Jagdish ಶೆಟ್ಟರ್‌ಗೆ ದಿಗಿಲು, ಯಾರ ಟಿಕೆಟ್ ಬದಲು?
ದಿಲ್ಲಿಯಲ್ಲಿ ಮುಂದುವರಿದ ಬಿಜೆಪಿಯ ಟಿಕೆಟ್ ಕಸರತ್ತು
Team Udayavani, Mar 20, 2024, 7:15 AM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಾಲಿಗೆ ಬಾಕಿ ಉಳಿದಿರುವ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ವರಿಷ್ಠರಿಗೂ ತಲೆಬಿಸಿ ಸೃಷ್ಟಿಸಿದೆ. ಬೆಳಗಾವಿಯಲ್ಲಿ ಎದುರಾಗಿರುವ ಪ್ರತಿರೋಧದ ಬಿಸಿಯಿಂದ ಜಗದೀಶ್ ಶೆಟ್ಟರ್ ದಿಗಿಲುಗೊಂಡಿ ದ್ದಾರೆ. ಇದೆಲ್ಲದರ ಮಧ್ಯೆ ಒಂದು ಕ್ಷೇತ್ರದ ಟಿಕೆಟ್ ಬದಲಾಗಬಹುದೆಂಬ ಚರ್ಚೆ ಬಿಜೆಪಿ ವಲಯದಲ್ಲಿ ಬಲವಾಗಿದ್ದು, ಬುಧವಾರ ಪ್ರಧಾನಿ ನೇತೃತ್ವದಲ್ಲಿ ನಡೆ ಯುವ ಕೇಂದ್ರೀಯ ಚುನಾವಣ ಸಮಿತಿ (ಸಿಇಸಿ) ಸಭೆಯಲ್ಲಿ ಎಲ್ಲ ಕುತೂಹಲಗಳಿಗೂ ತೆರೆ ಬೀಳಬಹುದು ಎಂದು ನಿರೀಕ್ಷಿಸಲಾಗಿದೆ.
ಸಿಇಸಿಗೆ ಪೂರ್ವಭಾವಿಯಾಗಿ ನಡೆಯುವ ಪ್ರಮುಖರ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಮಂಗಳವಾರ ದಿಲ್ಲಿಗೆ ತೆರಳಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತಿತರ ಪ್ರಮುಖರ ಜತೆಗೆ ಚರ್ಚೆ ನಡೆಸಿದ್ದಾರೆ. ಇದೆಲ್ಲದರ ಮಧ್ಯೆ ದಿಲ್ಲಿಯಲ್ಲಿ ಬಿಡಾರ ಹೂಡಿ ಟಿಕೆಟ್ ವಿಷಯದಲ್ಲಿ ವರಿಷ್ಠರ ಜತೆಗೆ ಸಮಾಲೋಚನೆಗೆ ಅಪೇಕ್ಷಿಸು ತ್ತಿದ್ದ ಜಗದೀಶ್ ಶೆಟ್ಟರ್, ಸುಮಲತಾ ಅಂಬರೀಶ್ ರಾಜ್ಯದತ್ತ ಮುಖ ಮಾಡಿದ್ದಾರೆ.
ಬಾಕಿ ಇರುವ ಐದರ ಪೈಕಿ ರಾಯಚೂರು, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಹೆಸರು ಮಾತ್ರ ಪ್ರಕಟವಾಗುವ ಸಾಧ್ಯತೆ ಇದ್ದು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸದೆ ಕೆಲವು ದಿನ ಕಾದುನೋಡುವ ಸಾಧ್ಯತೆ ಇದೆ.
ಇವೆಲ್ಲದರ ಮಧ್ಯೆ ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರವೇಶಕ್ಕೆ ತಮಗೆ ಎದುರಾಗುತ್ತಿರುವ ವಿರೋಧ
ವನ್ನು ಕಂಡು ಮಾಜಿ ಸಿಎಂ ಜಗದೀಶ್ ಶೆಟ್ಟರ್ ದಿಗಿಲುಗೊಂಡಿದ್ದಾರೆ. ಒಂದು ಕಡೆ ಸ್ಥಳೀಯ ನಾಯಕರ ವಿರೋಧ, ಇನ್ನೊಂದೆಡೆ ಪಂಚಮಸಾಲಿ ವಿವಾ ದದ ಹಿನ್ನೆಲೆಯಲ್ಲಿ ಸ್ಪರ್ಧೆಗೆ ಶೆಟ್ಟರ್ ಹಿಂದಡಿ ಇರಿಸುತ್ತಿದ್ದು, ದಿಲ್ಲಿಗೆ ತೆರಳಿ ವರಿಷ್ಠರಿಗೆ ಈ ವಿಚಾರವನ್ನು ತಲುಪಿಸುವ ಪ್ರಯತ್ನ ನಡೆಸಿದ್ದಾರೆ. ಇತ್ತ ಬೆಳಗಾವಿಯ ನಿಯೋಗ ಬೆಂಗಳೂರಿಗೆ ಬಂದು ಚುನಾವಣ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿ ಮಾಡಿ ಶೆಟ್ಟರ್ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಿದ್ದರೂ ಶೆಟ್ಟರ್ ಅವರನ್ನು ಬೆಳಗಾವಿ ಯಿಂದಲೇ ಕಣಕ್ಕಿಳಿಸುವುದಕ್ಕೆ ಯಡಿಯೂರಪ್ಪ ಉತ್ಸುಕರಾಗಿದ್ದಾರೆ ಎಂದು ತಿಳಿದು ಬಂದಿದೆ.
