Benefits Of Basil Leaves ; ತುಳಸಿ ಎಲೆಯ ಉಪಯೋಗಗಳು

ಆಯುರ್ವೇದದ ಹಲವು ಕೆಮ್ಮಿನ ಔಷಧಗಳಲ್ಲಿ ತುಳಸಿ ಮುಖ್ಯವಾದುದು

Team Udayavani, Jun 21, 2023, 5:00 PM IST

tulasi

ಧಾರ್ಮಿಕ ಕಾರ್ಯಗಳ ಪೂಜೆಗಳಲ್ಲಿ ತುಳಸಿಗೆ ಮೊದಲ ಸ್ಥಾನ. ಶುದ್ಧತೆಯ ಸಂಕೇತವಾಗಿ ತುಳಸಿಯನ್ನು ಹೆಚ್ಚಾಗಿಯೇ ಬಳಸುತ್ತಾರೆ. ಪೂಜೆಗಳಲ್ಲಿ ಮಾತ್ರವಲ್ಲದೇ ತುಳಸಿಯು ಔಷಧೀಯ ಸಸ್ಯವಾಗಿಯೂ ಹಲವಾರು ಉಪಯೋಗಗಳಿವೆ. ಆಯುರ್ವೇದದಲ್ಲಿ ಇದನ್ನು ಅಮೂಲ್ಯ ಸಸ್ಯವೆಂದು ಪರಿಗಣಿಸಿ, ಎಲೆ, ತೊಗಟೆ, ಬೇರನ್ನು ವಿವಿಧ ಕಾಯಿಲೆಗಳಿಗೆ ಔಷಧವಾಗಿ ಬಳಸಲಾಗುತ್ತದೆ.

ತುಳಸಿ ಸಾಮಾನ್ಯ ಎಲ್ಲರ ಮನೆಯಲ್ಲೂ ಬೆಳೆಯುವ ಸಸ್ಯಗಳಲ್ಲಿ ಒಂದು. ಈ ಗಿಡವನ್ನು ಮನೆಯ ಮುಂದುಗಡೆ ಬೆಳೆಸುವುದರಿಂದ ಮನೆಯವರೆಲ್ಲರಿಗೂ ಒಳಿತಾಗುತ್ತದೆ ಎಂಬ ನಂಬಿಕೆ ಇದೆ. ಇದರ ಗಾಳಿಯೂ ದೇಹಕ್ಕೆ, ಆರೋಗ್ಯಕ್ಕೆ ಒಳ್ಳೆಯದು. ಆಯುರ್ವೇದದಲ್ಲಿ ತುಳಸಿಯನ್ನು ಹಲವಾರು ಸಮಸ್ಯೆಗಳಿಗೆ ಬೇರೆ ಬೇರೆ ಸಸ್ಯಗಳ ಜೊತೆ ಬೆರೆಸಿ ಔಷಧಿಗಳನ್ನು ತಯಾರಿಸುತ್ತಾರೆ. ಆಯುರ್ವೇದದ ಹಲವು ಕೆಮ್ಮಿನ ಔಷಧಗಳಲ್ಲಿ ತುಳಸಿ ಮುಖ್ಯವಾದುದು.

ತುಳಸಿ ಸಸ್ಯದ ಆರೋಗ್ಯಕರ ಉಪಯೋಗಗಳು ಏನೆಂದರೆ..

ಕಿಡ್ನಿಯಲ್ಲಿ ಕಲ್ಲು:

ತುಳಸಿ ರಸದೊಂದಿಗೆ ಜೇನುತುಪ್ಪ ಬೆರೆಸಿ ಪ್ರತಿನಿತ್ಯ 6 ತಿಂಗಳವರೆಗೆ ತೆಗೆದುಕೊಂಡರೆ ಸಮಸ್ಯೆ ಪರಿಹಾರವಾಗುತ್ತದೆ.

ಸಾಮಾನ್ಯ ಜ್ವರ ಹಾಗೂ ಶೀತ, ಕೆಮ್ಮು:

ಮಳೆಗಾಲದಲ್ಲಿ ಬರುವ ಜ್ವರ, ಕೆಮ್ಮು, ಶೀತಕ್ಕೆ ತುಳಸಿ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯಬೇಕು. ಮಲೇರಿಯಾ, ಡೆಂಗ್ಯೂ ಜ್ವರವನ್ನು ಕೂಡಾ ನಿವಾರಿಸುತ್ತದೆ. ತುಳಸಿ ರಸ ಜ್ವರ ಕಡಿಮೆ ಮಾಡುವುದಕ್ಕೆ  ಸಹಕಾರಿ. ಇದರ ಎಲೆ ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗಲು ಸಹಾಯ ಮಾಡುತ್ತದೆ.

ತೀವ್ರವಾದ ಜ್ವರವಿದ್ದರೆ ತುಳಸಿ ಎಲೆಗಳು, ಏಲಕ್ಕಿ ಪುಡಿಯನ್ನು ಅರ್ಧ ಲೀಟರ್ ನೀರಿಗೆ ಹಾಕಿ ಕುದಿಸಿ ಅದರೊಂದಿಗೆ ಹಾಲು, ಸಕ್ಕರೆ ಸೇರಿಸಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ.

