Pakistan: ಜೈಲು ಶಿಕ್ಷೆ ರದ್ದು: ಇಮ್ರಾನ್ ನಿಟ್ಟುಸಿರು
Team Udayavani, Aug 29, 2023, 8:53 PM IST
ಇಸ್ಲಾಮಾಬಾದ್: ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ನಿರಾಳತೆ ಸಿಕ್ಕಿದೆ. ತೋಷಖಾನ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ವಿಧಿಸಿದ್ದ ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.
ಈ ಹಿನ್ನೆಲೆಯಲ್ಲಿ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಖ್ ಮತ್ತು ನ್ಯಾ. ತಾರಿಕ್ ಮೆಹಮೂದ್ ಜಹಾಂಗಿರಿ ಸೋಮವಾರ ತೀರ್ಪನ್ನು ಕಾಯ್ದಿರಿಸಿದ್ದರು. ತೋಷಖಾನ ಪ್ರಕರಣದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್(ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್(70) ದೋಷಿ ಎಂದು ವಿಚಾರಣಾಧೀನ ನ್ಯಾಯಾಲಯ ಆ.5ರಂದು ತೀರ್ಪು ನೀಡಿತ್ತು. ಜತೆಗೆ ಮೂರು ವರ್ಷಗಳ ಶಿಕ್ಷೆ ವಿಧಿಸಿತ್ತು. ಅಲ್ಲದೇ 5 ವರ್ಷಗಳ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಚುನಾವಣಾ ಆಯೋಗವೂ ನಿಷೇಧ ಹೇರಿತ್ತು. ಈ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ನಿರಾಳತೆ ಸಿಕ್ಕಿದ್ದರೂ, ಅವರ ವಿರುದ್ಧ ಪಾಕಿಸ್ತಾನದ ರಹಸ್ಯ ದಾಖಲೆ ಸೋರಿಕೆ ಮಾಡಿರುವ ಆರೋಪದ ವಿಚಾರಣೆ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.