“ಅತೃಪ್ತ ಹಾಗೂ ಅನರ್ಹ ಸರ್ಕಾರ: ರಾಜ್ಯ ಸರಕಾರವನ್ನು ಟೀಕಿಸಿ ಜೆಡಿಎಸ್ ಕಾಂಗ್ರೆಸ್ ಟ್ವೀಟ್
ಮೀಸೆ ಮಣ್ಣಾಗಿಸಿಕೊಂಡು ಸೋತವರು ನಗುನಗುತ ಬೀಗುತಿಹರು: ಜೆಡಿಎಸ್ ಟ್ವೀಟಾಸ್ತ್ರ
Team Udayavani, Aug 27, 2019, 11:50 AM IST
ಬೆಂಗಳೂರು: ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರದಲ್ಲಿ ಸಂಪುಟ ವಿಸ್ತರಣೆ ನಂತರ ಎದ್ದಿರುವ ಅಸಮಾಧಾನ ವಿಚಾರದಲ್ಲಿ ಕರ್ನಾಟಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟ್ವೀಟ್ ಮಾಡಿದ್ದು, ರಾಜ್ಯ ಸರಕಾರವನ್ನು ಟೀಕೆ ಮಾಡಿದೆ.
ಮೀಸೆ ಮಣ್ಣಾಗಿಸಿಕೊಂಡು ಸೋತವರು ನಗುನಗುತ ಬೀಗುತಿಹರು.. ಎದೆಯೊಡ್ಡಿ ಜಯಿಸಿದವರು ತಲೆ ತಗ್ಗಿಸಿ ಕೈ ಚಾಚುತಿಹರು.. ಹಾರುತಿಹ ನ್ಯಾಯ ಧ್ವಜವನ್ ಇಳಿಸಿ ಮುನ್ನಡೆಯಲು. ಎಲ್ಲಿಹುದು ನ್ಯಾಯ ಮರ್ಯಾದಾ ಪುರುಷೋತ್ತಮನ ಆಳ್ವಿಕೆಯೊಳ್? – ಇದು ಜೆಡಿಎಸ್ ಮಾಡಿರುವ ಟ್ವೀಟ್. ಚುನಾವಣೆಯಲ್ಲಿ ಸೋತ ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಪಟ್ಟ ಕಟ್ಟಿದ ಬಿಜೆಪಿಯನ್ನು ಟೀಕಿಸಿ ಜೆಡಿಎಸ್ ಹೀಗೆ ಟ್ವೀಟ್ ಮಾಡಿದೆ.
ಮೀಸೆ ಮಣ್ಣಾಗಿಸಿಕೊಂಡು ಸೋತವರು
ನಗುನಗುತ ಬೀಗುತಿಹರು..
ಎದೆಯೊಡ್ಡಿ ಜಯಿಸಿದವರು
ತಲೆ ತಗ್ಗಿಸಿ ಕೈ ಚಾಚುತಿಹರು..ಹಾರುತಿಹ ನ್ಯಾಯ ಧ್ವಜವನ್ ಇಳಿಸಿ ಮುನ್ನಡೆಯಲು..
ಎಲ್ಲಿಹುದು ನ್ಯಾಯ ಮರ್ಯಾದಾ ಪುರುಷೋತ್ತಮನ ಆಳ್ವಿಕೆಯೊಳ್?#KarnatakaCabinet— Janata Dal Secular (@JanataDal_S) August 27, 2019
ಸರಿಯಾದ ಖಾತೆ ಹಂಚಿಕೆ ಆಗಿಲ್ಲ ಎಂದು ಹಲವು ಬಿಜೆಪಿ ಮಂತ್ರಿಗಳು ಅಸಮಾಧಾನ ಹೊಂದಿದ್ದಾರೆ ಎಂಬ ಅರ್ಥದಲ್ಲಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.
