Investment: ಹೂಡಿಕೆ ಅರಸಿ ಅಮೆರಿಕಕ್ಕೆ ತೆರಳಿದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್
Team Udayavani, Sep 27, 2023, 12:21 AM IST
ಬೆಂಗಳೂರು: ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದ ವಿದೇಶಿ ಹೂಡಿಕೆ ಆಕರ್ಷಿಸಬೇಕೆಂಬ ಗುರಿಯೊಂದಿಗೆ ಅಮೆರಿಕ ಪ್ರವಾಸ ಕೈಗೊಂಡಿರುವ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್ ಅವರು ಆರ್‌ಟಿಎಕ್ಸ್ ಏರೋಸ್ಪೇಸ್ ಕಂಪೆನಿ, ಇಂಟೆಲ್ ಸ್ಯಾಟ್ ಮತ್ತು ಅಮೆರಿಕ-ಭಾರತ ಎಸ್‌ಎಂಇ ಕೌನ್ಸಿಲ್ ಜತೆ ಮಹತ್ವದ ಮಾತುಕತೆ ನಡೆಸಿದರು.
ಬೆಂಗಳೂರಿನಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರವನ್ನು ಹೊಂದಿರುವ ಆರ್‌ಟಿಎಕ್ಸ್ ರಾಜ್ಯದಲ್ಲಿ ಪೂರೈಕೆ ಸರಪಳಿ ಮತ್ತು ವಿದ್ಯುನ್ಮಾನ ಸಾಧನಗಳ ಉತ್ಪಾದನೆಯತ್ತ ಆಸಕ್ತಿ ತೋರಿಸಿದ್ದು, ಈ ಬಗ್ಗೆ ಅದರ ಉನ್ನತ ಮಟ್ಟದ ಪ್ರತಿನಿಧಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ. ಇದರ ಜತೆಗೆ ಬಾಹ್ಯಾಕಾಶ ನವೋದ್ಯಮಗಳ ಕ್ಷೇತ್ರದಲ್ಲಿ ಸಹಭಾಗಿತ್ವ ಹೊಂದುವ ಕುರಿತು ಚರ್ಚಿಸಲಾಯಿತು ಎಂದವರು ಹೇಳಿದ್ದಾರೆ.
ಇಂಟೆಲ್ ಸ್ಯಾಟ್ ಕಂಪೆನಿಯೊಂದಿಗೆ ಭಾರತೀಯ ಬಾಹ್ಯಾಕಾಶ ನವೋದ್ಯಮಗಳ ಮೂಲಕ ಸ್ಯಾಟಲೈಟ್ ಸೋರ್ಸಿಂಗ್ ಕುರಿತು ಮತ್ತಷ್ಟು ವಿಸ್ತೃತ ಸ್ವರೂಪದಲ್ಲಿ ಕಾರ್ಯ ಚಟುವಟಿಕೆ ನಡೆಸುವ ಕುರಿತು ಚರ್ಚಿಸಲಾಯಿತು. ಇದಲ್ಲದೆ, ಬಾಹ್ಯಾಕಾಶ ಸಂವಹನದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಶೀನ್ ಲರ್ನಿಂಗ್‌ಗಳಿಗೆ ಇರುವ ಪಾತ್ರಗಳು ಮತ್ತು ಸಾಫ್ಟ್‌ವೇರ್ ಆಧಾರಿತ ಪರಿಹಾರಗಳಿಗಾಗಿ ಸಹಭಾಗಿತ್ವ ಬೆಳೆಸಿಕೊಳ್ಳುವ ಚರ್ಚೆ ನಡೆದಿದೆ. ದೀರ್ಘಾವಧಿ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಗ್ಲೋಬಲ್ ಕೇಪಬಿಲಿಟಿ ಸೆಂರ್ಟ (ಜಿಸಿಸಿ) ಸ್ಥಾಪಿಸುವ ಕುರಿತು ಈ ಸಂದರ್ಭ ಚರ್ಚಿಸಲಾಯಿತು ಎಂದು ಪಾಟೀಲ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವರು ಯುಎಸ್-ಇಂಡಿಯಾ ಎಸ್‌ಎಂಇ ಕೌನ್ಸಿಲ್‌ನ 30ಕ್ಕೂ ಹೆಚ್ಚಿನ ಸಿಇಒಗಳನ್ನು ಭೇಟಿಯಾಗಿ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಇರುವ ಹೇರಳ ಅವಕಾಶಗಳನ್ನು ಮತ್ತು ಸರಕಾರವು ಉದ್ಯಮಗಳ ಬೆಳವಣಿಗೆಗೆ ರೂಪಿಸಿರುವ ಉಪಕ್ರಮಗಳನ್ನು ಗಮನಕ್ಕೆ ತಂದರು. ಕರ್ನಾಟಕದಲ್ಲಿ ವಾಣಿಜ್ಯ ಮತ್ತು ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಸಚಿವರು ನೀಡುತ್ತಿರುವ ಮೌಲಿಕ ಕೊಡುಗೆಯನ್ನು ಪರಿಗಣಿಸಿ, ಯುಎಸ್-ಇಂಡಿಯಾ ಎಸ್‌ಎಂಇ ಕೌನ್ಸಿಲ್ ವತಿಯಿಂದ ಅವರಿಗೆ ಔಟ್ ಸ್ಟ್ಯಾಂಡಿಂಗ್ ಬಿಜಿನೆಸ್ ಪ್ರಮೋಷನ್ ಅವಾರ್ಡ್ ನೀಡಿ ಪುರಸ್ಕರಿಸಲಾಯಿತು.
ರಾಜ್ಯ ಸರಕಾರದ ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಸಚಿವರ ಆಪ್ತ ಕಾರ್ಯದರ್ಶಿ ನರೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.