Ind V/s Zim: ಜಿಂಬಾಬ್ವೆಯಲ್ಲಿ ಟಿ20 ಸರಣಿ- ಜುಲೈಯಲ್ಲಿ ಟೀಮ್ ಇಂಡಿಯಾ ಪ್ರವಾಸ
Team Udayavani, Feb 6, 2024, 10:50 PM IST
ಜಿಂಬಾಬ್ವೆ: ಜುಲೈ ತಿಂಗಳಲ್ಲಿ ಪ್ರವಾಸಿ ಭಾರತದ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನು ಆಯೋಜಿಸಲು ಜಿಂಬಾಬ್ವೆ ನಿರ್ಧರಿಸಿದೆ. ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮಂಗಳವಾರ ಇದರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಟಿ20 ಸರಣಿ ಜುಲೈ 6ರಿಂದ 14ರ ತನಕ ನಡೆಯಲಿದೆ. ಜು. 6, 7, 10, 13 ಮತ್ತು 14ರಂದು ಈ ಸರಣಿ ನಡೆಯಲಿದೆ. ಎಲ್ಲ ಪಂದ್ಯಗಳನ್ನು ಹರಾರೆಯಲ್ಲಿ ಆಡಲಾಗುವುದು.
“ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಮತ್ತು ಬಿಸಿಸಿಐ ನಡುವಿನ ಮಾತುಕತೆ ಬಳಿಕ ಈ ದ್ವಿಪಕ್ಷೀಯ ಸರಣಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಭಾರತದೆದುರಿನ ಸರಣಿಯನ್ನು ನಡೆಸುವುದೊಂದು ರೋಮಾಂಚಕಾರಿ ಅನುಭವ. ಇದು ತವರಿನ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ವಿಶೇಷ ಆಕರ್ಷಣೆ ಆಗಿರಲಿದೆ’ ಎಂಬುದಾಗಿ ಜಿಂಬಾಬ್ವೆ ಕ್ರಿಕೆಟ್ ಮಂಡಳಿ ಅಧ್ಯಕ್ಷ ಟವೆಂಗ ಮುಕುಲಾನಿ ಹೇಳಿದ್ದಾರೆ.
“ಬಿಸಿಸಿಐ ಜಾಗತಿಕ ಕ್ರಿಕೆಟ್ ಸಮುದಾಯಕ್ಕೆ ಮುಂಚೂಣಿಯಲ್ಲಿ ನಿಂತು ಕೊಡುಗೆ ಸಲ್ಲಿಸಿದೆ. ಜಿಂಬಾಬ್ವೆ ಕ್ರಿಕೆಟ್ ಪುನರುತ್ಥಾನಕ್ಕೆ ಇದು ಸಕಾಲ. ಅದಕ್ಕೆ ನಮ್ಮ ಸಹಾಯ ಸದಾ ಲಭಿಸಲಿದೆ’ ಎಂಬುದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ.
ಇಂಥ ದ್ವಿಪಕ್ಷೀಯ ಸರಣಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಇದನ್ನು ಆರ್ಥಿಕವಾಗಿ ಸಬಲಗೊಳಿಸುವುದೂ ಬಿಸಿಸಿಐ ಉದ್ದೇಶ ಎಂಬುದಾಗಿ ಜಯ್ ಶಾ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.