G-20: ಇದು ಶಾಂತಿ, ಭ್ರಾತೃತ್ವದ ಸಮಯ: ಪಿ20 ಸಮಾವೇಶದಲ್ಲಿ ಪ್ರಧಾನಿ ಮೋದಿ
Team Udayavani, Oct 13, 2023, 9:43 PM IST
ನವದೆಹಲಿ: ಭಯೋತ್ಪಾದನೆಯು ವಿಶ್ವದಲ್ಲಿ ಎಲ್ಲಿಯಾದರೂ ಮತ್ತು ಯಾವುದೇ ರೂಪದಲ್ಲೂ ಮಾನವೀಯತೆಗೆ ವಿರುದ್ಧವಾಗಿದೆ. ಇದು ಶಾಂತಿ ಮತ್ತು ಭ್ರಾತೃತ್ವದ ಹಾಗೂ ಒಟ್ಟಿಗೆ ಮುನ್ನಡೆಯುವ ಸಮಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿರುವ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.
ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ರಾಷ್ಟ್ರಗಳ ಸಂಸತ್ ಅಧ್ಯಕ್ಷರ(ಪಿ20) ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದ ಅವರು, “ಜಗತ್ತಿನ ಯಾವುದೇ ಮೂಲೆಯಲ್ಲಿ ಘರ್ಷಣೆಗಳು ನಡೆದರೂ ಅದು ಪ್ರತಿಯೊಬ್ಬರ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಜಗತ್ತು ಮಾನವ ಕೇಂದ್ರಿತವಾಗಿ ಮುನ್ನಡೆಯಬೇಕಿದೆ’ ಎಂದು ಕರೆ ನೀಡಿದರು.
“ಭಾರತವು ಗಡಿಯಾಚೆಗಿನ ಭಯೋತ್ಪಾದನೆಯನ್ನು ಎದುರಿಸುತ್ತಿದೆ. ಇದರಿಂದ ಇಲ್ಲಿಯವರೆಗೆ ಸಾವಿರಾರು ಅಮಾಯಕರ ಜೀವ ಬಲಿಯಾಗಿದೆ. ಭಯೋತ್ಪಾದನೆ ಎದುರಿಸಲು ನಾವು ಒಟ್ಟಾಗಿ ಹೇಗೆ ಕೆಲಸ ಮಾಡಬೇಕೆಂದು ಜಗತ್ತಿನಾದ್ಯಂತ ಸಂಸತ್‌ಗಳು ಯೋಚಿಸಬೇಕಿದೆ’ ಎಂದು ಹೇಳಿದರು.
ಪಾರದರ್ಶಕತೆ ಹೆಚ್ಚಿಸಿದ ಇವಿಎಂ:
“ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಸುಮಾರು 100 ಕೋಟಿ ಭಾರತೀಯರು ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ವಿದ್ಯುನ್ಮಾನ ಮತಯಂತ್ರವು(ಇವಿಎಂ) ದೇಶದ ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿದೆ’ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.
“ಮುಂದಿನ ವರ್ಷ ಭಾರತ ಪುನಃ “ಪ್ರಜಾಪ್ರಭುತ್ವದ ಹಬ್ಬ’ವನ್ನು ಆಚರಿಸಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಧಿಕ ಪ್ರಮಾಣದ ಮತದಾನವು ದೇಶದ ಸಂಸದೀಯ ಪ್ರಕಿಯೆಗಳ ಮೇಲೆ ಜನರು ಹೊಂದಿರುವ ನಂಬಿಕೆಯನ್ನು ಎತ್ತಿತೋರುತ್ತದೆ. ಕಳೆದ ಸಂಸತ್ ಚುನಾವಣೆಯಲ್ಲಿ 91 ಕೋಟಿ ಅರ್ಹ ಮತದಾರರ ಪೈಕಿ ಶೇ.67ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದರು’ ಎಂದು ಹೇಳಿದರು.
ಭಯೋತ್ಪಾದನೆ ವಿರುದ್ಧ ಸಮರಕ್ಕೆ ಬದ್ಧ
ಭಯೋತ್ಪಾದನೆ ಮತ್ತು ಹಿಂಸಾತ್ಮಕ ಉಗ್ರವಾದವನ್ನು ಎದುರಿಸಲು ತಮ್ಮ ಪಾತ್ರವನ್ನು ವಹಿಸಲು ತಮ್ಮ ಶಾಸಕಾಂಗ, ಬಜೆಟ್ ಮತ್ತು ಮೇಲ್ವಿಚಾರಣಾ ಕಾರ್ಯಗಳನ್ನು ಬಳಸಿಕೊಳ್ಳಲು ಜಿ20 ರಾಷ್ಟ್ರಗಳ ಸಂಸತ್ ಅಧ್ಯಕ್ಷರು ಪ್ರತಿಜ್ಞೆ ಮಾಡಿದರು. ಪಿ20 ಸಮಾವೇಶದಲ್ಲಿ ಜಂಟಿ ಹೇಳಿಕೆ ಮೂಲಕ, ದ್ವೇಷ, ವರ್ಣಭೇದ, ಅಸಹಿಷ್ಣುತೆ ಸೇರಿದಂತೆ ಎಲ್ಲಾ ರೀತಿಯ ಭಯೋತ್ಪಾದನೆಯನ್ನು ಖಂಡಿಸಿದರು. ಅಲ್ಲದೇ ಶಾಂತಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.
ಪಿ20 ಸಮಾವೇಶದ ನೇಪಥ್ಯದಲ್ಲಿ ಮೆಕ್ಸಿಕೊ ಸಂಸತ್‌ನ ಸ್ಪೀಕರ್ ಅನಾ ಲಿಲಿಯಾ ರಿವೆರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಖೀ ಕಟ್ಟಿ ಶುಭಾಶಯ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.