“ಜೀವವೈವಿಧ್ಯ ರಕ್ಷಣೆಯಲ್ಲಿ ಭಾರತ ಮುಂದಿದೆ” : ಪ್ರಧಾನಿ ನರೇಂದ್ರ ಮೋದಿ
Team Udayavani, Jul 28, 2023, 9:23 PM IST
ನವದೆಹಲಿ: ಜೀವವೈವಿಧ್ಯತೆಯ ಸಂರಕ್ಷಣೆ, ಪುನಃಸ್ಥಾಪನೆ ಹಾಗೂ ಪರಿಸರ ಕಾಳಜಿಯಲ್ಲಿ ಭಾರತ ಸದಾ ಮುಂಚೂಣಿಯಲ್ಲಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ನಿಗದಿ ಪಡಿಸಿರುವ ಸಮಯಕ್ಕೂ ಮುಂಚೆಯೇ ಕೊಡುಗೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರತಿಪಾದಿಸಿದ್ದಾರೆ.
ಜಿ20 ಪರಿಸರ ಹಾಗೂ ಹವಾಮಾನ ಸುಸ್ಥಿರತೆ ಸಚಿವರ ಸಭೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡು, ಪ್ರಧಾನಿ ಮಾತನಾಡಿದ್ದಾರೆ. ಈ ವೇಳೆ ಜೀವವೈವಿಧ್ಯತೆ ಸಂರಕ್ಷಣೆಗೆ ಭಾರತದ ಮಹತ್ತರ ಕೊಡುಗೆ ಇದೆ ಎಂಬುದು ನನಗೆ ಹೆಮ್ಮೆಯ ವಿಚಾರ ಎಂದಿದ್ದಾರೆ.
ಅಲ್ಲದೇ, ಪಳೆಯುಳಿಕೆರಹಿತ ಇಂಧನ ಮೂಲಗಳಿಂದ ಸ್ಥಾಪಿತ ವಿದ್ಯುತ್ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದ್ದಲ್ಲದೇ, 2030ಕ್ಕೆ ನೀಡಿದ್ದ ಗಡುವಿಗಿಂತ 9 ವರ್ಷಕ್ಕೆ ಮುಂಚೆಯೇ ಗುರಿ ತಲುಪಿದ್ದೇವೆ. ಇಂದು ಜಗತ್ತಿನಲ್ಲಿ ನವೀಕರಿಸಬಹುದಾದ ಇಂಧನ ಸಾಮರ್ಥ್ಯವಿರುವ ಅಗ್ರ 5 ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.