ಹುರಿದ ಲವಂಗವನ್ನು ತುಳಸಿ ಎಲೆಯ ಜೊತೆ ಸೇವಿಸಿದರೆ ಎಲ್ಲ ತರಹದ ಕೆಮ್ಮು ನಿವಾರನೆಯಾಗುತ್ತದೆ.

ಗಂಟಲು ನೋವು:

ತುಳಸಿಯಿಂದ ತಯಾರಿಸಿದ ಕಷಾಯವನ್ನು ಕುಡಿಯಲು ಹಾಗೂ ಬಾಯಿ ಮುಕ್ಕಳಿಸಲು ಬಳಸುವುದರಿಂದ ಗಂಟಲು ನೋವು ಗುಣಮುಖವಾಗುತ್ತದೆ.

ಜ್ಞಾಪಕ ಶಕ್ತಿ ಹೆಚಿಸಲು:

ತುಳಸಿ ಎಲೆಗಳು ನರಗಳ ಟಾನಿಕ್ ನಂತೆ ಕೆಲಸ ಮಾಡುತ್ತದೆ. ಐದು ತುಳಸಿ ಎಲೆಯನ್ನು ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಪ್ರತಿದಿನ ಇದರ ಸೇವನೆಯಿಂದ ಜ್ಞಾಪಕಶಕ್ತಿ ಹೆಚ್ಚಾಗಿ ಬುದ್ಧಿವಂತಿಕೆ ಚುರುಕುಗೊಳ್ಳುತ್ತದೆ. ವಯಸ್ಸಾದವರು ತುಳಸಿ ಸೇವಿಸಿದರೆ ಸುಸ್ತು ಕಡಿಮೆಯಾಗುತ್ತದೆ.

ತ್ವಚೆಯ ಸೌಂದರ್ಯ:

ಹೊಳೆಯುವ ತ್ವಚೆಗೆ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ರಸವನ್ನು ನೀರಿನೊಂದಿಗೆ ಬೆರೆಸಿ ಸೇವಿಸಬೇಕು. ತ್ವಚೆಯ ಸಾಂದ್ರತೆ ಹೆಚ್ಚಾಗುತ್ತದೆ. ತುಳಸಿ ಪುಡಿಯನ್ನು ಮುಖಕ್ಕೆ ಫೇಶಿಯಲ್‌ ನಂತೆಯೂ ಬಳಸುತ್ತಾರೆ. ಇದರಿಂದ ಕಪ್ಪುಕಲೆ, ಸುಕ್ಕು ಕಡಿಮೆಯಾಗಿ ಚರ್ಮ ತಾಜಾತನದಿಂದ ಹೊಳೆಯುತ್ತದೆ.

ಒತ್ತಡ ನಿಯಂತ್ರಣ:

ತುಳಸಿ ಎಲೆ ಸೇವನೆ ಒತ್ತಡ ಕಡಿಮೆಗೊಳಿಸುತ್ತದೆ. ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಳ:

ಆರೋಗ್ಯವಂತರೂ ಕೂಡಾ ನಿತ್ಯ ತುಳಸಿ ಎಲೆಗಳನ್ನು ದಿನಕ್ಕೆರಡು ಬಾರಿ ಸೇವಿಸಬೇಕು. ಇದು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.

ಚಿಕ್ಕ ಮಕ್ಕಳ ಆರೋಗ್ಯ ಸಮಸ್ಯೆಗೆ:

ಚಿಕ್ಕಮಕ್ಕಳಲ್ಲಿ ಪದೆ ಪದೆ ಕಾಣಿಸಿಕೊಳ್ಳುವ ನೆಗಡಿ, ಜ್ವರ, ವಾಂತಿ, ಭೇದಿ ಎಲ್ಲದಕ್ಕೂ ತುಳಸಿ ರಸ ಸಹಾಯಕವಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1

ಬಚ್ಚನ್, ಮೋಹನ್‌ಲಾಲ್‌ ನಂತಹ 20 ಸ್ಟಾರ್ಸ್‌ಗಳಿದ್ದರೂ ಅತ್ಯಂತ ಹೀನಾಯವಾಗಿ ಸೋತ ಸಿನಿಮಾವಿದು..

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

ಹದಿ ಹರೆಯದ ಪ್ರೀತಿಗಿರಲಿ ಒಂದು ಎಲ್ಲೇ: ರಾಧಾಕೃಷ್ಣರ ನಿಷ್ಕಾಮ ಪ್ರೀತಿಯೇ ಸಾಕ್ಷಿ…

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

Rajat: 3 ವರ್ಷದ ಹಿಂದೆ ಅನ್‌ ಸೋಲ್ಡ್.. ಈಗ ಆರ್‌ಸಿಬಿ ನಾಯಕ: ರಜತ್‌ ಕ್ರಿಕೆಟ್‌ ಪಯಣವೇ ರೋಚಕ

ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

ಅಳಿವಿನಂಚಿನ ಚಿಪ್ಪು ಹಂದಿ (ಪ್ಯಾಂಗೋಲಿನ್‌)ಯ ಕಳ್ಳಸಾಗಣೆ, ಬೇಟೆ ಹಿಂದಿದೆ ಬೃಹತ್‌ ಮಾಫಿಯಾ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.