India:ಪ್ರತಿಯೊಬ್ಬರಿಗೂ ಡಿಜಿಟಲ್ ತಂತ್ರಜ್ಞಾನ ಕಲ್ಪಿಸಲು ಭಾರತ ಯಶಸ್ವಿ:ಅಶ್ವಿನಿ ವೈಷ್ಣವ್
Team Udayavani, Aug 18, 2023, 10:05 PM IST
ಬೆಂಗಳೂರು: ತಂತ್ರಜ್ಞಾನ ಕ್ರಾಂತಿ ದೇಶದ ಸಾಮಾಜಿಕ ಜೀವನದಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿದೆ. ಎಲ್ಲರನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿ ಇದರಿಂದ ಸಾಧ್ಯವಾಗುತ್ತಿದೆ ಎಂದು ಕೇಂದ್ರದ ರೈಲ್ವೆ, ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಜಿ – 20 ಡಿಜಿಟಲ್ ಇನ್ನೋವೇಶನ್ ಅಲಯನ್ಸ್ ಶೃಂಗಸಭೆಯ ಎರಡನೇ ದಿನವಾದ ಶುಕ್ರವಾರ ನವೋದ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.
ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆಯ ಕಲಾಪಗಳು ಕೇವಲ ಉಪನ್ಯಾಸಗಳಿಗೆ ಸೀಮಿತವಾಗದೆ ಇಂತಹ ಹಲವು ವೇದಿಕೆಗಳ ಮೂಲಕ ಪ್ರತಿಭಾವಂತರಿಗೆ ಅವಕಾಶ ನೀಡುವ ಕೆಲಸ ಆಗುತ್ತಿದೆ. ಯುಪಿಐ ಮತ್ತು ಆಧಾರ್ ನಂತಹ ವೇದಿಕೆಗಳ ಮೂಲಕ ಡಿಜಿಟಲ್ ತಂತ್ರಜ್ಞಾನದ ಲಾಭ ಪ್ರತಿಯೊಬ್ಬರಿಗೂ ದೊರೆಯುವಂತೆ ಮಾಡಲು ಭಾರತ ಯಶಸ್ವಿ ಆಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ನವೋದ್ಯಮಗಳಲ್ಲಿರುವ ವಿಶ್ವಾಸ, ಸಾಮರ್ಥ್ಯಗಳಿಂದಾಗಿ ಭಾರತವನ್ನು ಇಂದು ಜಾಗತಿಕವಾಗಿ ಗುರುತಿಸಲಾಗುತ್ತಿದೆ. ಕಳೆದ ಒಂದು ದಶಕದಲ್ಲಿ ಈ ಕ್ಷೇತ್ರ ಅಭೂತಪೂರ್ವವಾಗಿ ಬೆಳೆದು ವಾಸ್ತವಿಕ ಸಮಸ್ಯೆಗಳಿಗೆ ತಂತ್ರಜ್ಞಾನದ ಪರಿಹಾರ ಒದಗಿಸುತ್ತಿವೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.
ಹತ್ತು ವರ್ಷಗಳ ಹಿಂದೆ ಸುಮಾರು 500 ನವೋದ್ಯಮ ಗಳಿದ್ದವು. ಈಗ ಅವುಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ದೇಶದಲ್ಲಿ ನವೋದ್ಯಮ ಚಿಂತನೆ ಗಡಿ ಮೀರಿ ಬೆಳೆದಿದೆ. ದೇಶದ ನವೋದ್ಯಮಗಳು ವಿದೇಶಗಳ ಸಮಸ್ಯೆಗಳಿಗೆ ಪರಿಹಾರ ನೀಡುತ್ತಿವೆ. ದೇಶದ ಸಮಸ್ಯೆಗಳಿಗೂ ಅವು ಪರಿಹಾರ ರೂಪಿಸಬೇಕು. ಬೆಂಗಳೂರು ನವೋದ್ಯಮಗಳ ತವರೂರು. ಇಲ್ಲಿಂದಲೇ ಸ ಪ್ರಯತ್ನಗಳು ಆರಂಭವಾಗಬೇಕು ಎಂದು ಸಚಿವರು ಹೇಳಿದರು.
ಇಂದು ಜಿ-20 ಸಚಿವರ ಸಭೆ: ಶನಿವಾರ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಜಿ – 20 ದೇಶಗಳ ಡಿಜಿಟಲ್ ಇಕಾನಾಮಿ ಸಚಿವರ ಸಭೆ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅಶ್ವಿನಿ ವೈಷ್ಣವ್ ಅವರು ಸಭೆಯನ್ನು ಉದ್ಘಾಟಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.