ಮುಂದಿನ ವರ್ಷವೂ ಒಲಿಂಪಿಕ್ಸ್ ಅನುಮಾನ?
Team Udayavani, Apr 23, 2020, 6:20 AM IST
ಟೋಕಿಯೊ: ಕೋವಿಡ್-19 ಮಹಾಮಾರಿಯ ಹಾವಳಿಯಿಂದ ಒಂದು ವರ್ಷಕ್ಕೆ ಮುಂದೂಡಲ್ಪಟ್ಟಿರುವ ಒಲಿಂಪಿಕ್ಸ್‌ಗೆ ಇದೀಗ ಆಯೋಜಕರು ಸಿದ್ಧಗೊಳ್ಳುತ್ತಿದ್ದರೆ ಇತ್ತ ಜಪಾನಿನ ವೈರಾಣು ತಜ್ಞ ಕೆಂಟಾರೊ ಇವಾಟ ಮುಂದಿನ ವರ್ಷವೂ ಕೋವಿಡ್-19 ವೈರಸ್ ಒಲಿಂಪಿಕ್ಸ್ ಕೂಟವನ್ನು ಕಾಡಲಿದೆ ಎಂದು ಎಚ್ಚರಿಸಿದ್ದಾರೆ.
ಒಲಿಂಪಿಕ್ಸ್ ಕೂಟಕ್ಕೆ ಬೇರೆ ಬೇರೆ ದೇಶಗಳಿಂದ ಕ್ರೀಡಾಪಟುಗಳು ಬರುತ್ತಾರೆ. ಲಕ್ಷಾಂತರ ಪ್ರೇಕ್ಷಕರು ಸೇರುತ್ತಾರೆ. ಹೀಗಾಗಿ ಕೂಟ ಆರಂಭವಾಗುವ ಮೊದಲು ಆತಿಥ್ಯ ವಹಿಸುವ ರಾಷ್ಟ್ರದಲ್ಲಿ ವೈರಸ್ ನಿಯಂತ್ರಣಕ್ಕೆ ಬರಬೇಕಾಗಿದೆ ಇಲ್ಲವಾದಲ್ಲಿ ಪರಿಸ್ಥಿತಿ ಕೈಮೀರಿ ಹೋಗಲಿದೆ ಎಂದು ಕೋಬೆ ವಿಶ್ವವಿದ್ಯಾಲಯದ ಸೋಂಕು ರೋಗಗಳ ವಿಭಾಗದ ಪ್ರಾಧ್ಯಾಪಕರೂ ಆಗಿರುವ ಕೆಂಟಾರೊ ಮಾಧ್ಯಮ ಪ್ರಕಟನೆಯಲ್ಲಿ ಹೇಳಿದ್ದಾರೆ.
ಮುಂದಿನ ಬೇಸಿಗೆಯ ಒಳಗೆ ಜಪಾನ್‌ನಲ್ಲಿ ರೋಗ ನಿಯಂತ್ರಣಕ್ಕೆ ಬರುತ್ತದೆ ಎಂದುಕೊಳ್ಳೋಣ. ಆದರೆ ಬೇರೆ ದೇಶಗಳಲ್ಲಿ ಅದು ಸಾಧ್ಯವೇ ಎಂಬುದು ಪ್ರಶ್ನೆಯಾಗಿಯೇ ಉಳಿಯಲಿದೆ. ಎಲ್ಲ ಕಡೆಯೂ ವೈರಾಣು ನಿಯಂತ್ರಣಕ್ಕೆ ಬಾರದೆ ಕೂಟ ಆಯೋಜಿಸುವುದರಿಂದ ಅಪಾಯದ ಸಾಧ್ಯತೆ ಹೆಚ್ಚು ಎಂದು ಅವರು ಹೇಳಿದ್ದಾರೆ.
ಸಂಘಟನಾ ಅಧಿಕಾರಿಗೆ ಕೋವಿಡ್-19 ಸೋಂಕು
ಟೋಕಿಯೊ ಒಲಿಂಪಿಕ್ ಸಂಘಟನ ಸಮಿತಿಯ ಅಧಿಕಾರಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಕಾರ್ಯಕಾರಿ ಸಮಿತಿ ಬುಧವಾರ ಖಚಿತ ಪಡಿಸಿದೆ.30 ವರ್ಷದ ಪುರುಷ ಅಧಿಕಾರಿಯೊಬ್ಬರಿಗೆ ಸೋಂಕು ಇರುವುದು ಖಚಿತವಾಗಿದೆ. ಮುಖ್ಯ ಕಚೇರಿಯ ಭಾಗವಾದ ಟೋಕಿಯೊದ ಹರೂಮಿ ಎನ್ನುವ ಸ್ಥಳದಲ್ಲಿ ಈ ಅಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.