Karnataka: ರಾಮಮಂದಿರ ಉದ್ಘಾಟನೆ: ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ
Team Udayavani, Jan 21, 2024, 12:36 AM IST
ಬೆಂಗಳೂರು: ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಸಾಮಾಜಿಕ ಜಾಲತಾಣ “ಎಕ್ಸ್’ನಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ಕೂಡಲೇ ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜನರಲ್ಲಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರಕಾರ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಯಲ್ಲಿ ಶಾಂತಿ ಕಾಪಾಡುವುದಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.