ಕೈಗಾರಿಕೆ ಸ್ಥಾಪನೆ, ಮೆಟ್ರೋ ರೈಲು ವಿಸ್ತರಣೆ

ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಮುಂದೆ ಯೋಜನೆಗಳ ಅನುಷ್ಠಾನದ ಸಾಲು ಸಾಲು ಸವಾಲು

Team Udayavani, Aug 7, 2021, 3:46 PM IST

sudhakar

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ, ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ, ಆಹಾರ ಸಾಮಗ್ರಿಗಳ ಸಂಸ್ಕರಣ ಘಟಕಗಳು, ಡಿಸಿಸಿ ಬ್ಯಾಂಕ್‌, ಹಾಲು ಒಕ್ಕೂಟ ಪ್ರತ್ಯೇಕ ಸ್ಥಾಪನೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಮುಂದಿರುವ ಸವಾಲುಗಳು. ಎರಡನೇ ಬಾರಿಗೆ
ಜಿಲ್ಲಾ ಉಸ್ತುವಾರಿ ಸಚಿವ ಆಗಿರುವ ಡಾ.ಕೆ.ಸುಧಾಕರ್‌, ಮುಂದೆ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಅನೇಕ ಸವಾಲುಗಳಿದ್ದು,
ಅದನ್ನು ಸಮರ್ಥವಾಗಿ ನಿಭಾಯಿಸಿ ಬಲ್ಲರೇ ಎಂದು ಕುತೂಹಲ ಕೆರಳಿಸಿದೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜಸೇವಾ ಕಾರ್ಯಗಳ ಮೂಲಕ ರಾಜಕೀಯ ರಂಗದಲ್ಲಿ ಪ್ರವೇಶ ಮಾಡಿದ ಡಾ.ಕೆ.ಸುಧಾಕರ್‌, ಮೊದಲು ಕಾಂಗ್ರೆಸ್‌ ಪಕ್ಷದ ಮೂಲಕ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿ, ಬಳಿಕ ಬದಲಾದ ರಾಜಕೀಯ ಬೆಳವಣಿಗೆಗಳಿಂದ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡು ನಂತರ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯಗಳಿಸಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವರಾಗಿ ನೇಮಕಗೊಂಡು ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೊತೆಗೆ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಅನೇಕ ಸವಾಲು ಎದುರಿಸಿ ಪ್ರಥಮ ಹಂತದಲ್ಲಿ ನಿಭಾಯಿಸಿದ್ದಾರೆ.

ಹೊಸ ತಾಲೂಕಿಗೆ ಮೂಲ ಸೌಲಭ್ಯ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಂಚೇನಹಳ್ಳಿ, ಚೇಳೂರು ಹೋಬಳಿಗಳನ್ನು ತಾಲೂಕು ಕೇಂದ್ರಗಳಾಗಿ ಸರ್ಕಾರದಿಂದ ಘೋಷಣೆಯಾಗಿದೆ ಹೊರತು ಅದಕ್ಕೆ ಪೂರಕವಾಗಿ ಮೂಲ ಸೌಕರ್ಯಗಳು ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸವಾಲಾಗಿದೆ. ಈಗಾಗಲೇ ಮಂಚೇನಹಳ್ಳಿ ತಾಲೂಕಿನಲ್ಲಿ ಸಾರ್ವಜನಿಕ ಆಸ್ಪತ್ರೆ ನಿರ್ಮಾಣ, ತಾಯಿ ಮತ್ತು ಮಗುವಿನ ಆಸ್ಪತ್ರೆ
ಮಂಜೂರಾಗಿದೆ. ಆಡಳಿತಾತ್ಮಕವಾಗಿ ಸಾರ್ವಜನಿಕ ಸೇವೆಒದಗಿಸುವ ಸಲುವಾಗಿ ಮಿನಿ ವಿಧಾನಸೌಧವನ್ನು ನಿರ್ಮಾಣ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಚೇಳೂರು ಹೋಬಳಿ ತಾಲೂಕು ಕೇಂದ್ರವಾಗಿ ಘೋಷಣೆ ಮಾಡಲಾಗಿದೆ. ಆದರೆ, ಅಲ್ಲಿ ತಾಲೂಕು ಕೇಂದ್ರಕ್ಕೆ ಪೂರಕವಾಗಿ ನಕಾಶೆ ಬಿಡುಗಡೆ ಗಡಿ ಗುರುತಿಸುವಿಕೆ ಕಾರ್ಯ ಸಹ ಆಗಬೇಕಾಗಿದೆ.

