Covid: ಕೋವಿಡ್‌ ಪರೀಕ್ಷಾ ಪ್ರಮಾಣ ಹೆಚ್ಚಳ- ಸಚಿವ ದಿನೇಶ್‌


Team Udayavani, Dec 16, 2023, 11:52 PM IST

dinesh gunduroa

ಬೆಂಗಳೂರು: ಒಂದು ತಿಂಗಳಿನಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚುತ್ತಿದ್ದು, ಕರ್ನಾಟಕದಲ್ಲೂ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಕೇರಳದಲ್ಲಿ ಕೋವಿಡ್‌ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಶನಿವಾರ ವಿಕಾಸಸೌಧದಲ್ಲಿ ಆರೋಗ್ಯಾಧಿಕಾರಿಗಳ ತುರ್ತು ಸಭೆ ನಡೆಸಿದ ಅವರು, ಕೋವಿಡ್‌ ಸೇರಿ ಯಾವುದೇ ವೈರಾಣು ಜ್ವರದ ಲಕ್ಷಣಗಳಿದ್ದರೂ ತಪಾಸಣೆಗೆ ಒಳಪಡಿಸುವಂತೆ ಸೂಚಿ ಸಿದ್ದು, ಹೆಚ್ಚುವರಿ ಆರ್‌ಟಿಪಿಸಿಆರ್‌ ಕಿಟ್‌ಗಳ ಖರೀದಿಗೂ ಆದೇಶಿಸಲಾಗಿದೆ ಎಂದರು.

ಕೇರಳದಲ್ಲಿ ಕೋವಿಡ್‌ ಉಪತಳಿ ಪ್ರಕರಣ ದಿನೇದಿನೆ ಹೆಚ್ಚುತ್ತಿದೆ. ರಾಜ್ಯ ದಲ್ಲೂ 58 ಸಕ್ರಿಯ ಪ್ರಕರಣಗಳಿವೆ. 47 ಮಂದಿ ಹೋಮ್‌ ಐಸೋಲೇಶನ್‌ನಲ್ಲಿದ್ದಾರೆ. 11 ಮಂದಿ ಆಸ್ಪತ್ರೆಯಲ್ಲಿದ್ದು, ಈ ಪೈಕಿ 5 ಮಂದಿ ಜನರಲ್‌ ವಾರ್ಡ್‌ನಲ್ಲಿ ಹಾಗೂ 6 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್‌ ತಿಂಗಳಲ್ಲಿ 64 ವರ್ಷದ ಒಬ್ಬರು ಕೋವಿಡ್‌ ಮತ್ತು ಬಹುಸಹವರ್ತಿ ಕಾಯಿಲೆಗಳಿಂದ ಬೆಂಗಳೂರಿನಲ್ಲಿ ಮೃತ ಪಟ್ಟಿರುವ ವರದಿಯಾಗಿದೆ. 2 ತಿಂಗಳಿಂ ದೀಚೆಗೆ ಸಾವು ಸಂಭವಿಸಿಲ್ಲ. ಆದರೆ ಸಾಂಕ್ರಾಮಿಕ ಕಾಯಿಲೆಗಳು ಅದರಲ್ಲೂ ಐಎಲ್‌ಐ, ಸಾರಿಯಂತಹ ವೈರಾಣು ಜ್ವರ ಕಾಣಿಸಿಕೊಳ್ಳುತ್ತಿದ್ದು, ಅಂಥವರಿಗೂ ಕೋವಿಡ್‌ ಪರೀಕ್ಷೆ ಮಾಡುತ್ತೇವೆ. ಪ್ರಮುಖ ವಾಗಿ ಎಲ್ಲ ಸರಕಾರಿ ಮತ್ತು ಖಾಸಗಿ ಆಸ್ಪತ್ರೆ ಗಳಲ್ಲಿ ಎಲ್ಲ ಎಸ್‌ಎಆರ್‌ಐ (ಸಾರಿ) ಪ್ರಕರಣ ಹಾಗೂ 20ರಲ್ಲಿ 1 ಐಎಲ್‌ಐ ಪ್ರಕರಣ ಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಚಿಸಿದೆ.

ಪರೀಕ್ಷೆ, ಚಿಕಿತ್ಸಾ ಪರಿಕರಗಳಲಭ್ಯತೆ ಖಚಿತಪಡಿಸಿಕೊಳ್ಳಿ ನಮ್ಮಲ್ಲಿ 30 ಸಾವಿರ ಆರ್‌ಟಿಪಿಸಿಆರ್‌ ಕಿಟ್‌ಗಳಿದ್ದು, 1 ತಿಂಗಳಿಗೆ ಕನಿಷ್ಠ 3 ಲಕ್ಷ ಕಿಟ್‌ ಅಗತ್ಯವಿದೆ. ಇದಕ್ಕಾಗಿ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಡಿ.14 ರಿಂದ 18ರ ವರೆಗೆ ಮಾಕ್‌ಡ್ರಿಲ್‌ ನಡೆಸಲು ಸೂಚಿಸಲಾಗಿದೆ. ಡಿ.19ರಂದು ಎಲ್ಲದರ ವಿವರ ಸಲ್ಲಿಸಲು ನಿರ್ದೇಶನ ನೀಡಿದರು.

