೆ ವಿಧಾನಸಭೆಗೆ ಕಳುಹಿಸಬಾರದು ಎಂದರು.
ಅಧಿಕಾರ ಇದ್ದಾಗ ಒಂದು ಮಾತು. ಇಲ್ಲದಾಗ ಇನ್ನೊಂದು ಮಾತನಾಡುವ ಯಡಿಯೂರಪ್ಪಗೆ ಎರಡು ನಾಲಿಗೆ ಇವೆ ಎಂದರು. ಬಿಜೆಪಿಯವರು ಸಂಪರ್ಕದಲ್ಲಿ: ಈ ನಡುವೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ಹಾಗಂತ ನಾವು ಅವರನ್ನು ಯಾವತ್ತೂ ಪಕ್ಷಕ್ಕೆ ಕರೆದಿಲ್ಲ. ಹೋಗುವವರು ಈಗಾಗಲೇ ಬಿಜೆಪಿಗೆ ಹೋಗಿದ್ದಾರೆ. ಮತ್ತೆ ಇನ್ಯಾವ ಶಾಸಕರೂ ಅಲ್ಲಿಗೆ ಹೋಗಲ್ಲ ಎಂದು ಹೇಳಿದರು.
2018ರ ವಿಧಾನಸಭೆ ಚುನಾವಣೆ ವೇಳೆ ಕೋಳಿವಾಡ ಪರ ಪ್ರಚಾರಕ್ಕೆ ಬಂದಿರಲಿಲ್ಲ. ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರು, ಅದಕ್ಕೆ ಸಿದ್ದರಾಮಯ್ಯ ಕೋಳಿವಾಡ ಪರ ಮತಯಾಚನೆ ಮಾಡಲಿಲ್ಲ ಎಂದು ಯಾರೋ ಕೋಳಿವಾಡ ಮನಸಿನಲ್ಲಿ ತುಂಬಿದ್ದಾರೆ. ಅದಕ್ಕಾಗಿ ಅವರು ನನ್ನ ಮೇಲೆ ಅಸಮಾಧಾನಗೊಂಡಿದ್ದಾರೆ. ಕಳೆದ ಚುನಾವಣೆ ವೇಳೆ ಕಾರಣಾಂತರದಿಂದ ಬರಲು ಆಗಲಿಲ್ಲ. ಅದಕ್ಕೆ ಕಾರಣ ಜಾತಿ ರಾಜಕಾರಣ ಅಲ್ಲ.
-ಸಿದ್ದರಾಮಯ್ಯ, ಮಾಜಿ ಸಿಎಂ
ಮಧ್ಯಂತರ ಚುನಾವಣೆಗೆ ನಾವು ಸಿದ್ಧ
ಚಿಕ್ಕಬಳ್ಳಾಪುರ: ಉಪ ಚುನಾವಣೆ ಬಳಿಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೆ ಅದನ್ನು ಎದುರಿಸಲು ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಅಭ್ಯರ್ಥಿ ಎ.ರಾಧಾಕೃಷ್ಣ ಪರ ಮತ ಯಾಚನೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉಪ ಚುನಾವಣೆ ಫಲಿತಾಂಶ ಬರುವವರೆಗೂ ಏನೂ ಹೇಳಲು ಆಗುವು ದಿಲ್ಲ, ಆದರೆ ಮಧ್ಯಂತರ ಚುನಾವಣೆ ಎದುರಾದರೆ ಅದನ್ನು ಎದುರಿಸಲು ನಾವು ಸಿದ್ಧ ಎಂದರು.
ಪಾಪದ ಹಣ ಪಡೆದಿರುವ ಸುಧಾಕರ್: ತಾಲೂಕಿನ ನಂದಿ ಗ್ರಾಮದಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಯಡಿಯೂರಪ್ಪ ಕೊಟ್ಟಿರುವ ಪಾಪದ ಹಣದಲ್ಲಿ ಡಾ.ಕೆ.ಸುಧಾಕರ್ ಮತದಾರರ ಖರೀದಿಗೆ ಮುಂದಾಗಿದ್ದಾರೆ. ಆದರೆ ಪ್ರಜಾಪ್ರಭುತ್ವದ ವ್ಯವಸ್ಥೆಯೊಂದಿಗೆ ಚೆಲ್ಲಾಟವಾಡುತ್ತಿರುವ ಅಹಂಕಾರಿ ಸುಧಾಕರ್‌ಗೆ ಕ್ಷೇತ್ರದ ಜನ ತಕ್ಕಪಾಠ ಕಲಿಸಲಿದ್ದಾರೆಂದು ಹೇಳಿದರು. ಹುಣಸೂರು ಅಭ್ಯರ್ಥಿ ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ವಿಶ್ವನಾಥ್ ಇದು ರಾಜಕೀಯ ಧ್ರುವೀಕರಣ ಅಂತ ಹೇಳಿದ್ದಾರೆ. ಖಂಡಿತ ಅಲ್ಲ. ಇದು ರಾಜಕೀಯ ಶುದ್ಧೀಕರಣ ಎಂದರು.
ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಕೊಡಬೇಕೆಂದು ಯಡಿಯೂರಪ್ಪ ಹೇಳಿದ್ದಾರೆ. ನಾನು ಅಧಿಕಾರ ಕಳೆದುಕೊಂಡಾಗ ನನ್ನ ಸಮಾಜಕ್ಕೆ ನೋವು ಆಗಿರುವುದಿಲ್ಲವೇ? ಆದರೆ ಯಡಿಯೂರಪ್ಪ ರೀತಿ ನಾನು ಜಾತಿ ರಾಜಕಾರಣ ಮಾಡುವುದಿಲ್ಲ. ಅವರಂತೆ ಸಂಕುಚಿತ ಮನೋಭಾವ ನನ್ನದಲ್ಲ.
-ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.