Udupi-Chikkamagaluru: ಶೋಭಾ ಅಥವಾ ರವಿ ಎದುರು ಜಯಪ್ರಕಾಶ್ ಹೆಗ್ಡೆ?
ಬಿಜೆಪಿಯಿಂದ ಕೇಂದ್ರ ಸಚಿವೆ ಕಣಕ್ಕಿಳಿಯುತ್ತಾರಾ ಅಥವಾ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ವಲಸೆ ಹೋಗುತ್ತಾರಾ?
Team Udayavani, Jan 7, 2024, 11:53 PM IST
ಉಡುಪಿ: ಕರಾವಳಿ ಮತ್ತು ಮಲೆನಾಡಿನ ಮಿಶ್ರಣವಾಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ಬಾರಿಯೂ ಬಿಜೆಪಿಯೇ ಪಾರಮ್ಯ ಸಾಧಿಸಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಸಂಸದರಾಗಿರುವ ಈ ಕ್ಷೇತ್ರದಲ್ಲಿ ಈ ಸಲ “ಟಿಕೆಟ್ ಯಾರಿಗೆ’ ಎನ್ನುವ ಪ್ರಶ್ನೆ ಸಹಜವಾಗಿಯೇ ರಾಜ್ಯಮಟ್ಟದಲ್ಲಿ ಕುತೂಹಲ ಮೂಡಿಸಿದೆ.
8 ವಿಧಾನಸಭಾ ಕ್ಷೇತ್ರಗಳಿರುವ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 4 ಸ್ಥಾನಗಳನ್ನು ಹಂಚಿಕೊಂಡಿದ್ದು, ಎರಡು ಪಕ್ಷಗಳ ನಡುವೆ ನೇರ ಪೈಪೋಟಿ ಇದೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಏರ್ಪಟ್ಟಿದ್ದು, ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಕಣಕ್ಕಿಳಿದಿದ್ದರು. ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಏರ್ಪಟ್ಟಿದೆ. ಆಗಿನ ಮೈತ್ರಿ ಅಭ್ಯರ್ಥಿ ಪ್ರಮೋದ್ ಈಗ ಬಿಜೆಪಿಯಲ್ಲಿದ್ದಾರೆ. 2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಮೋದ್ ಮಧ್ವರಾಜ್ ವಿರುದ್ಧ ಬಿಜೆಪಿ ಶೋಭಾ ಕರಂದ್ಲಾಜೆ 3.49 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಬಿಜೆಪಿ ಅಭ್ಯರ್ಥಿ ಶೇ. 62.46ರಷ್ಟು ಮತ ಪಡೆದಿದ್ದರು. ಈಗ ಪ್ರಮೋದ್ ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದು, ರಾಷ್ಟ್ರ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ. ಜತೆಗೆ ಕ್ಷೇತ್ರವ್ಯಾಪಿ ಸಂಚಾರವನ್ನೂ ಆರಂಭಿಸಿದ್ದಾರೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ನಾಯಕತ್ವದ ಕೊರತೆಯಾದರೆ, ಬಿಜೆಪಿಗೆ ಮೋದಿ ಅಲೆಯ ಮೇಲೆ ನಂಬಿಕೆ. ಈ ಬಾರಿಯೂ ಅದೇ ನಂಬಿಕೆ ಮೇಲೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ. ಆಕಾಂಕ್ಷಿಗಳ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ ಹೆಸರು ಅಗ್ರಸ್ಥಾನದಲ್ಲಿದೆ. ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ಅಚ್ಚರಿ ಆಯ್ಕೆಯೂ ಇರಬಹುದು.
ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬದಲು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ವಲಸೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಒಂದೊಮ್ಮೆ ಶೋಭಾ ಕ್ಷೇತ್ರ ಬದಲಾಯಿಸಿದರೆ ಬಿಜೆಪಿಯಿಂದ ಹೊಸಬರಿಗೆ ಮಣೆ ಹಾಕಿದರೂ ಅಚ್ಚರಿಯಲ್ಲ. ಈ ಪೈಕಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ ಹೆಸರು ಮುನ್ನೆಲೆಯಲ್ಲಿದೆ. ಪಕ್ಷ ಸಂಘಟನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡಿರುವ ರವಿ ರಾಷ್ಟ್ರೀಯ ನಾಯಕರೊಂದಿಗೂ ಒಡನಾಟ ಹೊಂದಿದ್ದಾರೆ.
