Canada ಬಿಟ್ಟು ಬೇರೆ ದೇಶಗಳತ್ತ ಮುಖ ಮಾಡಿದ ಭಾರತೀಯ ವಿದ್ಯಾರ್ಥಿಗಳು
Team Udayavani, Jan 18, 2024, 12:08 AM IST
ಹೊಸದಿಲ್ಲಿ: ಭಾರತ-ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಬೇರೆ ದೇಶಗಳತ್ತ ಮುಖ ಮಾಡಿದ್ದಾರೆ. ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಕೊಂಚ ಹಳಸಿದೆ. “ಸದ್ಯದ ಪರಿಸ್ಥಿತಿ ಹಾಗೂ ಕೆನಡಾದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಸೂಕ್ತ ಬೋಧಕ ಸಿಬ್ಬಂದಿ ಮತ್ತು ವಸತಿಯ ಕೊರತೆ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬೇರೆಡೆ ತೆರಳುತ್ತಿದ್ದಾರೆ’ ಎಂದು ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್‌ನ ರಾಜತಾಂತ್ರಿಕ ಅಧಿಕಾರಿ ಸಿ.ಜಿ.ಸುಬ್ರಮಣಿಯನ್ ಹೇಳಿದರು.
ಇನ್ನೊಂದೆಡೆ ಸಂದರ್ಶನವೊಂದರಲ್ಲಿ ಮಾತನಾಡಿದ ಕೆನಡಾ ವಲಸೆ ಸಚಿವ ಮಾರ್ಕ್ ಮಿಲ್ಲರ್, “ಕಳೆದ ವರ್ಷ ಮೂರನೇ ತ್ತೈಮಾಸಿಕದಲ್ಲಿ 1,08,940 ಭಾರತೀಯ ವಿದ್ಯಾರ್ಥಿಗಳಿಗೆ ವ್ಯಾಸಂಗ ಅನುಮತಿ ನೀಡಲಾಗಿದೆ. ಆದರೆ ಈ ಸಂಖ್ಯೆ ನಾಲ್ಕನೇ ತ್ತೈಮಾಸಿಕದಲ್ಲಿ ಶೇ.86ರಷ್ಟು ತಗ್ಗಿದ್ದು, 14,910 ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ ವ್ಯಾಸಂಗ ಅನುಮತಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.