ಅಗ್ನಿವೀರರ ನೇಮಕಾತಿ ವಿಧಾನದಲ್ಲಿ ಪರಿಷ್ಕರಣೆ; 3 ಹಂತಗಳಲ್ಲಿ ನಡೆಯಲಿದೆ ನೇಮಕ
ದೈಹಿಕ ಪರೀಕ್ಷೆಗೂ ಮೊದಲೇ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ
Team Udayavani, Feb 19, 2023, 7:25 AM IST
ನವದೆಹಲಿ: ಜೂನಿಯರ್ ಕಮಿಷನ್ಡ್ ಅಧಿಕಾರಿಗಳು, ಇತರೆ ರ್‍ಯಾಂಕ್ ಸೇರಿದಂತೆ ಅಗ್ನಿವೀರರ ನೇಮಕಾತಿಯ ಕಾರ್ಯವಿಧಾನದಲ್ಲಿ ಭಾರತೀಯ ಸೇನೆ ಪರಿಷ್ಕರಣೆ ಮಾಡಿದೆ.
ಪರಿಷ್ಕೃತ ವಿಧಾನದ ಪ್ರಕಾರ, 3 ಹಂತಗಳಲ್ಲಿ ನೇಮಕಾತಿ ನಡೆಯುತ್ತದೆ. ಮೊದಲಿಗೆ, ಕಂಪ್ಯೂಟರ್ ಆಧಾರಿತ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಇ) ನಡೆಸಲಾಗುತ್ತದೆ. ನಂತರ ದೈಹಿಕ ಕ್ಷಮತೆ ಪರೀಕ್ಷೆ ನಡೆಸಲಾಗುತ್ತದೆ. ನೇಮಕಾತಿಗಾಗಿ ಅರ್ಜಿ ಸಲ್ಲಿಕೆಗೆ 2023ರ ಫೆ.16ರಿಂದ ಮಾ.15ರವರೆಗೆ ಅವಕಾಶ ಇದೆ.
ಸೇನೆಯ ವೆಬ್‌ಸೈಟ್ http://http://www.joinindianarmy.nic.in ಮೂಲಕ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಇ) ಬರೆಯಬೇಕಾಗುತ್ತದೆ.
ಎರಡನೇ ಹಂತದಲ್ಲಿ, ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಆಯಾ ಸೇನಾ ನೇಮಕಾತಿ ಕಚೇರಿಗಳು ನಿರ್ಧರಿಸಿದ ಸ್ಥಳದಲ್ಲಿ ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ದೈಹಿಕ ಅಳತೆ ಪರೀಕ್ಷೆ ನಡೆಸಲಾಗುತ್ತದೆ. ಅಂತಿಮವಾಗಿ ಮೂರನೇ ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕಾಗುತ್ತದೆ. 2023ರ ಏ.17ರಿಂದ 30ರ ನಡುವೆ ದೇಶಾದ್ಯಂತ ಸುಮಾರು 180 ಪರೀಕ್ಷಾ ಕೇಂದ್ರಗಳಲ್ಲಿ ಸಿಇಇ ನಡೆಯಲಿದೆ.
ಅರ್ಜಿ ಸಲ್ಲಿಸಲು ಪ್ರತಿ ಅಭ್ಯರ್ಥಿಗೆ 500 ರೂ. ಶುಲ್ಕವಿದ್ದು, ವೆಚ್ಚದ ಶೇ.50ರಷ್ಟನ್ನು ಸೇನೆಯೇ ಭರಿಸಲಿದೆ. ಅರ್ಜಿ ಸಲ್ಲಿಕೆ ಸಮಯದಲ್ಲಿ ಅಭ್ಯರ್ಥಿಗಳು 250 ರೂ. ಮಾತ್ರ ಪಾವತಿಸಬೇಕಾಗುತ್ತದೆ. ಅಭ್ಯರ್ಥಿಗಳು ಸಿಇಇ ಪರೀಕ್ಷೆ ಬರೆಯಲು ಐದು ಸ್ಥಳಗಳ ಆಯ್ಕೆ ಮಾಡಬಹುದಾಗಿದೆ ಎಂದೂ ಸೇನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.