ದಕ್ಷಿಣ ಕನ್ನಡ : ಐಪಿಎಲ್ ಬೆಟ್ಟಿಂಗ್‌ನಲ್ಲಿ ಭಾಗಿಯಾದ 16 ಮಂದಿ ಬಂಧನ, ಸೊತ್ತು ವಶಕ್ಕೆ
Team Udayavani, Oct 29, 2020, 4:50 PM IST
ಮಂಗಳೂರು : ಮಂಗಳೂರಿನಲ್ಲಿ ಐಪಿಎಲ್ ಸಂಬಂಧ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ವಿಚಾರ ಪೊಲೀಸ್ ಇಲಾಖೆಯ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಡಿಸಿಪಿ ಅರುಣಾಂಶುಗಿರಿ ಹಾಗೂ ವಿನಯ್ ಎ. ಗಾಂವ್ಕರ್ ನೇತೃತ್ವದಲ್ಲಿ ಸಿಸಿಬಿ ತಂಡವು ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 4 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ ದಾಖಲಿಸಿಕೊಂಡಿದೆ. 3 ಪ್ರಕರಣಗಳು ಮಂಗಳೂರು ನಗರ ಉತ್ತರ ಪೊಲೀಸ್ ಠಾಣೆ ಹಾಗೂ 1 ಪ್ರಕರಣ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಈ ಎಲ್ಲ ಪ್ರಕರಣದಲ್ಲಿ ಒಟ್ಟು 16 ಮಂದಿಯನ್ನು ಬಂಧಿಸಲಾಗಿದ್ದು, ಅವರಿಂದ 28 ಮೊಬೈಲ್ ಹಾಗೂ 8 ಲಕ್ಷ ರೂ. ಮೌಲ್ಯದ 1 ಕಾರು ಹಾಗೂ 2,67,100 ರೂ. ನಗದು ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ಯಾವುದೇ ರಿಕ್ರಿಯೇಶನ್ ಕ್ಲಬ್‌ಗಳನ್ನು ತೆರೆಯಲು ಅನುಮತಿ ಕೋರಿ ಯಾರೂ ಅರ್ಜಿ ಸಲ್ಲಿಸಿಲ್ಲ ಹಾಗೂ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಪೊಲೀಸ್ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ:ಉಪಚುನಾವಣೆಯಲ್ಲಿ ಬಿಜೆಪಿಗೆ ಒಳ ಒಪ್ಪಂದದ ಅಗತ್ಯವಿಲ್ಲ: ನಳೀನ್ ಕುಮಾರ್ ಕಟೀಲ್
ನಗರದಲ್ಲಿ ಯಾವುದಾದರೂ ಅನಧಿಕೃತ ಕ್ಲಬ್‌ಗಳು ನಡೆಯುತ್ತಿರುವುದರ ಅಥವಾ ಯಾವುದೇ ರೀತಿಯ ಕ್ರಿಕೆಟ್ ಬೆಟ್ಟಿಂಗ್ ನಡೆಯುತ್ತಿರುವ ಮಾಹಿತಿ ಸಾರ್ವಜನಿಕರಿಗೆ ಇದ್ದಲ್ಲಿ ಪೊಲೀಸ್ ಇಲಾಖೆಗೆ ನೀಡಬೇಕು ಹಾಗೂ ಮಾಹಿತಿಯನ್ನು ನೀಡಿದವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.