ಶೇ.7.3ರ ದರದಲ್ಲಿ ಭಾರತದ ಅರ್ಥ ವ್ಯವಸ್ಥೆ ಬೆಳವಣಿಗೆ: ವಿಶ್ವಸಂಸ್ಥೆ
Team Udayavani, Jan 26, 2021, 8:20 PM IST
ವಿಶ್ವಸಂಸ್ಥೆ: ಭಾರತದ ಅರ್ಥ ವ್ಯವಸ್ಥೆ ಪ್ರಸಕ್ತ ವರ್ಷ ಶೇ.7.3ರ ಪ್ರಮಾಣದಲ್ಲಿ ಬೆಳವಣಿಗೆ ಸಾಧಿಸಲಿದೆ ಎಂದು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ವಿಭಾಗ ಸಿದ್ಧಪಡಿಸಿದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಕಳೆದ ವರ್ಷಕ್ಕೆ ಸಂಬಂಧಿಸಿದಂತೆ ಅರ್ಥ ವ್ಯವಸ್ಥೆ ಶೇ.9.6ರಷ್ಟು ಕುಸಿಯಲಿದೆ ಎಂದು ಭವಿಷ್ಯ ನುಡಿದಿತ್ತು. ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕ ಚಟುವಟಿಕೆಗಳು ಸ್ತಬ್ದಗೊಂಡಿದ್ದರಿಂದ ಈ ಬೆಳವಣಿಗೆಯಾಗಿತ್ತು ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.
2019ರಲ್ಲಿ ಭಾರತದ ಅರ್ಥ ವ್ಯವಸ್ಥೆ ಶೇ.4.7ರ ದರದಲ್ಲಿ ಬೆಳವಣಿಗೆ ಕಂಡಿತ್ತು. ಅದು 2020ರಲ್ಲಿ ಶೇ.9.6ರಷ್ಟು ಕುಸಿತ ಕಂಡಿತ್ತು. ಲಾಕ್‌ಡೌನ್ ಮತ್ತು ಇತರ ನಿಯಂತ್ರಣ ಕ್ರಮಗಳಿಂದಾಗಿ ಅರ್ಥ ವ್ಯವಸ್ಥೆ ಸ್ಥಗಿತಗೊಂಡಿದ್ದರಿಂದ ಹೀಗಾಗಿದೆ. ಪ್ರಸಕ್ತ ವರ್ಷದೇಶದ ಅರ್ಥ ವ್ಯವಸ್ಥೆ ಶೇ.7.3ರ ದರದಲ್ಲಿ ಬೆಳವಣಿಗೆ ಸಾಧಿಸಲಿದೆ. ಚೀನಾ ಶೇ.7.2ರ ಮಾದರಿಯಲ್ಲಿ ಅಭಿವೃದ್ಧಿ ಸಾಧಿಸಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ.
ಇದನ್ನೂ ಓದಿ:ರಫೇಲ್ ವಿರಾಟ ರೂಪ, ವೈವಿಧ್ಯತೆಯ ವೈಭವ : ಗಣರಾಜ್ಯ ಪರೇಡ್ ನಲ್ಲಿ ರಕ್ಷಣಾಪಡೆಗಳ ಬಲಪ್ರದರ್ಶನ
ಜಗತ್ತಿನ ಅರ್ಥ ವ್ಯವಸ್ಥೆ ಶೇ.4.3ರಷ್ಟು ಕಳೆದ ವರ್ಷ ಕುಸಿತ ಕಂಡಿತ್ತು. ಅದು 2009ರಲ್ಲಿ ಉಂಟಾಗಿದ್ದ ಕುಸಿತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಆಘಾತ ಉಂಟಾಗಿದೆ ಎಂದು ಹೇಳಿದೆ. ಪ್ರಸಕ್ತ ವರ್ಷ ಜಗತ್ತಿನಲ್ಲಿ ಶೇ.4.7ರ ಪ್ರಮಾಣದಲ್ಲಿ ಅದು ಚೇತರಿಕೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.