8ನೇ ಪರಿಚ್ಛೇದದಲ್ಲಿ ಸೇರ್ಪಡೆ ಪ್ರಸ್ತಾವ: ಸದ್ಯ ತುಳು ಭಾಷೆಗೆ ಸ್ಥಾನ ಸಿಗದು
Team Udayavani, Dec 15, 2021, 7:40 AM IST
ಹೊಸದಿಲ್ಲಿ: ತುಳು ಭಾಷೆ ಸದ್ಯ ಸಂವಿಧಾನದ ಎಂಟನೇ ಪರಿಚ್ಛೇದದಡಿ ಸೇರ್ಪಡೆಗೊಳ್ಳುವ ಸಾಧ್ಯತೆಗಳಿಲ್ಲ.
ಮಂಗಳವಾರ ಲೋಕ ಸಭೆ ಯಲ್ಲಿ ಚುಕ್ಕಿರಹಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಗೃಹ ಖಾತೆಯ ಸಹಾಯಕ ಸಚಿವ ನಿತ್ಯಾನಂದ ರಾಯ್ ಸದ್ಯ ಇದಕ್ಕೆ ಅವಕಾಶ ಇಲ್ಲ ಎಂದು ಉತ್ತರಿಸಿದ್ದಾರೆ.
ಲೋಕಸಭೆಯ ಮಂಗಳವಾರದ ಕಲಾಪ ಸಂದರ್ಭ ಸಂಸದ ರಾಜಮೋಹನ್ ಉಣ್ಣಿತ್ತಾನ್ ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಯೋಜನೆ ಸರಕಾರಕ್ಕಿದೆಯೇ, ಇಲ್ಲವಾದರೆ ಕಾರಣ ವೇನು ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಸಚಿವ ನಿತ್ಯಾನಂದ ರಾಯ್, ತುಳುಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಆಗ್ರಹ ಇರುವುದು ಸರಕಾರದ ಗಮನದಲ್ಲಿದೆ. ಆದರೆ ಭಾಷೆಗಳು ಮತ್ತು ಉಪಭಾಷೆಗಳ ವಿಕಾಸ ಒಂದು ಸತತ ಪ್ರಕ್ರಿಯೆಯಾಗಿದ್ದು, ಸಾಮಾಜಿಕ-ಸಾಂಸ್ಕೃತಿಕ, ಆರ್ಥಿಕ ಮತ್ತು ರಾಜಕೀಯ ಬೆಳವಣಿಗೆಗಳಿಂದ ಪ್ರಭಾವಿತವಾಗುತ್ತದೆ. ಆದ್ದರಿಂದ ಭಾಷೆಗಳನ್ನು ಉಪಭಾಷೆಗಳಿಂದ ಪ್ರತ್ಯೇಕವಾಗಿ ಗುರುತಿ ಸಲು, ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಗೊಳಿಸಲು ಮಾನದಂಡಗಳನ್ನು ನಿರ್ದಿಷ್ಟವಾಗಿ ರೂಪಿಸುವುದು ಕಷ್ಟ ಎಂದಿದ್ದಾರೆ.
ಈ ಸಂಬಂಧ ಮಾನದಂಡಗಳನ್ನು ರೂಪಿಸುವ ಪಹ್ವಾ (1996) ಮತ್ತು ಸೀತಾಕಾಂತ್ ಮೊಹಾಪಾತ್ರ (2003) ಸಮಿತಿಗಳ ಪ್ರಯತ್ನಗಳು ಸಂಪೂರ್ಣ ಯಶಸ್ವಿಯಾಗಿಲ್ಲ. ಹೀಗಾಗಿ ಸದ್ಯ ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ. ಡಾ| ಸೀತಾಕಾಂತ ಮೊಹಾಪಾತ್ರ ಸಮಿತಿಯು ಎಂಟನೇ ಪರಿಚ್ಛೇದದಲ್ಲಿರುವ ಅಧಿಕೃತ ಭಾಷೆಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಶಿಫಾರಸು ಮಾಡಿದೆ.
ಅಧಿಕೃತ ಭಾಷೆಗಳ ಸಂಖ್ಯೆಯನ್ನು ಪ್ರಸ್ತುತ ಹೆಚ್ಚಿಸುವುದು ಆಡಳಿತಾತ್ಮಕ ವಾಗಿ ಕಾರ್ಯಸಾಧ್ಯವಲ್ಲ ಎಂದು ಉತ್ತರಿಸಿದ್ದಾರೆ.
ಇದನ್ನೂ ಓದಿ:ಸಿದ್ಧ ಆಹಾರಕ್ಕೆ ಬಳಸಿದ ಸಾಮಗ್ರಿ ವಿವರ ಕಡ್ಡಾಯ; ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು
ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳ ತುಳು ಭಾಷಿಕರು ಹಲವಾರು ದಶಕಗಳಿಂದ ಆಗ್ರಹಿಸುತ್ತ ಬಂದಿದ್ದಾರೆ. ಈ ಸಂಬಂಧ ಕಳೆದ ಜೂನ್‌ನಲ್ಲಿ ನಡೆದ ಟ್ವೀಟ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿತ್ತು. ತುಳು ಪಂಚದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು, ಇನ್ನುಳಿದ ನಾಲ್ಕು ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಿದ್ದರೂ ತುಳುವಿಗೆ ಈ ಭಾಗ್ಯ ಒದಗಿಬಂದಿಲ್ಲ ಎಂಬುದು ತುಳುವರ ನೋವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.