ಇದನ್ನೂ ಓದಿ:ಪೌರಕಾರ್ಮಿಕರಿಗೆ ಸಿಹಿ ಹಂಚಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಚೇಳೂರು ತಾಲೂಕು ಘೋಷಣೆ ಆಗಿದೆ ಹೊರತು ಅದಕ್ಕೆ ಪೂರಕವಾಗಿ ಯಾವುದೇ ರೀತಿಯ ಕೆಲಸಗಳು ಆಗಿಲ್ಲ ಎಂಬುದು ಆಭಾಗದ ಜನರ ಆರೋಪವಾಗಿದೆ. ಇನ್ನೂಕೆಲವರುಕೆಲವೊಂದು ಹೋಬಳಿಗಳನ್ನು ಚೇಳೂರಿನಲ್ಲಿ ಸೇರಿಸಲು ಆಕ್ಷೇಪ ವ್ಯಕ್ತಪಡಿಸಿ, ಈಗಾಗಲೇ ಜಿಲ್ಲಾಡ ಳಿತಭವನದ ಮುಂದೆಪ್ರತಿಭಟನೆ ಸಹ ನಡೆಸಿದ್ದಾರೆ.

ಚೇಳೂರು ತಾಲೂಕಿನ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರೀತಿಯ ತಾರತಮ್ಯ ಮಾಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದು, ಮುಂದಿನ ದಿನಗಳಲ್ಲಿ ನೂತನ ತಾಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅನುದಾನ ತಂದು ಸಾರ್ವಜನಿಕರಿಗೆ ಅನುಕೂಲ ಒದಗಿಸುವುದಾಗಿ ವಾಗ್ಧಾನ ಮಾಡಿದ್ದಾರೆ.

ಅಭಿವೃದ್ಧಿ ಕಾಮಗಾರಿಗೆ ಚುರುಕು ಅಗತ್ಯ:
ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಜಿಲ್ಲಾ ರಂಗ ಮಂದಿರ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಿಲ್ಲಾ ಆಯುಷ್‌ ಆಸ್ಪತ್ರೆ ಹಾಗೂ ರಾಷ್ಟ್ರೀಯ ಹೆದ್ದಾರಿ 234ರ ಅಭಿವೃದ್ಧಿಗೆ ವಿಶೇಷವಾಗಿ ಗಮನ ಹರಿಸಬೇಕಾಗಿದೆ. ಶಿಡ್ಲಘಟ್ಟ  ತಾಲೂಕಿನಲ್ಲಿ ಉತ್ತರ ವಿವಿ ನಿರ್ಮಾಣ ಮಾಡಲು ಸ್ಥಳ ಕಾಯ್ದರಿಸಲಾಗಿದೆ. ಆದರೆ, ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಇದೂ ಸಚಿವರ ಜವಾಬ್ದಾರಿ ಹೆಚ್ಚಿಸಿದೆ. ಅದನ್ನು ಪೂರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳಿಗೆಅನುಕೂಲ ಒದಗಿಸುವ ಜೊತೆಗೆಜಿಲ್ಲೆಯನ್ನು ಜ್ಞಾನ ಕೇಂದ್ರ ಮಾಡಲು ಆಸಕ್ತಿ ವಹಿಸಬೇಕಾಗಿದೆ.

ಜಿಯೋಟ್ಯಾಗ್‌: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಾರ ವಹಿವಾಟಿನ ಮೂಲಕ ಗಮನ ಸೆಳೆದಿರುವ ಶಿಡ್ಲಘಟ್ಟ ಸರ್ಕಾರಿ
ರೇಷ್ಮೆ ಗೂಡಿನ ಮಾರುಕಟ್ಟೆಯಲ್ಲಿ ರೈತರು ಮತ್ತು ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಹೈಟೆಕ್‌ ಮಾರುಕಟ್ಟೆ ಮಾಡುವ ಯೋಜನೆ ಹಳ್ಳ ಹಿಡಿದಿದೆ. ಅದನ್ನೂ ಸವಾಲಾಗಿ ಸ್ವೀಕರಿಸಿ ಮಾರುಕಟ್ಟೆಯನ್ನು ಮೇಲ್ದರ್ಜೆಗೆ ಏರಿಸಿ ಅನುಕೂಲ ಕಲ್ಪಿಸುವ ಜೊತೆಗೆ ಶಿಡ್ಲಘಟ್ಟದಲ್ಲಿ ಉತ್ಪಾದನೆ ಆಗುವ ರೇಷ್ಮೆಗೆ ವಿಶೇಷ ಸ್ಥಾನಮಾನ ಒದಗಿಸುವ ಜಿಯೋಟ್ಯಾಗ್‌ ಮಾಡಲು ಆಸಕ್ತಿ ವಹಿಸಬೇಕಾಗಿದೆ.

ಕೃಷಿ ಆಧಾರಿತಕೈಗಾರಿಕೆಗಳ ಸ್ಥಾಪನೆ
ರಾಜಧಾನಿ ಬೆಂಗಳೂರು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ಚಿಕ್ಕಬಳ್ಳಾಪುರವನ್ನು ಉಪನಗರ ಮಾಡುವ ಯೋಜನೆ ಕನಸಾಗಿಯೇ ಉಳಿದಿದೆ. ಅದನ್ನು ಕಾರ್ಯಗತ ಮಾಡುವ ನಿಟ್ಟಿನಲ್ಲಿ ಉಸ್ತುವಾರಿ ಸಚಿವರು ಗಮನ ಹರಿಸಬೇಕಾಗಿದೆ. ಅಲ್ಲದೆ, ಜಿಲ್ಲೆಯಲ್ಲಿ ಉತ್ಪಾದನೆ ಆಗುವ ಹೂ, ಹಣ್ಣು ತರಕಾರಿಗೆ ಸಂಬಂಧಿಸಿದಂತೆ ಪೂರಕವಾಗಿರುವ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪಿಸಬೇಕಾಗಿದೆ.

