ಸೋಂಕಿತರ ಸಂಪರ್ಕಿತರು ಸರಕಾರಿ ಕ್ವಾರಂಟೈನ್ ಕೇಂದ್ರಕ್ಕೆ
Team Udayavani, Mar 30, 2020, 6:08 AM IST
ಬೆಂಗಳೂರು: ಕೋವಿಡ್-19 ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಎಲ್ಲ ವ್ಯಕ್ತಿಗಳನ್ನು ಸರಕಾರಿ ಕ್ವಾರಂಟೈನ್ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೋವಿಡ್-19 ಸೋಂಕಿತರ ಪ್ರಾಥಮಿಕ ಸಂಪರ್ಕ ವ್ಯಕ್ತಿ ಗಳಲ್ಲಿಯೇ ಹೆಚ್ಚು ಸೋಂಕು ದೃಢ ವಾಗುತ್ತಿರುವ ಹಿನ್ನೆಲೆಯಲ್ಲಿ ಆ ವ್ಯಕ್ತಿಗಳ ಮೇಲೆ ನಿಗಾ ಇಡುವುದು ಅತ್ಯವಶ್ಯಕವಾಗಿದೆ. ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳಲ್ಲಿ ಶೇ.25 ರಷ್ಟು ಸೋಂಕಿತರು ಪ್ರಾಥಮಿಕ ಸಂಪರ್ಕದವರೆಂದು ಪರಿಗಣಿಸಲಾಗಿದೆ. ಇದುವರೆಗೆ ಈ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಅವರ ಮನೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು. ಸದ್ಯ ಆ ವ್ಯಕ್ತಿಗಳು ಹೋಮ್ ಕ್ವಾರಂಟೈನ್‌ನ ಶಿಸ್ತು ಉಲ್ಲಂ ಸುತ್ತಿರುವ ದೂರುಗಳು ಹೆಚ್ಚಾಗಿದ್ದು, ಈ ಹಿನ್ನೆಲೆ ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿಯೇ ನಿಗಾವಹಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.
2 ವರ್ಗಗಳಾಗಿ ವಿಂಗಡಣೆ
ಸೋಂಕು ದೃಢವಾದ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕಗಳನ್ನು ಎರಡು ವರ್ಗಗಳಾಗಿ ವಿಂಗಡಣೆ ಮಾಡ ಲಾಗಿದೆ. ಮೊದಲನೇ ವರ್ಗದಲ್ಲಿ (ಎ) 60 ವರ್ಷ ಮೀರಿದ ವ್ಯಕ್ತಿಗಳು ಮಧುಮೇಹ, ಅಧಿಕ ರಕ್ತದೊತ್ತಡ, ಎಚ್‌ಐವಿ ಪಾಸಿಟಿವ್, ಅಂಗಾಂಗ ಕಸಿ, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನು ಅತ್ಯಂತ ಅಪಾಯಕಾರಿ ಸಂಪರ್ಕಗಳು ಎಂದು ಪರಿಗಣಿಸಲಾಗಿದೆ. ಇನ್ನು ಎರಡನೇ ವರ್ಗದಲ್ಲಿ ಆರೋಗ್ಯವಂತರಿದ್ದು ಇವರನ್ನು ಕಡಿಮೆ ಅಪಾಯದ ಸಂಪರ್ಕಗಳೆಂದು ವಿಂಗಡಿಸಲಾಗಿದೆ. ಪ್ರತಿಯೊಬ್ಬ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆ ಮಾಡಿ ವಿಂಗಡಣೆ ಮಾಡುವ ಜವಾಬ್ದಾರಿಯನ್ನು ವೈದ್ಯಕೀಯ ತಂಡಕ್ಕೆ ವಹಿಸಲಾಗಿದೆ.
ಸ್ಥಳಾಂತರ ವಿಧಾನ
ಅಪಾಯಕಾರಿ ಪ್ರಾಥಮಿಕ ಸಂಪರ್ಕಗಳನ್ನು ವೈದ್ಯಕೀಯ ಸೌಲಭ್ಯಗಳೊಂದಿಗೆ ಆಸ್ಪತ್ರೆಗಳಲ್ಲಿನ ಸರಕಾರಿ ಕ್ಯಾರಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಬೇಕು. ಕಡಿಮೆ ಅಪಾಯ ಎಂದು ಪರಿಗಣಿಸಿರುವ ಪ್ರಾಥಮಿಕ ಸಂಪರ್ಕಗಳನ್ನು ಹೊಟೇಲ್ ಅಥವಾ ಹಾಸ್ಟೆಲ್ ಗಳಲ್ಲಿ ಆರಂಭಿಸಿರುವ ಸರಕಾರಿ ಕ್ಯಾರಂಟೈನ್ ಕೇಂದ್ರಕ್ಕೆ ಕರೆದೊಯ್ಯಬೇಕು. ಆ್ಯಂಬುಲೆನ್ಸ್ ಅಥವಾ ಆಸ್ಪತ್ರೆ ವಾಹನಗಳ ಮೂಲಕ ಕಳುಹಿಸಬೇಕು. ಇಲ್ಲಿ ಎರಡು ಹಾಸಿಗೆಗಳ ನಡುವೆ ಎರಡು ಅಡಿ ಅಂತರ ಇರಬೇಕು. ಈ ಕೇಂದ್ರಗಳು ಕನಿಷ್ಠ 50 ಹಾಸಿಗೆಗಳನ್ನು ಹೊಂದಿರಬೇಕು. 24*7 ಅಗತ್ಯ ವೈದ್ಯಕೀಯ ಸೌಲಭ್ಯಗಳಿರಬೇಕು. ನಿತ್ಯ ಆರೋಗ್ಯ ಇಲಾಖೆಗೆ ಈ ಪ್ರಾಥಮಿಕ ಸಂಪರ್ಕಗಳ ಆರೋಗ್ಯ ಸ್ಥಿತಿಗತಿ ಕುರಿತು ವರದಿ ನೀಡಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.