ಕಾರ್ಯಾರಂಭಕ್ಕೆ ಮುನ್ನವೇ ಮುಗ್ಗರಿಸಿರುವ ಈ ಅಪವಿತ್ರ ಸರ್ಕಾರವು
ಸಂಪುಟ ರಚನೆಯಲ್ಲಿ #ಪ್ರಾದೇಶಿಕ_ಅಸಮತೋಲನೆಯಿಂದ ಕೂಡಿದ್ದು, #ಸಾಮಾಜಿಕ_ನ್ಯಾಯವನ್ನು ಕೂಡ ಪಾಲಿಸಲಾಗಿಲ್ಲ.ಹಲವು ಗುಂಪುಗಾರಿಕೆಗಳ ಭಿನ್ನಮತಗಳ ಸರ್ಕಾರ ಇದಾಗಿದ್ದು ನಿರ್ದಿಷ್ಟವಾಗಿ ಭ್ರಷ್ಟಾಚಾರವನಲ್ಲದೆ, ರಾಜ್ಯದ ಅಭಿವೃದ್ಧಿ ಮಾಡಲು ಇವರಿಂದ ಸಾಧ್ಯವಿಲ್ಲವೆಂದು ಕಾಣುತ್ತಿದೆ.
— Karnataka Congress (@INCKarnataka) August 27, 2019
ಸರಿಯಾದ ಖಾತೆ ಸಿಕ್ಕಿಲ್ಲವೆಂದು ಉಪಮುಖ್ಯಮಂತ್ರಿ ಸ್ಥಾನ ಸಿಕ್ಕಿಲ್ಲವೆಂದು
ಅತೃಪ್ತಿಯನ್ನು ಅಸಮಾಧಾನವನ್ನು ಸಿಟ್ಟನ್ನು ತೋರಿಸುತ್ತಿರುವ ಬಿಜೆಪಿ ಶಾಸಕರುಗಳು,
ನೆರೆ ಸಂಕಷ್ಟದಲ್ಲಿ ಸಿಲುಕಿರುವ ಜನತೆಯ ಪರವಾಗಿ ಕಾಳಜಿಯನ್ನು ತೋರಲಿಲ್ಲ
ಪರಿಹಾರ ಕಾರ್ಯದಲ್ಲಿ ತೊಡಗಲಿಲ್ಲ
ಕೇಂದ್ರದಿಂದ ಮಧ್ಯಂತರ ಆರ್ಥಿಕ ನೆರವನ್ನು ಪಡೆಯಲು ಪ್ರಯತ್ನಿಸಲೂ ಇಲ್ಲ.— Karnataka Congress (@INCKarnataka) August 27, 2019
ಉಪ ಮುಖ್ಯಮಂತ್ರಿ ಸ್ಥಾನ ದೊರಕಿಲ್ಲವೆಂದು ಬಹಳಷ್ಟು ಬಿಜೆಪಿ #ನಾಯಕರುಗಳಿಗೆ_ಅಸಮಾಧಾನ
ಸರಿಯಾದ ಖಾತೆ ಹಂಚಿಕೆ ಆಗಿಲ್ಲವೆಂದು ಹಲವು #ಮಂತ್ರಿಗಳಿಗೆ_ಅಸಮಾಧಾನ
ಸಂಪುಟಕ್ಕೆ ತಮ್ಮನ್ನು ಸೇರಿಸಿಕೊಂಡಿಲ್ಲವೆಂದು ಹಲವು #ಶಾಸಕರಿಗೆ_ಅಸಮಾಧಾನ
ಆರ್ ಎಸ್ ಎಸ್ ಮತ್ತು ಬಿಜೆಪಿ ಅಸಮಾಧಾನಿತರು ಸೇರಿ ರಚಿಸಿದ್ದಾರೆ
“ಅತೃಪ್ತ ಹಾಗೂ ಅನರ್ಹ ಸರ್ಕಾರ”
— Karnataka Congress (@INCKarnataka) August 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.