ಹಿಮವರ್ಷ: ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೂ ಅಡ್ಡಿ
Team Udayavani, Jan 8, 2022, 10:24 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಶುಕ್ರವಾರದಿಂದ ಭಾರೀ ಪ್ರಮಾಣದಲ್ಲಿ ಹಿಮವರ್ಷ ಸುರಿಯುತ್ತಿದ್ದು, ಶನಿವಾರ ಕಾಶ್ಮೀರದಲ್ಲಿ ವಿಮಾನ ಸಂಚಾರಕ್ಕೆ ಅಡ್ಡಿಯಾಗಿದೆ. 10ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದು ಮಾಡಲಾಗಿದ್ದರೆ, ಹಲವು ವಿಮಾನಗಳು ಗಂಟೆಗಳ ಕಾಲ ವಿಳಂಬವಾಗಿದೆ.
ಶ್ರೀನಗರದಲ್ಲಿ 4 ಇಂಚು ಹಿಮವರ್ಷವಾಗಿದೆ. ಗುಲ್ಮಾರ್ಗ್‌ನಲ್ಲಿ ಸುಮಾರು ಒಂದು ಅಡಿಯಷ್ಟು, ಕಾಜಿಗುಂದ್ ನಗರದಲ್ಲಿ 8 ಇಂಚು ಮತ್ತು ಶೋಪಿಯಾನ್‌ನಲ್ಲಿ 15 ಇಂಚು ಹಿಮವರ್ಷವಾಗಿರುವುದಾಗಿ ವರದಿಯಾಗಿದೆ. ಕೆಲ ಪ್ರದೇಶಗಳಲ್ಲಿ ಮಳೆಯೂ ಆಗಿರುವುದಾಗಿ ತಿಳಿಸಲಾಗಿದೆ. ಹಿಮವರ್ಷದಿಂದಾಗಿ ಕೇಂದ್ರಾಡಳಿತ ಪ್ರದೇಶದಾದ್ಯಂತ ವಿದ್ಯುತ್ ವ್ಯತ್ಯಯ, ಬ್ರಾಡ್‌ಬ್ಯಾಂಡ್ ಸಮಸ್ಯೆಯೂ ಉಂಟಾಗಿದೆ.
ಇದನ್ನೂ ಓದಿ:ನಾಯಿಯ ಬರ್ತ್‌ಡೇ ಪಾರ್ಟಿಗೆ ಬರೋಬ್ಬರಿ 7 ಲಕ್ಷ ರೂ. ಖರ್ಚು ಮಾಡಿದ ಕುಟುಂಬ!
ಇದೇ ವೇಳೆ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇಗು ಲದಲ್ಲಿ ಸೀಸನ್‌ನ ಮೊದಲ ಹಿಮ ಮಳೆಯಾಗಿದೆ. ಇದರಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಹಿಮಾವೃತವಾಗಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. ಬನೀಹಾಲ್-ಬಾರಾಮುಲ್ಲಾ ನಡುವಿನ ರೈಲನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
MUST WATCH
ಹೊಸ ಸೇರ್ಪಡೆ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.