ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ
Team Udayavani, Apr 10, 2020, 5:24 AM IST
ಬೆಂಗಳೂರು: ಎಲ್ಲರೂ ಮುಖಗವಸು (ಮಾಸ್ಕ್) ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಪ್ರಕಟಣೆ ಹೊರಡಿಸಿದೆ.
ಈ ಹಿಂದೆ ಆರೋಗ್ಯ ಇಲಾಖೆಯೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಪ್ರಕಟಣೆ ಹೊರಡಿಸಿತ್ತು. ಸದ್ಯ ಆ ನಿರ್ಣಯದಿಂದ ಹಿಂದೆ ಸರಿದಿರುವ ಆರೋಗ್ಯ ಇಲಾಖೆ, ಸಾರ್ವಜನಿಕರು ಅಪರಿಚಿತರೊಂದಿಗೆ ವ್ಯವಹರಿಸುವಾಗ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಗುರುವಾರ ಹೊಸದಾಗಿ ಪ್ರಕಟಣೆ ಹೊರಡಿಸಿದೆ.
ಅಗತ್ಯ ವಸ್ತುಗಳ ಖರೀದಿ ವೇಳೆ, ಕಚೇರಿ ಕೆಲಸಗಳಲ್ಲಿ ಪಾಲ್ಗೊಳ್ಳುವಾಗ ಮತ್ತು ಕೋವಿಡ್ 19 ಸೋಂಕಿತ ವ್ಯಕ್ತಿಗಳೊಂದಿಗೆ ಗೊತ್ತಿದ್ದು ಅಥವಾ ಗೊತ್ತಿಲ್ಲದೆಯೇ ಸಂಪರ್ಕ ಸಾಧಿಸುವಾಗ ಮಾಸ್ಕ್ ಧರಿಸಬೇಕು ಎಂದು ತಿಳಿಸಲಾಗಿದೆ.
ವಯಸ್ಕರು ಧರಿಸುವ ಮಾಸ್ಕ್ ಅಳತೆ 7ರಿಂದ 9 ಇಂಚು ಮತ್ತು ಮಕ್ಕಳು ಧರಿಸುವ ಮಾಸ್ಕ್ ಅಳತೆ 5 ರಿಂದ 7 ಇಂಚು ಇರಬೇಕು ಎಂದು ಶಿಫಾರಸು ಮಾಡಲಾಗಿದೆ. ಬಳಸದೇ ಇರುವ ಬನಿಯನ್, ಟೀ ಶರ್ಟ್ ಅಥವಾ ಕರವಸ್ತ್ರದಂತಹ ಹಳೆಯ ಹತ್ತಿ ಬಟ್ಟೆಯಿಂದ ಮಾಸ್ಕ್ ತಯಾರಿಸಿಕೊಳ್ಳಬಹುದು. ಸಿಂಥೆಟಿಕ್ ಬಟ್ಟೆಗಳನ್ನು ಬಳಸುವುದು ಸೂಕ್ತವಲ್ಲ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.