ಯುಕೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ
Team Udayavani, Dec 1, 2022, 10:17 PM IST
ಬೆಂಗಳೂರು: ರಾಜ್ಯದಲ್ಲಿ ಸಂಶೋಧನೆ, ಅಭಿವೃದ್ಧಿ ಹಾಗೂ ಉತ್ಪಾದನ ಘಟಕಗಳ ಸ್ಥಾಪನೆಗೆ ಹೂಡಿಕೆ ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಗುರುವಾರ ಯುಕೆ ಹೂಡಿಕೆದಾರರಿಗೆ ಮುಕ್ತ ಆಹ್ವಾನ ನೀಡಿದರು.
ಆರ್.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಭೇಟಿಯಾದ ಭಾರತದ ಬ್ರಿಟಿಷ್ ಹೈಕಮಿಷನರ್ ಅಲೆಕ್ಸ್ ಎಲ್ಲಿಸ್ ಹಾಗೂ ಕರ್ನಾಟಕ ಮತ್ತು ಕೇರಳದ ನೂತನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ನೇಮಕಗೊಂಡ ಚಂದ್ರು ಅಯ್ಯರ್ ಅವರೊಂದಿಗೆ ಸೌಹಾರ್ದ ಮಾತುಕತೆ ನಡೆಸಿದ ಅವರು, ಕರ್ನಾಟಕವು ಹೂಡಿಕೆದಾರ ಸ್ನೇಹಿ ವಾತಾವರಣ ಹೊಂದಿದ್ದು, ಸಂಶೋಧನೆ ಮತ್ತು ಅಭಿವೃದ್ಧಿಗೆ ಹೊಸ ನೀತಿ ಜಾರಿಗೊಳಿಸಲಾಗಿದೆ. ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಈ ವೇಳೆ ಮಾತನಾಡಿದ ಬ್ರಿಟಿಷ್ ಹೈಕಮಿಷನರ್ ಅಲೆಕÕ… ಎಲ್ಲಿಸ್, ಕರ್ನಾಟಕದಲ್ಲಿರುವ ಯು.ಕೆ. ಕಂಪೆನಿಗಳ ಸಂಖ್ಯೆ ಗಣನೀಯ. ಒಂದು ವರದಿ ಪ್ರಕಾರ ಭಾರತದಲ್ಲಿರುವ 618 ಬ್ರಿಟಿಷ್ ಮಾಲಕತ್ವದ ಕಂಪೆನಿಗಳಲ್ಲಿ ಶೇ. 14ರಷ್ಟು ಕರ್ನಾಟಕದಲ್ಲಿದ್ದು, ದಕ್ಷಿಣ ಭಾರತದಲ್ಲಿಯೇ ಇದು ಅತಿಹೆಚ್ಚು ಎಂದು ಗಮನ ಸೆಳೆದರು. ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಯನ ರಿನ್ಯೂವೇಬಲ್ ಪವರ್ ಲಿ., ಯುಕೆಯ ಅತಿ ವೇಗವಾಗಿ ಬೆಳೆಯುತ್ತಿರುವ ಕಂಪೆನಿಯಾಗಿದೆ ಎಂದು ವಿವರಿಸಿದರು.
ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್, ಈಸ್ ಆಫ್ ಡೂಯಿಂಗ್ ಬಿಸಿನೆಸ್, ವಿದ್ಯುತ್‌ಚಾಲಿತ ವಾಹನ ಬಳಕೆ ಕುರಿತ ಜಾಗೃತಿ, ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಯುಕೆ ಹಾಗೂ ಕರ್ನಾಟಕ ಸಹಯೋಗದ ಕುರಿತು ಚರ್ಚಿಸಲಾಯಿತು. ಯುಕೆಯಲ್ಲಿನ ಕನ್ನಡಿಗರ ಕೊಡುಗೆ ಹಾಗೂ ಅವರು ಭಾರತ ಹಾಗೂ ಯುಕೆ ನಡುವೆ ಬಾಂಧವ್ಯ ಬಲಪಡಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಬ್ರಿಟಿಷ್ ಹೈ-ಕಮಿಷನ್ ಸಲಹೆಗಾರ ಕೆ.ಎಸ್. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.