ಜೀವವೈವಿಧ್ಯದ ಅಳಿವು ವಿಕೋಪದ ಸುಳಿವು

ಇಂದು ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನ

Team Udayavani, May 22, 2020, 6:18 AM IST

ಜೀವವೈವಿಧ್ಯದ ಅಳಿವು ವಿಕೋಪದ ಸುಳಿವು

ಸಾಂದರ್ಭಿಕ ಚಿತ್ರ.

ಪ್ರಕೃತಿ ಎಂದರೆ ಪ್ರಶ್ನಾತೀತವಾದ ವಿಸ್ಮಯ. ಸುತ್ತಲೂ ಹಚ್ಚ ಹಸುರಿನ ಕಾನನ, ಗಿಡ ಬಳ್ಳಿಯ ಸೆರಗಿನಲ್ಲಿ ಚಿಲಿಪಿಲಿಗುಟ್ಟುವ ಹಕ್ಕಿಗಳು, ಕಲ್ಲು ಬಂಡೆಗಳ ಮೇಲೆ ದೇಹವನ್ನು ಚಾಚಿ ಗರ್ಜಿಸುವ ಹುಲಿ, ಸಿಂಹಗಳು, ಸೊಂಡಿಲಾಡಿಸುತ್ತಾ ಘೀಳಿಡುವ ಆನೆ ಒಂದು ಕಡೆಯಾದರೆ, ಕೋಗಿಲೆಗಳ ಇಂಪು, ನವಿಲುಗಳ ನರ್ತನ, ಮತ್ತೂಂದೆಡೆ. ನದಿ, ತೊರೆ, ಝರಿಗಳ ಝುಳು ಝುಳು ನಿನಾದ. ಈ ವಿಸ್ಮಯಗಳ ತವರೂರಾದ ಧರಿತ್ರಿಯಲ್ಲಿ ಅಗಣಿತವಾದ ಜೀವ ಸಂಕು ಲಗಳು ಜನ್ಮ ವೆತ್ತಿವೆ. ಇಂದು ಈ ಸೊಬಗನ್ನು ನೆನ ಪಿಸಿ, ಸಂರಕ್ಷಣೆಗೆ ಪಣತೊಡುವ ದಿನ.

ಇವನ್ನು ಮುಂದಿನ ತಲೆಮಾರಿಗೆ ಸುರಕ್ಷಿತವಾಗಿ ದಾಟಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷ ಮೇ 22ರಂದು ಅಂತಾ ರಾಷ್ಟ್ರೀಯ ಜೀವವೈವಿಧ್ಯ ದಿನ ವನ್ನಾಗಿ ಆಚರಿಸಲಾಗುತ್ತದೆ. ಇವನ್ನು ಕಾಪಾಡುವ, ಉಳಿಸಿ, ಬೆಳೆಸುವ ಸಂಕಲ್ಪಕ್ಕೆ ಈ ದಿನ ಮುನ್ನುಡಿಯಾಗಿದೆ.

ಆಹಾರ ಕೊಂಡಿ:
ಈ ಜಗತ್ತಿನ ಸೌಂದರ್ಯ ಅಡಗಿರುವುದೇ ಜೀವವೈವಿಧ್ಯ ಗಳಿಂದ. ಇಲ್ಲಿನ ಆಹಾರ ಸರಪಣಿಯಲ್ಲಿ ಯಾವುದೇ ಒಂದು ಕೊಂಡಿ ಕಳಚಿದರೂ ಭೂಮಿಗೆ ಅಪಾಯ ತಪ್ಪಿದ್ದಲ್ಲ. ಈ ಕೊಂಡಿ ಎಂದಿಗೂ ಮುರಿಯದಂತೆ, ಮತ್ತೆ ಮತ್ತೆ ಜನರಿಗೆ ಎಚ್ಚರಿಸುತ್ತಿರುವ ಸೃಷ್ಟಿ ಶಕ್ತಿಯೆದುರು ಮನುಷ್ಯ ತಲೆಬಾಗಲೇಬೇಕು. ಅಭಿವೃ ದ್ಧಿಯ ಹೆಸರಿನಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಮರಗಳ ಮಾರಣ ಹೋಮದಿಂದ ಅರಣ್ಯ ಬರಿ ದಾಗಿದೆ. ಪರಿಣಾಮ ಹಲವು ವನ್ಯ ಜೀವಿಗಳು ಅಳಿವಿನಂಚಿನಲ್ಲಿವೆ. ಬಹಳ ಅಪರೂಪದ ಪ್ರಭೇದದ ಜೀವಿಗಳು ಆಹಾರವಿಲ್ಲದೆ, ನೀರಿಲ್ಲದೆ ಸಾಯುತ್ತಿವೆ. ಪ್ರಕೃತಿ ಸರಪಳಿಯನ್ನು ಮಾನವ ತನ್ನ ಅಗತ್ಯಕ್ಕೆ ತಕ್ಕಂತೆ ಕಳಚಿ ಆಕ್ರಮಣ ಮಾಡಿರುವುದೇ ಇಂದಿನ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ.

ಹಿನ್ನೆಲೆ ಏನು?
ಪ್ರತಿ ವರ್ಷ ಮೇ 22ರಂದು ಅಂತಾರಾಷ್ಟ್ರೀಯ ಜೀವವೈವಿಧ್ಯ ದಿನವೆಂದು ಆಚರಿಸಲಾಗುತ್ತದೆ. 1992ರ ಮೇ 22ರಂದು ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಜೈವಿಕ ವೈವಿಧ್ಯದ ಒಪ್ಪಂದ ಅಳವಡಿಸಿಕೊಳ್ಳಲಾಯಿತು. 2000ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಮೇ 22ರಂದು ವಿಶ್ವ ಜೀವವೈವಿಧ್ಯ ದಿನವನ್ನು ಆಚರಿಸಲು ತೀರ್ಮಾನಿಸಲಾಯಿತು. ಈ ಹಿಂದೆ ಡಿಸೆಂಬರ್‌ 29ರಂದು ಆಚರಿಸಲಾಗುತ್ತಿತ್ತು.

