GDP: ಭಾರತದ ಜಿಡಿಪಿ ಬೆಳವಣಿಗೆ ದರ ಶೇ.7.8ರಷ್ಟು ಏರಿಕೆ
-ಉಳಿದ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದ್ದೇ ಉತ್ತಮ ಸಾಧನೆ
Team Udayavani, Aug 31, 2023, 10:04 PM IST
ನವದೆಹಲಿ: 2023-24ರ ಏಪ್ರಿಲ್-ಜೂನ್ ತ್ತೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ದರವು ಶೇ.7.8ರಷ್ಟು ಏರಿಕೆ ಕಂಡಿದೆ. ಕಳೆದ ಹಣಕಾಸು ವರ್ಷದಲ್ಲಿ ಇದೇ ತ್ತೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರವು ಶೇ.13.1ರಷ್ಟು ಏರಿಕೆ ದಾಖಲಿಸಿತ್ತು. ಕೇಂದ್ರ ಸರ್ಕಾರದ ರಾಷ್ಟ್ರೀಯ ಅಂಕಿಅಂಶ ಕಚೇರಿಯು(ಎನ್‌ಎಸ್‌ಒ) ಈ ಕುರಿತ ದತ್ತಾಂಶವನ್ನು ಗುರುವಾರ ಬಿಡುಗಡೆಗೊಳಿಸಿದೆ.
ಈ ಹಣಕಾಸಿನ ಮೊದಲ ತ್ತೈಮಾಸಿಕದಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಉಳಿದಿದೆ. ಇದೇ ತ್ತೈಮಾಸಿಕದಲ್ಲಿ ಚೀನಾ ಜಿಡಿಪಿ ಬೆಳವಣಿಗೆ ದರವು ಶೇ.6.3ರಷ್ಟು ದಾಖಲಾಗಿದೆ. ಕಳೆದ ವರ್ಷ ಬ್ರಿಟನ್ ಅನ್ನು ಹಿಂದಿಕ್ಕಿ ಭಾರತವು ವಿಶ್ವದ ಐದನೇ ಬೃಹತ್ ಆರ್ಥಿಕತೆ ಹೊಂದಿರುವ ರಾಷ್ಟ್ರ ಎಂಬ ಹಿರಿಮೆಗೆ ಪಾತ್ರವಾಯಿತು.
2023-24ರ ಏಪ್ರಿಲ್-ಜೂನ್ ತ್ತೈಮಾಸಿಕದಲ್ಲಿ ಭಾರತದ ಹಣಕಾಸು, ರಿಯಲ್ ಎಸ್ಟೇಟ್ ಮತ್ತು ವೃತ್ತಿಪರ ಕ್ಷೇತ್ರಗಳಲ್ಲಿ ಜಿಡಿಪಿ ದರವು ಶೇ.12.2ರಷ್ಟು ದಾಖಲಾಗಿದೆ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಶೇ. 3.5ರಷ್ಟು ದಾಖಲಾಗಿದೆ. ಆದರೆ ಉತ್ಪಾದನಾ ವಲಯದಲ್ಲಿ ಜಿಡಿಪಿ ದರವು ಕ್ಷೇಣಿಸಿದೆ. ಕಳೆದ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಶೇ.6.1ರಷ್ಟು ದಾಖಲಾಗಿತ್ತು. ಆದರೆ ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಕೇವಲ ಶೇ. 4.7ರಷ್ಟು ದಾಖಲಾಗಿದೆ.
ಈ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಜಿಡಿಪಿ ಮೌಲ್ಯವು 70.67 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಕಳೆದ ಹಣಕಾಸು ವರ್ಷದ ಮೊದಲ ತ್ತೈಮಾಸಿಕದಲ್ಲಿ ಜಿಡಿಪಿ ಮೌಲ್ಯವು 65.42 ಲಕ್ಷ ಕೋಟಿ ರೂ. ಇತ್ತು ಎಂದು ದತ್ತಾಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.