ಕಿಟ್‌ ಖರೀದಿಗೆ ಟೆಂಡರ್‌
ಸರಕಾರಿ ಆಸ್ಪತ್ರೆಗಳಿಗೆ ಮುಂದಿನ 3 ತಿಂಗಳಿಗೆ ಬೇಕಾಗುವಷ್ಟು ಆರ್‌ಟಿಪಿಸಿಆರ್‌ ಕಿಟ್‌, ಆರ್‌ಎಟಿ ಕಿಟ್‌, ವಿಟಿಎಂಗಳನ್ನು ಸರ ಬರಾಜು ಮಾಡುವಂತೆ ರಾಜ್ಯ ವೈದ್ಯಕೀಯ ಸರಬರಾಜುಗಳ ನಿಗಮ (ಕೆಎಸ್‌ಎಂಎಸ್‌ಸಿಎಲ್‌)ಗೆ ಆದೇಶ ಮಾಡಲಾಗಿದ್ದು, ಆಕ್ಸಿಜನ್‌, ಐಸಿಯು ಹಾಸಿಗೆ, ಔಷಧಿ, ಮಾಸ್ಕ್ ಇತ್ಯಾದಿ ಇಲ್ಲ ಎನ್ನಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.

ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ
ಪ್ರಸ್ತುತ ಕೋವಿಡ್‌ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತಿದೆ. ಈ ಹಿಂದೆ ಇದಕ್ಕೆಂದೇ ಬೆಂಗಳೂರು ವೈದ್ಯಕೀಯ ಕಾಲೇಜಿನ ಎಚ್‌ಒಡಿ ಡಾ| ರವಿ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ರಚಿಸಿದ್ದು, ಡಿ.19ರ ಮಂಗಳವಾರದಂದು ಸಮಿತಿ ಸಭೆ ನಡೆಸಿ ಮುಂದಿನ ನಿರ್ಣಯಗಳನ್ನು ಕೈಗೊಳ್ಳುವುದಾಗಿ ಸಚಿವರು ಹೇಳಿದರು.

ಕೇರಳದಿಂದ ಬರುವ ಎಲ್ಲರನ್ನೂ, ವಿಮಾನ ನಿಲ್ದಾಣ, ರೈಲು ನಿಲ್ದಾಣದಿಂದ ಬರುವ ಎಲ್ಲರನ್ನೂ ಪರೀಕ್ಷೆ ಮಾಡಲು ಹಾಗೂ ಈಗಲೇ ಗಡಿ ಮುಚ್ಚಲು ನಿರ್ಧರಿಸಿಲ್ಲ. ಆತಂಕಪಡಬೇಡಿ. ಎಚ್ಚರಿಕೆಯಿಂದ ಇರೋಣ. ಹಿಂದೆ ಅನುಭವ ಆಗಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
-ದಿನೇಶ್‌ ಗುಂಡೂರಾವ್‌, ಸಚಿವ

ಭ್ರೂಣ ಹತ್ಯೆ ತಡೆಗೆ 1 ವಾರದಲ್ಲಿ ಟಾಸ್ಕ್ಫೋರ್ಸ್‌ ರಚನೆ
ಬೆಂಗಳೂರು: ಭ್ರೂಣಹತ್ಯೆ ಪ್ರಕರಣಗಳ ನಿಗ್ರಹ ಹಾಗೂ ನಿರ್ವಹಣೆಗಾಗಿ ಆರೋಗ್ಯ ಮತ್ತು ಪೊಲೀಸ್‌ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ (ಟಾಸ್ಕ್ ಫೋರ್ಸ್‌) ರಚಿಸಲು ನಿರ್ಧರಿಸಿದ್ದು, ಕಾನೂನಿನಲ್ಲೂ ಅಗತ್ಯ ಬದಲಾವಣೆ ತರುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಶನಿವಾರ ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಭ್ರೂಣಹತ್ಯೆ ಪ್ರಕರಣಗಳನ್ನು ನಮ್ಮ ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರ ವಹಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

1 ಲಕ್ಷ ರೂ. ಬಹುಮಾನ
ಭ್ರೂಣಹತ್ಯೆ ಪ್ರಕರಣ ಸಂಬಂಧ ಸಾರ್ವಜನಿಕರು ನೀಡುವ ಮಾಹಿತಿಯೂ ಸಹಿತ ಎಲ್ಲದರ ಕಡೆಗೂ ಕಾರ್ಯಪಡೆ ನಿಗಾ ವಹಿಸಬೇಕು. ಭ್ರೂಣಹತ್ಯೆ ಕುರಿತ ನಿರ್ದಿಷ್ಟ ಮತ್ತು ಸ್ಪಷ್ಟ ಮಾಹಿತಿ ನೀಡುವ ಸಾರ್ವಜನಿಕರಿಗೆ ಪ್ರಸ್ತುತ 50 ಸಾವಿರ ರೂ. ಬಹುಮಾನ ನೀಡುತ್ತಿದ್ದು, ಇದನ್ನು 1 ಲಕ್ಷ ರೂ.ಗೆ ಏರಿಕೆ ಮಾಡುವ ಚಿಂತನೆಯೂ ಇದೆ. ಮುಂದಿನ ವಾರದಲ್ಲಿ ಈ ಕುರಿತ ಆದೇಶ ಹೊರಬೀಳಲಿದೆ ಎಂದರು.

ವೈದ್ಯರಿಗೆ ಜಾಮೀನು
ಬೈಯಪ್ಪನಹಳ್ಳಿ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ವೈದ್ಯರಿಗೆ ಜಾಮೀನು ಸಿಕ್ಕಿದೆ. ಅಷ್ಟೇ ಅಲ್ಲದೆ, ಇಲಾಖೆಯ ಕ್ರಮಕ್ಕೂ ಈ ವೈದ್ಯರು ತಡೆಯಾಜ್ಞೆ ತಂದಿದ್ದಾರೆ ಎಂದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.