ಕೈಗಾರಿಕೆ ಕೈ ಹಿಡಿದ ನಾನಾ ಯೋಜನೆ


Team Udayavani, Mar 6, 2020, 3:08 AM IST

kaigarike

ರಾಜಧಾನಿ ಬೆಂಗಳೂರಿನಲ್ಲಿ ಸ್ಮಾರ್ಟ್‌ ಮ್ಯಾನುಫ್ಯಾಕ್ಚರಿಂಗ್‌ ಸೆಂಟರ್‌, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ “ರಕ್ಷಣೆ ಮತ್ತು ಬಾಹ್ಯಾಕಾಶ ಸಲಕರಣೆ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆ. ಶಿವಮೊಗ್ಗ ಜಿಲ್ಲೆಯನ್ನು “ಹೆಲ್ತ್‌ ಆ್ಯಂಡ್‌ ವೆಲ್‌ನೆಸ್‌ ಕ್ಲಸ್ಟರ್‌’, ಧಾರವಾಡ ಜಿಲ್ಲೆಯನ್ನು “ಹೋಮ್‌ ಆ್ಯಂಡ್‌ ಪರ್ಸನಲ್‌ ಕೇರ್‌ ಕನ್ಸೂಮರ್‌ ಗೂಡ್ಸ್‌ ಮ್ಯಾನುಫ್ಯಾಕ್ಚರಿಂಗ್‌ ಕ್ಲಸ್ಟರ್‌; ಆಗಿ ಅಭಿವೃದ್ಧಿ…

ಇದು, 2020-21ನೇ ಸಾಲಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಡಿಸಿದ ಬಜೆಟ್‌ನ ಹೈಲೈಟ್ಸ್‌!. ಹೂಡಿಕೆ ಆಕರ್ಷಣೆಗೆ ಹೊಸ ಕೈಗಾರಿಕಾ ನೀತಿ ಜಾರಿ, ಹೂಡಿಕೆದಾರರ ಸಮಾವೇಶ ಆಯೋಜನೆ. “ಕಾಯರ್‌ ಎಕ್ಸ್‌ ಪೀರಿಯನ್ಸ್‌ ಸೆಂಟರ್‌’ ಸ್ಥಾಪನೆ, ತಿಪಟೂರನ್ನು “ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌’ ಆಗಿ ಅಭಿವೃದ್ಧಿ ಜತೆಗೆ ಹೂಡಿಕೆಗೆ ಆಕರ್ಷಿಸಲು ಕಾನೂನಿಗೆ ಅಗತ್ಯ ತಿದ್ದುಪಡಿ ತರುವ ಭರವಸೆಯನ್ನೂ ನೀಡಿದ್ದಾರೆ.

ರಾಜ್ಯದಲ್ಲಿ ಬಾಹ್ಯಾಕಾಶ-ರಕ್ಷಣಾ ಸಲಕರಣೆಗಳ ಉತ್ಪಾದನೆಗೆ ಪೂರಕ ವಾತಾವರಣ ಕಲ್ಪಿಸಲು ಒತ್ತು ನೀಡಿದೆ. ಬೆಂ. ಗ್ರಾಮಾಂತರ ಜಿಲ್ಲೆಯ ಹರಳೂರು-ಮುದ್ದೇನಹಳ್ಳಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೈಗಾರಿಕಾ ಪ್ರದೇಶದಲ್ಲಿ “ರಕ್ಷಣಾ ಮತ್ತು ಬಾಹ್ಯಾಕಾಶ ಸಲಕರಣೆ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆ ಘೋಷಣೆಯಾಗಿದೆ. “ಉತ್ಪನ್ನ ನಿರ್ದಿಷ್ಟ ಕೈಗಾರಿಕಾ ಕ್ಲಸ್ಟರ್‌ ಅಭಿವೃದ್ಧಿ’ ಯೋಜನೆಯಡಿ ಈಗಾ ಗಲೇ 9 ಜಿಲ್ಲೆಗಳಲ್ಲಿ ವಿವಿಧ ಕ್ಲಸ್ಟರ್‌ಗಳು ಸ್ಥಾಪನೆಯಾಗುತ್ತಿವೆ.