ಕಾಂಗ್ರೆಸ್‌ನಿಂದ ಜಯಪ್ರಕಾಶ್ ಹೆಗ್ಡೆ?
ಕ್ಷೇತ್ರವ್ಯಾಪಿ ಜನಮನ್ನಣೆ ಗಳಿಸಿರುವ ನಾಯಕರ ಕೊರತೆ ಕಾಂಗ್ರೆಸ್‌ಗೆ ಬಹುವಾಗಿ ಕಾಡುತ್ತಿದೆ. ಸದ್ಯ ಕೇಳಿ ಬರುತ್ತಿರುವ ಹೆಸರುಗಳಲ್ಲಿ ಯಾರೂ ಕ್ಷೇತ್ರದ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಪೂರ್ಣಪ್ರಮಾಣದಲ್ಲಿ ಪರಿಚಿತರಲ್ಲ. ಈ ಮಧ್ಯೆ ಕಾಂಗ್ರೆಸ್ ವಲಯದಲ್ಲಿ ಹಿಂದೆ ಇದೇ ಕ್ಷೇತ್ರದಲ್ಲಿ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ ಹೆಸರು ಮುಖ್ಯವಾಗಿ ಕೇಳಿಬರುತ್ತಿದೆ. ಸದ್ಯ ಬಿಜೆಪಿಯಲ್ಲಿರುವ ಹೆಗ್ಡೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಈಚೆಗಷ್ಟೇ ಅವರ ಅವಧಿ ಫೆಬ್ರವರಿಯವರೆಗೆ ವಿಸ್ತರಣೆಯಾಗಿದೆ. ಈ ಅವಧಿ ಮುಗಿದ ಕೂಡಲೇ ಅವರು ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬ ಬಲವಾದ ವದಂತಿಯಿದೆ. ಹಾಗೆಂದು ಅವರು ಎಲ್ಲಿಯೂ ಬಿಜೆಪಿ ಬಿಡುವ ಬಗ್ಗೆಯಾಗಲೀ ಅಥವಾ ಕಾಂಗ್ರೆಸ್ ಸೇರುವ ಬಗ್ಗೆಯಾಗಲೀ ಹೇಳಿಕೊಂಡಿಲ್ಲ.
ಒಂದೊಮ್ಮೆ ಅವರು ಕಾಂಗ್ರೆಸ್ ಸೇರಿದರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಬಲ ಬರುವ ಸಂಭವವಿದೆ ಎನ್ನಲಾಗುತ್ತದೆ. ಕ್ಷೇತ್ರದ ಒಡನಾಟ ಹೊಂದಿರುವ ಅವರು, 2009 ರಿಂದ 3 ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. 2012ರಲ್ಲಿ ಆಗಿನ ಸಂಸದ ಡಿ.ವಿ.ಸದಾನಂದ ಗೌಡರು ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಮುಖ್ಯಮಂತ್ರಿಯಾದರು. ಆ ವೇಳೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ವಿ. ಸುನಿಲ್ ಕುಮಾರ್ ವಿರುದ್ಧ ಗೆದ್ದು ಸಂಸತ್ ಪ್ರವೇಶಿಸಿದ್ದರು. ಆದರೆ 2014ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಸೋಲನ್ನಪ್ಪಿದ್ದು, ಅನಂತರದ ದಿನಗಳಲ್ಲಿ ಅವರು ಬಿಜೆಪಿಯನ್ನೇ ಅಪ್ಪಿದ್ದರು.
ಆದರೆ ಕಾಲಚಕ್ರ ಮತ್ತೆ ತಿರುಗಿದ್ದು, ಹೆಗ್ಡೆ ಕಾಂಗ್ರೆಸ್ ಸೇರುತ್ತಾರೆ ಎನ್ನುವ ವದಂತಿ ನಿಜವಾದರೆ ಮತ್ತೂಂದು ರೋಚಕ ಹೋರಾಟ ಇಲ್ಲಿ ಕಾಣಿಸಲಿದೆ. ಅಲ್ಲದೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್, ಆರತಿ ಕೃಷ್ಣ ಮುಂತಾದವರ ಹೆಸರೂ ಕೇಳಿಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
Chikkamagaluru: ನಕ್ಸಲರ ಶರಣಾಗತಿಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಅಮಟೆ ಮನವಿ
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.