Bantwal: ಚಿಕಿತ್ಸೆಗೆ ದಾಖಲಾಗಿದ್ದ ಪೊಲೀಸ್ ಸಿಬ್ಬಂದಿಯ 2 ಮೊಬೈಲ್ ಕಳವು
ಸರಕಾರಿ ಆಸ್ಪತ್ರೆಯಲ್ಲಿ ಘಟನೆ
Team Udayavani, Sep 22, 2023, 12:29 AM IST
ಬಂಟ್ವಾಳ: ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ದಾಖಲಾಗಿರುವ ರೋಗಿಗಳ ಮೊಬೈಲ್ ಫೋನ್ಗಳ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಸಿಬಂದಿಯೊಬ್ಬರ 2 ಮೊಬೈಲ್ಗಳು ಕಳ್ಳತನವಾಗಿರುವ ಘಟನೆ ಸೆ. 19ರಂದು ನಡೆದಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ಹೆಡ್ಕಾನ್ಸ್ಟೆಬಲ್ ದೇವರಾಜ್ ಅವರು ಸೆ. 17ರಂದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ. 19ರಂದು ಅವರನ್ನು ಜನರಲ್ ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು. ಅವರು ಮಲಗಿದ್ದ ಬೆಡ್ ಪಕ್ಕದ ಟೇಬಲ್ನಲ್ಲಿ ಒಂದು ಆ್ಯಂಡ್ರಾಯ್ಡ ಮೊಬೈಲ್ ಹಾಗೂ ಒಂದು ಕೀಪ್ಯಾಡ್ ಮೊಬೈಲನ್ನು ಇಟ್ಟಿದ್ದರು.
ಸಿಸಿ ಕೆಮರಾದಲ್ಲಿ ಸೆರೆ
ಅವರು ಯಾವುದೋ ಕಾರಣಕ್ಕೆ ಹೊರಗೆ ಹೋದ ಸಂದರ್ಭ ಒಳ ನುಗ್ಗಿದ್ದ ಕಳ್ಳ ಮೊಬೈಲ್ ಎಗರಿಸಿದ್ದಾನೆ. ಆತ ಮೊಬೈಲ್ ಫೋನ್ ಕದಿಯುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು, ಪ್ರಸ್ತುತ ಆತನ ಫೋಟೊವನ್ನು ಆಸ್ಪತ್ರೆಯ ಮುಂಭಾಗದಲ್ಲಿ ಹಾಕಿ ಈತನನ್ನು ಕಂಡರೆ ತತ್ಕ್ಷಣ ಮಾಹಿತಿ ನೀಡುವಂತೆ ವಿನಂತಿಸಲಾಗಿದೆ.
ಕಳೆದ ವಾರ ವೃದ್ಧೆಯೊಬ್ಬರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೂ ಆಕೆಯ ಮೊಬೈಲ್ ಕಳ್ಳತನವಾಗಿದ್ದು, ಆ ವೇಳೆ ಆತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಜ್ಜಿಯನ್ನು ನೋಡುವುದಕ್ಕೆ ಇದೆ ಎಂದು ಅನುಮತಿ ಪಡೆದು ಒಳ ನುಗ್ಗಿದ್ದು, ಅಜ್ಜಿಯ ಬಳಿ ತುರ್ತಾಗಿ ಕರೆ ಮಾಡುವುದಕ್ಕೆ ಮೊಬೈಲ್ ಬೇಕು ಎಂದು ಪಡೆದುಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಬಂಟ್ವಾಳ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಳ್ಳನ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.