ರಾಷ್ಟ್ರೋತ್ಥಾನ ಪರಿಷತ್ನಿಂದ “ತಪಸ್”, “ಸಾಧನಾ” ಪ್ರವೇಶ ಪರೀಕ್ಷೆಗೆ ಆಹ್ವಾನ
Team Udayavani, Nov 30, 2023, 10:55 PM IST
ಬೆಂಗಳೂರು: ರಾಷ್ಟ್ರೋತ್ಥಾನ ಪರಿಷತ್ನ “ತಪಸ್” ಹಾಗೂ “ಸಾಧನಾ” ಯೋಜನೆಗೆ 2024-25ರ ಸಾಲಿನ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. “ತಪಸ್’ನಲ್ಲಿ ಆರ್ಥಿಕವಾಗಿ ಹಿಂದುಳಿದ, ರಾಜ್ಯದ ಪ್ರತಿಭಾವಂತ ಬಾಲಕರಿಗೆ ಉಚಿತ ಊಟ, ವಸತಿ ಸಹಿತ ಪಿಯುಸಿ ಶಿಕ್ಷಣದ ಜತೆಗೆ ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಇದರಲ್ಲಿ ಆಯ್ಕೆಯಾದವರಿಗೆ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ 2 ವರ್ಷ ಶಿಕ್ಷಣ ನೀಡಲಾಗುತ್ತದೆ. ಬಡ ಹೆಣ್ಮಕ್ಕಳಿಗಾಗಿ ಜಾರಿಗೆ ತಂದಿರುವ “ಸಾಧನಾ’ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ನಗರದ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜಿನಲ್ಲಿ ಸಂಪೂರ್ಣ ಉಚಿತ ಶಿಕ್ಷಣ, ಎನ್ಇಇಟಿ ಹಾಗೂ ಸಿಇಟಿಗೆ ತರಬೇತಿ ನೀಡಲಾಗುತ್ತದೆ.
ಜತೆಗೆ ಶಿಕ್ಷಕರಾಗಲು ಬಯಸುವವರಿಗೆ ಒಟ್ಟು ಆರು ವರ್ಷಗಳ ಪಿಯುಸಿ, ಬಿಎಸ್ಸಿ, ಇಂಟಗ್ರೇಟೆಡ್ ಬಿಎಡ್ ಶಿಕ್ಷಣ ನೀಡಲಾಗುತ್ತದೆ. 9ನೇ ತರಗತಿಯಲ್ಲಿ ಕನಿಷ್ಠ ಶೇ.85 ಅಂಕ ಪಡೆದು 10ನೇ ತರಗತಿಯಲ್ಲಿ ಓದುತ್ತಿರುವವರು (ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಗಿಂತ ಕಡಿಮೆ ಇರಬೇಕು) https://www.tapassaadhana.org/ ಮೂಲಕ ಆನ್ಲೈನ್ನಲ್ಲಿ ಡಿ.10ರೊಳಗಾಗಿ 9ನೇ ತರಗತಿಯ ಅಂಕಪಟ್ಟಿ ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಮೊದಲ ಹಂತದ ಪ್ರವೇಶ ಪರೀಕ್ಷೆ ಡಿ.25 ಹಾಗೂ 2ನೇ ಹಂತದ ಪ್ರವೇಶ ಪರೀಕ್ಷೆ ಜ.26ರಂದು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.