ಜೆಡಿಎಸ್ ಕೋರ್ ಕಮಿಟಿ: ಬಂಡೆಪ್ಪ ಸಾರಥ್ಯ ಎನ್.ಎಂ. ನಬಿ ಕಾರ್ಯಾಧ್ಯಕ್ಷ
Team Udayavani, Jan 26, 2022, 6:57 PM IST
ಬೆಂಗಳೂರು: ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಅವರ ಅಧ್ಯಕ್ಷತೆಯಲ್ಲಿ ನೂತನ ಕೋರ್ ಕಮಿಟಿ ರಚನೆ ಮಾಡಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬುಧವಾರ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಇದೇ ವೇಳೆ ಮಾಜಿ ಸಚಿವ ಎನ್.ಎಂ. ನಬಿ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ್ ದೊರೆ ಅವರನ್ನು ಪರಿಶಿಷ್ಟ ಪಂಗಡ ವಿಭಾಗದ ರಾಜ್ಯಾದ್ಯಕ್ಷರನ್ನಾಗಿ ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜಿ.ಪಿ. ಭವನದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಎಚ್.ಡಿ. ಕುಮಾರಸ್ವಾಮಿ ಯವರು ಕೋರ್ ಕಮಿಟಿಯ ನೂತನ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಕೋರ್ ಕಮಿಟಿಯ ವಿಶೇಷ ಆಹ್ವಾನಿತರಾಗಿದ್ದಾರೆ. ವಿಧಾನಪರಿಷತ್ ಸದಸ್ಯ ಕೆ.ಎ ತಿಪ್ಪೇಸ್ವಾಮಿ ಕೋರ್ ಕಮಿಟಿಯ ಸಂಚಾಲಕರಾಗಿದ್ದಾರೆ.
ಇದನ್ನೂ ಓದಿ:ಹಿಜಾಬ್ ವಿವಾದ: ವಿದ್ಯಾರ್ಥಿನಿಯರು ಒಪ್ಪದಿದ್ದರೆ ಆನ್‌ಲೈನ್ ತರಗತಿ: ಶಾಸಕ ರಘುಪತಿ ಭಟ್
ನೂತನ ಕೋರ್ ಕಮಿಟಿ
ಅಧ್ಯಕ್ಷ-ಬಂಡೆಪ್ಪ ಕಾಶೆಂಪೂರ. ಸದಸ್ಯರು: ವೆಂಕಟರಾವ್ ನಾಡಗೌಡ, ಸಿ.ಎಸ್. ಪುಟ್ಟರಾಜು, ಪ್ರಜ್ವಲ್ ರೇವಣ್ಣ, ಕುಪೇಂದ್ರ ರೆಡ್ಡಿ, ಮೊಹಮ್ಮದ್ ಝಫ್ರುಲ್ಲಾಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಬಿ.ಎಂ.ಫಾರೂಕ್, ಕೆ.ಎ.ತಿಪ್ಪೇಸ್ವಾಮಿ, ವೈಎಸ್‌ವಿ ದತ್ತಕೆ.ಎಂ.ತಿಮ್ಮರಾಯಪ್ಪ, ಟಿ.ಎ.ಶರವಣಮ ಶಾರದಾ ಪೂರ್ಯನಾಯಕ್, ನಾಸೀರ್ ಬಾಗವಾನ್, ಹನುಮಂತಪ್ಪ ಬಸಪ್ಪ ಮಾವಿನಮರದ, ರೂತ್ ಮನೋರಮಾ, ಸುಧಾರಕ್ ಎಸ್. ಶೆಟ್ಟಿ, ವಿ. ನಾರಾಯಣಸ್ವಾಮಿ, ಸಮೃದ್ಧಿ ಮಂಜುನಾಥ್.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.