ಶಿವಮೊಗ್ಗ ಜಿಲ್ಲೆಯನ್ನು “ಹೆಲ್ತ್‌ ಆ್ಯಂಡ್‌ ವೆಲ್‌ನೆಸ್‌ ಕ್ಲಸ್ಟರ್‌’, ಧಾರವಾಡ ಜಿಲ್ಲೆಯನ್ನು “ಹೋಮ್‌ ಆ್ಯಂಡ್‌ ಪರ್ಸನಲ್‌ ಕೇರ್‌ ಕನ್ಸೂಮರ್‌ ಗೂಡ್ಸ್‌ ಮ್ಯಾನು ಫ್ಯಾಕ್ಚರಿಂಗ್‌ ಕ್ಲಸ್ಟರ್‌’ ಆಗಿ ಅಭಿವೃದ್ಧಿಪಡಿಸು ವುದಾಗಿ ಪ್ರಕಟಿಸಲಾಗಿದೆ. ಎಲೆಕ್ಟ್ರಿಕಲ್‌ ವಾಹನ-ಇಂಧನ ಶೇಖರಣಾ ನೀತಿ ಘೋಷಿಸಿದ ದೇಶದ ಪ್ರಥಮ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ಪಾತ್ರವಾ ಗಿದೆ. ಇದೀಗ ರಾಮನಗರ ಜಿಲ್ಲೆ ಹಾರೋಹಳ್ಳಿಯಲ್ಲಿ “ಎಲೆಕ್ಟ್ರಿಕ್‌ ವಾಹನ ಹಾಗೂ ಇಂಧನ ಶೇಖರಣಾ ಉತ್ಪಾದನಾ ಕ್ಲಸ್ಟರ್‌’ ಸ್ಥಾಪನೆಯ ಘೋಷಣೆಯಾ ಗಿದ್ದು, ಆಯವ್ಯಯದಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ತೆಂಗು ಆಧಾರಿತ ಕೈಗಾರಿಕೆಗೆ ಉತ್ತೇಜನ: ತೆಂಗಿನ ನಾರಿನ ಉತ್ಪಾದನೆಯಲ್ಲಿ ರಾಜ್ಯ 2ನೇ ಸ್ಥಾನದಲ್ಲಿದೆ. ಹೀಗಾಗಿ ನಾರು ಆಧಾರಿತ ಉತ್ಪನ್ನಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ವ್ಯಾಪಕ ಮಾರುಕಟ್ಟೆ ಒದಗಿಸಲು “ಕಾಯರ್‌ ಎಕ್ಸ್‌ಪೀರಿಯನ್ಸ್‌ ಸೆಂಟರ್‌’ ಸ್ಥಾಪನೆಗೆ 5 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಲ್ಲದೇ, ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ತೆಂಗು ಬೆಳೆಗಾರರ ಅನುಕೂಲ ಕ್ಕಾಗಿ ಸಹಾಯವಾಗಲು “ತೆಂಗು ಆಧಾರಿತ ಕೈಗಾರಿಕಾ ಪಾರ್ಕ್‌’ ಆಗಿ ಅಭಿವೃದ್ಧಿಪಡಿಸುವ ಭರವಸೆ ನೀಡಲಾಗಿದೆ.

“ಪವರ್‌ಟೆಕ್ಸ್‌ ಇಂಡಿಯಾದ ನೂಲು ನಿಧಿ ಯೋಜನೆ’ಯಡಿ ಕೇಂದ್ರ ಸರ್ಕಾರದ ವಂತಿಗೆಯೊಂದಿಗೆ ರಾಜ್ಯ ಸರ್ಕಾರ ಗರಿಷ್ಠ 50 ಲಕ್ಷ ರೂ. ಸಹಾಯಧನದೊಂದಿಗೆ ವಿದ್ಯುತ್‌ ಮಗ್ಗ ಸಾಂದ್ರತೆ ಇರುವ 2 ಕೇಂದ್ರಗಳಲ್ಲಿ ನೂಲಿನ ಘಟಕ ಸ್ಥಾಪಿಸುವು ದಾಗಿ ಪ್ರಕಟಿಸಲಾಗಿದೆ. ಕೈಮಗ್ಗ ನೇಕಾರಿಕೆ ಕರಕುಶಲತೆ ಇನ್ನಷ್ಟು ಅಭಿವೃದ್ಧಿಪಡಿಸಲು ರಾಜ್ಯಕ್ಕೆ ಸೀಮಿತವಾದ ಜಿ.ಐ.ಟ್ಯಾಗ್‌ ಹೊಂದಿರುವ ಕೈಮಗ್ಗ ಬಟ್ಟೆ ಉತ್ಪನ್ನಗಳಿಗೆ ರಾಜ್ಯದ ಪ್ರತಿಷ್ಠಿತ “ಪ್ರಿಯದರ್ಶಿನಿ’ ಬ್ರಾಂಡ್‌ ಮೂಲಕ ಸೂಕ್ತ ಮಾರುಕಟ್ಟೆ ಒದಗಿಸುವ ವಾಗ್ಧಾನ ನೀಡಲಾಗಿದೆ.

