ವಲಸೆ ಕಾರ್ಮಿಕರ ವಿಚಾರದಲ್ಲಿ ಪಾಲಿಕೆ ಎಡವಟ್ಟು: ಹೈ ಬೇಸರ
Team Udayavani, Apr 29, 2020, 7:09 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿರುವ ನಿರ್ಗತಿಕರು, ವಲಸೆ ಕಾರ್ಮಿಕರು ಇನ್ನಿತರ ದುರ್ಬಲ ವರ್ಗದ ಜನರನ್ನು ಪತ್ತೆ ಹಚ್ಚುವಲ್ಲಿ ಬಿಬಿಎಂಪಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿತು. ಲಾಕ್‌ಡೌನ್‌ನಿಂದ ನಗರದಲ್ಲಿ ಸಂಕಷ್ಟಕ್ಕೀಡಾಗಿರುವ ಬಡವರನ್ನು ಗುರುತಿಸಿ ಊಟ ವಸತಿ ಹಾಗೂ ಆರೋಗ್ಯ ತಪಾಸಣೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಯ 8 ವಲಯಗಳ ಜಂಟಿ ಆಯುಕ್ತರಿಗೆ ಹೈಕೋರ್ಟ್ ಕಳೆದ ಶುಕ್ರವಾರ ನಿರ್ದೇಶಿಸಿತ್ತು.
ಮಂಗಳವಾರ ಅರ್ಜಿ ವಿಚಾರಣೆಗೆ ಬಂದಾಗ ಬಿಬಿಎಂಪಿ ಪರವಾಗಿ ಸರ್ಕಾರಿ ವಕೀಲರು ಸಲ್ಲಿಸಿದ ವರದಿ ಗಮನಿಸಿದ ಪೀಠ, ಜಂಟಿ ಆಯುಕ್ತರ ನೇತೃತ್ವದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಪಾಲಿಕೆಗೆ ಸೂಚಿಸಿದ್ದರೂ ಮಾರ್ಷಲ್ ಗಳಿಂದ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲಾಗಿದೆ. ಆ ವರದಿಯೂ ಅಸಮರ್ಪಕವಾಗಿದೆ ಎಂದು ಬಿಬಿಎಂಪಿ ಬಗ್ಗೆ ಅಸಮಾಧಾನ ಹೊರಹಾಕಿತು. ನಿರಾಶ್ರಿತರು, ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರಿಗೆ ಊಟ ವಸತಿ ಒದಗಿಸುವ ಕುರಿತು ನಗರಾಭಿವೃದಿಟಛಿ ಇಲಾಖೆ ಹೊರಡಿಸಿರುವ ಮಾರ್ಗಸೂಚಿ ಪಾಲಿಸಿ ಆ ಕುರಿತು ಕೋರ್ಟ್‌ಗೆ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದ ಪೀಠ, ಅರ್ಜಿ ವಿಚಾರಣೆಯನ್ನು ಮೇ5ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.