ನೀರಾವರಿ ಯೋಜನೆ
ಜಿಲ್ಲೆಯಲ್ಲಿ ಹಿಂದುಳಿದ ತಾಲೂಕು ಎಂದು ಗುರುತಿಸಿಕೊಂಡಿರುವ ಬಾಗೇಪಲ್ಲಿಯಲ್ಲಿ ಕೈಗಾರಿಕಾ ವಲಯ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಹರಿಸಬೇಕಾಗಿದೆ. ಅಲ್ಲದೆ, ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸುವ ಸಂಬಂಧ ಉದ್ದೇಶಿತ ಯೋಜನೆ ಕಾಮಗಾರಿ ಚುರುಕುಗೊಳಿಸಬೇಕಾಗಿದೆ

ವೈನ್‌ಯಾರ್ಡ್‌ ಸಂಸ್ಕರಣಾ ಘಟಕ ಸ್ಥಾಪಿಸಿ
ಚಿಕ್ಕಬಳ್ಳಾಪುರ ಜಿಲ್ಲೆ ರೇಷ್ಮೆ, ಹೈನುಗಾರಿಕೆ ಜೊತೆಗೆ ಹೂ, ಹಣ್ಣು ಮತ್ತು ತರಕಾರಿ ಉತ್ಪಾದನೆಯಲ್ಲಿ ಖ್ಯಾತಿ ಹೊಂದಿದೆ. ಈ ಭಾಗದ ರೈತರಿಗೆ ತಾನು ಉತ್ಪಾದಿಸಿದ ಬೆಳೆಯನ್ನು ದೇಶ ವಿದೇಶಗಳಿಗೆ ರಫ್ತು ಮಾಡಲು ಮತ್ತು ದರ ಸ್ಥಿರೀಕರಣಕ್ಕಾಗಿ ಉತ್ಪಾದನೆ ಮಾಡುವ ಆಹಾರ ಸಾಮಗ್ರಿಗಳು ಮತ್ತು ಹೂ ಹಣ್ಣು ಸಂರಕ್ಷಿಸಲು ಸಂಸ್ಕರಣ ಘಟಕ ನಿರ್ಮಿಸಲು ಸಹ ಆದ್ಯತೆ ನೀಡಬೇಕಾಗಿದೆ.

ಪ್ರತ್ಯೇಕ ಡಿಸಿಸಿಬ್ಯಾಂಕ್‌-ಹಾಲು ಒಕ್ಕೂಟ
ಅಖಂಡಕೋಲಾರ ಜಿಲ್ಲೆಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಪ್ರತ್ಯೇಕವಾಗಿದ್ದರೂ ಡಿಸಿಸಿ ಬ್ಯಾಂಕ್‌, ಹಾಲು ಒಕ್ಕೂಟ ಇನ್ನೂ ಜಂಟಿಯಾಗಿಯೇ ಇದ್ದು, ಪ್ರತ್ಯೇಕ ಮಾಡಬೇಕಿದೆ. ಹಿಂದೆ ಸಹಕಾರ ಸಚಿವರಾಗಿದ್ದ ಎಸ್‌.ಟಿ.ಸೋಮಶೇಖರ್‌ ಅವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಡಿಸಿಸಿ ಬ್ಯಾಂಕ್‌ ಮತ್ತು ಜಿಲ್ಲಾ ಹಾಲು ಒಕ್ಕೂಟ ಆರಂಭಿಸುವುದಾಗಿ ಹೇಳಿಕೆ ನೀಡಿದ್ದರು. ಇದುವರೆಗೂ ಅದುಕಾರ್ಯಗತವಾಗಿಲ್ಲ. ಅದನ್ನು ಸಹ ಮಾಡಲು ಉಸ್ತುವಾರಿ ಸಚಿವರಿಗೆ ಸವಾಲಾಗಿದೆ. ಪ್ರಥಮ ಹಂತದಲ್ಲಿ ರಾಜಕೀಯವಾಗಿ ಹೋರಾಟ ಮಾಡಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌, ಹಾಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ 2ನೇ ಬಾರಿಗೆ ಸಚಿವ ಸ್ಥಾನವನ್ನು ಪಡೆದುಕೊಂಡಿದ್ದು, ಜಿಲ್ಲೆಯಲ್ಲಿ ಜನರು ಅನೇಕ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸವಾಲನ್ನು ಯಾವ ರೀತಿಯಲ್ಲಿ ಪರಿಹರಿಸುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ.

-ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ravi

Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್‌ ಭಟ್‌

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

1gavli

Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.