ಸಕಾಲ ವ್ಯಾಪ್ತಿಗೆ ಸೇವೆ: ಉದ್ದಿಮೆದಾರರು, ಹೂಡಿಕೆದಾರರು ಕೈಗಾರಿಕೆಗಳನ್ನು ಸುಲಭವಾಗಿ ಸ್ಥಾಪಿಸಲು ಅನುಕೂಲವಾಗುವಂತೆ ಕೆಲ ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ ತರಲು ಸರ್ಕಾರ ನಿರ್ಧರಿಸಿದೆ. ಮುಖ್ಯವಾಗಿ ಭೂಮಿ ಹಂಚಿಕೆ, ನಕ್ಷೆ ಅನುಮೋದನೆ, ಲೀಸ್‌ ಕಂ ಸೇಲ್‌ ಡೀಡ್‌, ಕ್ರಯಪತ್ರ ಇತರೆ ಸೇವೆಗಳನ್ನು ಕ್ಷಿಪ್ರಗತಿಯಲ್ಲಿ ಪೂರೈಸಲು ಕೆಐಎಡಿಬಿ ಹಾಗೂ ಕೆಎಸ್‌ಎಸ್‌ಐಡಿಸಿಯ ಪ್ರಮುಖ ಸೇವೆಗಳನ್ನು “ಸಕಾಲ’ ವ್ಯಾಪ್ತಿಗೆ ತರುವ ಭರವಸೆ ನೀಡಲಾಗಿದೆ.

ಹೂಡಿಕೆಗೆ ಕಾನೂನು ತಿದ್ದುಪಡಿ: ಸ್ವಿಡ್ಜರ್ಲೆಂಡ್‌ನ‌ ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ಸಮ್ಮೇಳನದಲ್ಲಿ 40ಕ್ಕೂ ಹೆಚ್ಚು ಜಾಗತಿಕ ಮಟ್ಟದ ಕಂಪನಿಗಳು, ಹೂಡಿಕೆದಾರರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ನಿಯೋಗ ಭೇಟಿಯಾಗಿ ಚರ್ಚಿಸಿತ್ತು. ಈ ವೇಳೆ ರಾಜ್ಯದಲ್ಲಿ ಹೂಡಿಕೆಗೆ ಪೂರಕ ವಾತಾವರಣವಿದ್ದರೂ ಭೂ ಖರೀದಿ ಮತ್ತು ವಿವಿಧ ಪ್ರಾಧಿಕಾರಗಳಿಂದ ಅಗತ್ಯ ಅನುಮೋದನೆ ಪಡೆಯುವುದು ಕ್ಲಿಷ್ಟಕರ ಎಂದು ಹೂಡಿಕೆದಾರರು ಅಳಲು ತೋಡಿಕೊಂಡಿದ್ದರು. ಅದರಂತೆ ರಾಜ್ಯದಲ್ಲಿ ಹೂಡಿಕೆ ದಾರರಿಗೆ ಉತ್ತೇಜನ ನೀಡಲು, ಕೈಗಾರಿಕಾ ಸ್ಥಾಪನೆಗೆ ಗುರುತಿಸುವ ಜಾಗದಲ್ಲಿ ನೇರವಾಗಿ ಭೂಮಾಲೀಕರಿಂದ ಭೂಮಿ ಖರೀದಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಕಾಯ್ದೆಗೆ ತಿದ್ದುಪಡಿ ತಂದು ನಿಯಮ ರೂಪಿಸುವ ವಾಗ್ಧಾನವನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬಜೆಟ್‌ನಲ್ಲಿ ನೀಡಿದ್ದಾರೆ.

ಕೈಗಾರಿಕಾ ನೀತಿ: ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಅಭಿವೃದ್ಧಿಗಾಗಿ ನೂತನ ಕೈಗಾರಿಕಾ ನೀತಿ ಜಾರಿಗೊಳಿಸುವುದಾಗಿ ಆಯವ್ಯಯದಲ್ಲಿ ಘೋಷಿಸಲಾಗಿದೆ. ಮುಖ್ಯವಾಗಿ ದ್ವಿತೀಯ ಹಾಗೂ ತೃತೀಯ ಹಂತದ ನಗರಗಳಿಗೂ ಹೂಡಿಕೆ ಆಕರ್ಷಿಸುವುದಕ್ಕೆ ಕೈಗಾರಿಕಾ ನೀತಿಯಲ್ಲಿ ಆದ್ಯತೆ ಸಿಗಲಿದೆ. ವಿನೂತನ ತಂತ್ರ ಜ್ಞಾನಗಳು ಹಾಗೂ ಹೆಚ್ಚಿನ ಉದ್ಯೋಗ ಸೃಷ್ಟಿಗೆ ಅವಕಾಶವಿರುವ ವಲಯಗಳಿಗೆ ಆದ್ಯತೆ ನೀಡಲು ಚಿಂತಿಸಿದೆ.

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.