ಶೆಟ್ಟರ್ ಹಾಗೂ ಈಶ್ವರಪ್ಪ ಪೈಕಿ ಒಬ್ಬರ ವಿವಾದವನ್ನು ಬಗೆಹರಿಸುವುದಕ್ಕಾಗಿ ಒಂದು ಕ್ಷೇತ್ರದ ಅಭ್ಯರ್ಥಿ ಬದಲಾವಣೆಗೆ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಸಂಸದೀಯ ಮಂಡಳಿಯಲ್ಲಿ ಅಂಗೀಕಾರಗೊಂಡ ಹೆಸರನ್ನು ಬದಲಾಯಿಸಿದ ಉದಾಹರಣೆ ಬಿಜೆಪಿಯಲ್ಲಿ ಇದುವರೆಗೆ ಇಲ್ಲ. ಹೀಗಾಗಿ ಈ ವದಂತಿ ಎಷ್ಟು ನಿಜ ಎಂದು ತಿಳಿಯುವುದಕ್ಕೂ ಬುಧವಾರ ರಾತ್ರಿಯ ವರೆಗೆ ಕಾಯುವುದು ಅನಿವಾರ್ಯವಾಗಿದೆ.
ಸುಧಾಕರ್‌ಗೆ ಅದೃಷ್ಟ?
ಹೀಗಾಗಿ ಚಿತ್ರದುರ್ಗ, ರಾಯಚೂರು ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರು ಮಾತ್ರ ಅಂತಿಮಗೊಳ್ಳಬಹುದು. ಬಿಜೆಪಿ ಹಾಗೂ ಜೆಡಿಎಸ್‌ನಿಂದ ಯಾರೂ ಉತ್ಸಾಹ ತೋರದೆ ಇರುವ ಹಿನ್ನೆಲೆಯಲ್ಲಿ ಅಂತಿಮವಾಗಿ ಮಾಜಿ ಸಚಿವ ಡಾ| ಸುಧಾಕರ್ ಹೆಸರನ್ನು ವರಿಷ್ಠರು ಅಂತಿಮಗೊಳಿಸಬಹುದು ಎನ್ನಲಾಗುತ್ತಿದೆ.
ಶೆಟ್ಟರ್‌ಗೆ ಟಿಕೆಟ್ ನೀಡಬೇಡಿ: ಸ್ಥಳೀಯ ನಾಯಕರ ಮನವಿ
ಬೆಳಗಾವಿ: ಬೆಳಗಾವಿ ಅಭ್ಯರ್ಥಿಯ ಆಯ್ಕೆ ವರಿಷ್ಠರನ್ನು ಇಕ್ಕಟ್ಟಿಗೆ ಸಿಲುಕಿಸಿರುವಂತೆಯೇ ಈ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ನಾಯಕರು ಮಂಗಳವಾರ ಬೆಂಗಳೂರಿಗೆ ತೆರಳಿ ಪಕ್ಷದ ರಾಜ್ಯ ನಾಯಕರ ಜತೆ ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಶೆಟ್ಟರ್ ಸ್ಪರ್ಧೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಾಯಕರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್
ಸ್ಪರ್ಧೆಗೆ ವಿರೋಧ ಆರಂಭವಾಗಿದೆ. ಯಾವ ಕುರಿಯನ್ನು ಎಲ್ಲಿ ನಿಲ್ಲಿಸಿ ಬಲಿ ಕೊಡಬೇಕೆಂಬ ಬಗ್ಗೆ ಬಿಜೆಪಿಯು ಶಿಸ್ತುಬದ್ಧವಾಗಿ ಯೋಜನೆ ರೂಪಿಸು ತ್ತಿದೆ. ಟಿಕೆಟ್ ಕೊಟ್ಟಂತೆ ಆಗಬೇಕು, ಸಂಸತ್ತಿಗೆ ಬರಬಾರದೆಂಬುದೇ ಅವರ ಯೋಜನೆ. ಇದು ಶೆಟ್ಟರ್ ಅವರಿಗೂ ಗೊತ್ತಿದೆ. ಯುದ್ಧಕ್ಕೆ ಮೊದಲೇ ಶಸ್ತ್ರತ್ಯಾಗ ಮಾಡಿದ ಸಂದೇಶ ಕೊಡುವ ಬದಲು ಸ್ಪರ್ಧಿಸಬಹುದು, ಏಕಾಏಕಿ ಸೋಲಲೂಬಹುದು.
-ಲಕ್ಷ್ಮಣ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.