Jacqueline: ಜಾಕ್ವೆಲಿನ್ ಹೊರದೇಶಕ್ಕೆ ಹೋಗಬಹುದು: ದೆಹಲಿಯ ನ್ಯಾಯಾಲಯದಿಂದ ರಿಲೀಫ್
Team Udayavani, Aug 16, 2023, 8:49 PM IST
ನವದೆಹಲಿ: ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಜಾಕ್ವೆಲಿನ್ ಫರ್ನಾಂಡೀಸ್ಗೆ ದೆಹಲಿ ನ್ಯಾಯಾಲಯವೊಂದು ರಿಲೀಫ್ ನೀಡಿದೆ. ಆಕೆಯ ಜಾಮೀನು ಷರತ್ತುಗಳನ್ನು ಸಡಿಲಗೊಳಿಸಿ ಪೂರ್ವಾನುಮತಿ ಇಲ್ಲದೆಯೂ ವಿದೇಶಗಳಿಗೆ ಪ್ರಯಾಣಿಸಲು ಅನುಮತಿ ನೀಡಿದೆ.
ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲ್ಲಿಕ್ ಅವರ ನ್ಯಾಯಪೀಠವು ಕಳೆದ ವರ್ಷ ನವೆಂಬರ್ನಲ್ಲಿ ಜಾಕ್ವೆಲಿನ್ಗೆ ಜಾಮೀನು ನೀಡಿತ್ತು. ಆದಾಗ್ಯೂ, ಅದರಲ್ಲಿನ ಷರತ್ತುಗಳಿಂದ ಆಕೆ ವಿದೇಶಕ್ಕೆ ಪೂರ್ವಾನುಮತಿ ಇಲ್ಲದೇ ತೆರಳುವುದು ಅಸಾಧ್ಯವಾಗಿತ್ತು. ಇದರಿಂದ ವೃತ್ತಿಜೀವನದ ಸಾಕಷ್ಟು ಅವಕಾಶಗಳಿಂದ ಜಾಕ್ವೆಲಿನ್ ವಂಚಿತರಾಗಿದ್ದನ್ನೂ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ ನಿಯಮ ಸಡಿಲಗೊಳಿಸಿದೆ. ಆದರೆ, ವಿದೇಶಕ್ಕೆ ಪ್ರಯಾಣಿಸುವ 3-4 ದಿನದ ಮುಂಚೆಯೇ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಮಾಹಿತಿ ನೀಡಬೇಕೆಂದು ಜಾಕ್ವೆಲಿನ್ ಅವರಿಗೆ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.