ಜಯದೇವ ಆಸ್ಪತ್ರೆಯ ಹೊಸ ಶಾಖೆ ತೆರೆಯುವ ಪ್ರಸ್ತಾಪ ಇಲ್ಲ: ಡಾ ಮಂಜುನಾಥ
Team Udayavani, Nov 26, 2019, 5:36 PM IST
ಕಲಬುರಗಿ: ರಾಜ್ಯದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಇನ್ನೊಂದು ಶಾಖೆ ತೆರೆಯುವ ಪ್ರಸ್ತಾಪ ಹಾಗೂ ಯೋಜನೆ ಸಂಸ್ಥೆ ಮುಂದಿಲ್ಲ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎಸ್. ಮಂಜುನಾಥ ಅವರು ತಿಳಿಸಿದರು.
150 ಕೋ ರೂ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ಸುಸಜ್ಜಿತ ಆಸ್ಪತ್ರೆಯ ಕಟ್ಟಡ ನಿರ್ಮಾಣದ ಸ್ಥಳ ವೀಕ್ಷಣೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದರು.
ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಕಲಬುರಗಿ ಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿವೆ. ಇವುಗಳ ವೈದ್ಯಕೀಯ ಸೇವೆ ಮತ್ತಷ್ಟು ಬಲವರ್ಧನೆಯೊಂದಿಗೆ ಮುನ್ನೆಡೆಯಲಾಗುವುದು. ಹೀಗಾಗಿ ಹೊಸ ಆಸ್ಪತ್ರೆ ಸ್ಥಾಪನೆಗೆ ಮುಂದಾಗುವುದಿಲ್ಲ. ರಾಜ್ಯವಲ್ಲದೇ ಹೊರ ರಾಜ್ಯದಲ್ಲೂ ಜಯದೇವ ಆಸ್ಪತ್ರೆ ಶಾಖೆ ತೆರೆಯಬೇಕೆಂಬ ಬೇಡಿಕೆ ಬರುತ್ತಿವೆ. ಆದರೆ ಎಲ್ಲೂ ಸ್ಥಾಪನೆಗೆ ಮುಂದಾಗುವುದಿಲ್ಲ ಎಂದು ಡಾ. ಮಂಜುನಾಥ ಸ್ಪಷ್ಟಪಡಿಸಿದರು.
ಮೂರು ವರ್ಷದೊಳಗೆ ಕಲಬುರಗಿಯಲ್ಲಿ ಜಯದೇವ ಸ್ವಂತ ಕಟ್ಟಡ:
ಬರುವ ಮೂರು ವರ್ಷದೊಳಗೆ ಜಯದೇವ ಹೃದ್ರೋಗ ಆಸ್ಪತ್ರೆಯು ಕಲಬುರಗಿಯಲ್ಲಿ ಸುಸಜ್ಜಿತ ಸ್ವಂತ ಕಟ್ಟಡದೊಳಗೆ ಕಾರ್ಯಾರಂಭವಾಗಲಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ತಿಳಿಸಿದರು.
ಕಟ್ಟಡ ನಿರ್ಮಾಣದ ಸ್ಥಳ ವೀಕ್ಷಣೆ ನಂತರ ಜಯದೇವ ಆಸ್ಪತ್ರೆಯಲ್ಲಿ ಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
150 ಕೋ ರೂ ವೆಚ್ಚದಲ್ಲಿ 300 ಹಾಸಿಗೆಯುಳ್ಳ ಸುಸಜ್ಜಿತ ಆಸ್ಪತ್ರೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ 150 ಕೋ ರೂ ನೆರವಿನಿಂದ ಕಟ್ಟಡ ನಗರದ ಮುಖ್ಯ ರಸ್ತೆಯ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಆವರಣದ ವಿಶಾಲವಾದ 7 ಏಕರೆ ಜಾಗದಲ್ಲಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಜಯದೇವ ಆಸ್ಪತ್ರೆ ತಲೆ ಎತ್ತಲಿದೆ. ಈಗ ಕಾರ್ಯನಿರ್ವಹಿಸುತ್ತಿರುವ ಜಾಗ ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿದ್ದು, ಇಕ್ಕಟ್ಟಾಗಿದೆ. ಸ್ವಂತ ಕಟ್ಟಡವಾದಲ್ಲಿ ಮತ್ತಷ್ಟು ಸೇವೆ ವಿಸ್ತಾರವಾಗಲಿದೆ ಎಂದು ವಿವರಣೆ ನೀಡಿದರು.
ಕಲಬುರಗಿಯಲ್ಲಿನ ಜಯದೇವ ಆಸ್ಪತ್ರೆಗೆ ರೋಗಿಗಳ ಸಂಖ್ಯೆ ಹೆಚ್ಚುತ್ತಲಿದೆ. ದಿನಾಲು 350 ರಿಂದ 400 ರೋಗಿಗಳನ್ನು ಪರೀಕ್ಷಿಸಲಾಗುತ್ತಿದೆ. ಆರಂಭಗೊಂಡ ಮೂರುವರೆ ವರ್ಷದಲ್ಲಿ ಎರಡು ಲಕ್ಷ ರೋಗಿಗಳಿಗೆ ಹೃದ್ರೋಗ ಪರೀಕ್ಷೆ ಯ ವೈದ್ಯಕೀಯ ಸೇವೆ ನೀಡಿದರೆ ನಾಲ್ಕು ಸಾವಿರ ಜನರಿಗೆ ಹೃದ್ರೋಗ ಚಿಕಿತ್ಸೆ ನೀಡಿದರೆ 400 ರೋಗಿಗಳಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದರು.
ಬೆಂಗಳೂರಿನಲ್ಲಿ ದಿನಾಲು 1700 ಜನರಿಗೆ ಹೃದ್ರೋಗ ಸಂಬಂಧ ಪರೀಕ್ಷೆಗೈದರೆ ಮೈಸೂರಲ್ಲಿ 600 ಹಾಗೂ ಕಲಬುರಗಿ ಆಸ್ಪತ್ರೆಯಲ್ಲಿ 400 ಜನರು ಆಸ್ಪತ್ರೆ ಸೇವೆ ಪಡೆಯುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ, ಬರುವ ಫೆಬ್ರವರಿ ಯಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.