ಈ ವರ್ಷ ಧ್ಯೇಯವೇನು?
“ಸಮಸ್ಯೆಗೆ ಪರಿಹಾರ ಪ್ರಕೃತಿಯಲ್ಲೇ ಇದೆ’ ಈ ವರ್ಷದ ಧ್ಯೇಯವಾಕ್ಯವಾಗಿದೆ. ಜಗತ್ತಿಗೆ ನಿಸರ್ಗದೊಂದಿಗಿನ ತಮ್ಮ ಸಂಬಂಧವನ್ನು ಮರುಪರಿಶೀಲಿಸಲು ಜಾಗತಿಕ ಸಮುದಾಯಕ್ಕೆ ಕರೆ ನೀಡಲಾಗುತ್ತದೆ. ನಮ್ಮ ಜೀವನದಲ್ಲಿ ಪರಿಸರ ವ್ಯವಸ್ಥೆಯ ಪಾತ್ರವನ್ನು ಇದು ಹೇಳುತ್ತದೆ. ಈ ಧ್ಯೇಯವು ಪ್ರಕೃತಿಯೊಂದಿಗೆ ಸಾಮರಸ್ಯದ ಜೀವನಕ್ಕೆ ವೇದಿಕೆ ನಿರ್ಮಿಸುವುದಾಗಿದೆ.

ಏನಿದು ಜೀವ ವೈವಿಧ್ಯತೆ
ಜೀವವೈವಿಧ್ಯತೆ ಎಂಬ ಪದವನ್ನು 1968ರಲ್ಲಿ ಮೊದಲ ಬಾರಿಗೆ ವನ್ಯಜೀವಿ ವಿಜ್ಞಾನಿ ಮತ್ತು ಸಂರಕ್ಷಕ ರೈಮಂಡ್‌ ಎಫ್. ಡಸ್ಮಾನ್‌ ಅವರು ನೀಡಿದರು. ಜೀವವೈವಿಧ್ಯ ತೆಯಲ್ಲಿ ಮೂರು ಹಂತಗಳಿವೆ. ಪ್ರಭೇದ ವೈವಿಧ್ಯತೆ, ಪರಿಸರ ವೈವಿಧ್ಯತೆ ಮತ್ತು ತಳಿ ವೈವಿಧ್ಯತೆ. ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಹೆಸರಿಸುವಾಗ ಜೀವ ವೈವಿಧ್ಯತೆ ಪದವನ್ನು ಬಳಸಲಾಗುತ್ತದೆ.

ಯಾಕೆ ನಾವು ಎಚ್ಚೆತ್ತುಕೊಳ್ಳಬೇಕು ?
– ಹವಾಮಾನ ಬದಲಾವಣೆಯಿಂದಾಗಿ ಜಗತ್ತಿನಲ್ಲಿ ಗಂಟೆಗೆ ಅಂದಾಜು 3 ಜೀವ ವೈವಿಧ್ಯ ಕಣ್ಮರೆಯಾಗುತ್ತಿದೆ. ಪ್ರತಿದಿನ ಸುಮಾರು 100ರಿಂದ 150 ಜೀವ ವೈವಿಧ್ಯ ನಾಶವಾಗುತ್ತಿವೆ.
– ಹವಾಮಾನದಲ್ಲಾದ ಬದಲಾವಣೆ ಕಾರಣಕ್ಕೆ 30 ವರ್ಷಗಳಲ್ಲಿ ಕೆನಡಾದಲ್ಲಿರುವ ಹಿಮ ಕರಡಿ ಸಂಖ್ಯೆ ಶೇ. 22ರಷ್ಟು ಕುಸಿತವಾಗಿದೆ.
– ಜಾಗತಿಕ ತಾಪಮಾನ ಏರಿಕೆಯಿಂದಾಗಿ ಈಗಾಗಲೇ ಮಳೆ ಕಾಡುಗಳ ಸುಮಾರು 74 ಜಾತಿಯ ಕಪ್ಪೆಗಳು ನಾಶವಾಗಿವೆ.
– 20 ವರ್ಷದ ಹಿಂದೆ ಆಂಟಾರ್ಟಿಕಾದಲ್ಲಿದ್ದ 320 ಜತೆ ಅಡೆಲಿ ಪೆಂಗ್ವಿನ್‌ ಪೈಕಿ ಈಗ ಉಳಿದಿರುವುದು 54 ಜೋಡಿ ಮಾತ್ರ. ಕಳೆದ 5 ದಶಕದಲ್ಲಿ ಉಷ್ಣತೆ 5.5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದ್ದೇ ಇದಕ್ಕೆ ಕಾರಣ.
– ಇವುಗಳ ಜತೆಗೆ ಮಾನವನ ಅತಿಯಾದ ಚಟುವಟಿಕೆ, ಪ್ರಕೃತಿ ಮೇಲಿನ ನಿರಂತರ ದೌರ್ಜನ್ಯಗಳಿಂದ ಜೀವ ವೈವಿಧ್ಯ ಅಪಾಯದಂಚಿನಲ್ಲಿದೆ.

 

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.