ಹಳೆಯ ತಂತ್ರಕ್ಕೆ ಜೆಡಿಎಸ್ ಮೊರೆ
Team Udayavani, Nov 2, 2019, 3:09 AM IST
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅಳಿವು- ಉಳಿವು ನಿರ್ಧರಿಸುವ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ ಎಚ್ಚೆತ್ತುಕೊಂಡು ಸಮರ್ಥ ಅಭ್ಯರ್ಥಿಗಳಿಗೆ ತಲಾಷೆ ನಡೆಸಿದೆ. ಯಥಾ ಪ್ರಕಾರ ಕಾಂಗ್ರೆಸ್, ಬಿಜೆಪಿಯ ಅತೃಪ್ತರನ್ನು ಕೊನೇ ಕ್ಷಣದಲ್ಲಿ ತನ್ನತ್ತ ಸೆಳೆದು ಅಭ್ಯರ್ಥಿಯನ್ನಾಗಿಸುವ ಹಳೆಯ ತಂತ್ರಕ್ಕೆ ಜೆಡಿಎಸ್ ಮುಂದಾಗಿದೆ.
ಉಪ ಚುನಾವಣೆ ವಿಚಾರದಲ್ಲಿ ಜೆಡಿಎಸ್ ಸುಪ್ರೀಂಕೋರ್ಟ್ ತೀರ್ಮಾನದತ್ತ ಚಿತ್ತ ಹರಿಸಿ ಕಾದು ಕುಳಿದಿತ್ತು. ಆದರೆ, ಕಾಂಗ್ರೆಸ್ ಮತ್ತು ಬಿಜೆಪಿ ಮೈ ಕೊಡವಿ ಅಖಾಡಕ್ಕೆ ಇಳಿದಿರುವುದರಿಂದ ಜೆಡಿಎಸ್ ಇದೀಗ ಆ ಎರಡು ಪಕ್ಷಗಳ ಅತೃಪ್ತರಿಗೆ ಗಾಳ ಹಾಕಲು ಮುಂದಾಗಿದೆ.
ಹೊಸಕೋಟೆಯಲ್ಲಿ ಎಂ.ಟಿ.ಬಿ.ನಾಗರಾಜ್ ವಿರುದ್ಧ ಈಗಾಗಲೇ ಬಂಡಾಯ ಸಾರಿರುವ ಬಿಜೆಪಿ ಯುವ ಮುಖಂಡ ಶರತ್ ಬಚ್ಚೇಗೌಡ, ಮಹಾಲಕ್ಷ್ಮಿ ಲೇ ಔಟ್‌ನಲ್ಲಿ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರನ್ನು ಸೆಳೆಯಲು ತೆರೆಮರೆಯ ಕಾರ್ಯತಂತ್ರ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.
ಶರತ್ ಬಚ್ಚೇಗೌಡರ ತಂದೆ, ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರು ಮೂ ಲತಃ ಜನತಾ ಪರಿವಾರದವರು. ಹೀಗಾಗಿ, ಆ ಕುಟುಂಬದ ಬಗ್ಗೆ ಹೊಸಕೋಟೆಯ ಜೆಡಿಎಸ್ ಮುಖಂಡರಲ್ಲೂ ಒಲವಿದೆ. ಹೀಗಾಗಿ, ಸ್ವತಂತ್ರವಾಗಿ ಸ್ಪರ್ಧೆ ಮಾಡಲು ಶರತ್ ಬಚ್ಚೇಗೌಡ ಮುಂದಾದರೆ ಅವರನ್ನು ಕರೆತಂದು ಜೆಡಿಎಸ್‌ನಿಂದಲೇ ಅವಕಾಶ ಕೊಡುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಹೇಳಲಾಗಿದೆ.
ಮಹಾಲಕ್ಷ್ಮಿ ಲೇ ಔಟ್‌ನಲ್ಲಿ ಗೋಪಾಲಯ್ಯ ಅವರಿಗೆ ತಿರುಗೇಟು ನೀಡಲು ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿರುವ ಜೆಡಿಎಸ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು ಅವರನ್ನು ಸೆಳೆಯಲು ಸ್ಥಳೀಯ ನಾಯಕರ ಮೂಲಕ ಮುಂದಾಗಿದೆ. ಒಕ್ಕಲಿಗ ಸಮು ದಾಯ ಆ ಕ್ಷೇತ್ರದಲ್ಲಿ ನಿರ್ಣಾಯಕ ಆಗಿರುವುದರಿಂದ ಪ್ರತಿ ಮನೆಗೆ ನಾನೇ ಖುದ್ದಾಗಿ ಬಂದು ಮತಯಾಚನೆ ಮಾಡುತ್ತೇನೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರೇ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು, ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರು ಸೆಳೆಯಲು ಪ್ರಯತ್ನಿಸಿದ್ದ ಜವರಾಯಿ ಗೌಡರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಅವರೇ ಕಣಕ್ಕೆ ಇಳಿಯುವುದು ಖಚಿತ. ಎರಡು ಬಾರಿ ಸ್ಪರ್ಧೆ ಮಾಡಿ ಸೋತಿರುವ ಜವರಾಯಿ ಗೌಡರಿಗೆ ಅನುಕಂಪ ಇರುವುದರಿಂದ ಆ ಕ್ಷೇತ್ರದ ಬಗ್ಗೆ ಜೆಡಿಎಸ್ ಹೆಚ್ಚು ವಿಶ್ವಾಸ ಇರಿಸಿಕೊಂಡಿದೆ.
ಚಿಕ್ಕಬಳ್ಳಾಪುರದಲ್ಲಿ ಮಾಜಿ ಶಾಸಕ ಬಚ್ಚೇಗೌಡರಿಗೆ ಕೆಲಸ ಆರಂಭಿಸುವಂತೆ ಸೂಚಿಸಿದೆ. ಹುಣಸೂರಿನಲ್ಲಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಸಲು ತಂತ್ರಗಾರಿಕೆ ರೂಪಿಸಿದ್ದು, ಜಿ.ಟಿ.ದೇವೇಗೌಡರ ಜತೆ ಸಂಧಾನದ ಮಾತುಕತೆಯೂ ನಡೆದಿದೆ. ಅದು ಯಶಸ್ವಿಯಾದರೆ ಅವರ ಪುತ್ರ ಹರೀಶ್‌ಗೌಡ ಕಣಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕೆ.ಆರ್.ಪುರ, ಶಿವಾಜಿನಗರ, ಅಥಣಿ, ಕಾಗವಾಡ, ಗೋಕಾಕ್, ವಿಜಯನಗರ, ಹಿರೇಕೆರೂರು, ರಾಣಿ ಬೆನ್ನೂರು, ಯಲ್ಲಾಪುರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು ಕೆಲವರು ಬಂಡಾಯ ಸಾರಬಹುದು ಎಂಬ ನಿರೀಕ್ಷೆಯಲ್ಲಿ ಜೆಡಿಎಸ್ ಕಾದು ಕುಳಿತಿದೆ.
ಸಮರ್ಥರ ಕೊರತೆ: ಹದಿನೈದು ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಕಣಕ್ಕೆ ಇಳಿಯುವುದಾಗಿ ಈಗಾಗಲೇ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದು, ಅದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಒಪ್ಪಿದ್ದಾರೆ. ಆದರೆ, ಎಲ್ಲ ಕ್ಷೇತ್ರಗಳಲ್ಲೂ ಸಮರ್ಥ ಅಭ್ಯರ್ಥಿಗಳು ಇಲ್ಲ. ಹೀಗಾಗಿ, ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ರಯತ್ನ ನಡೆದಿದೆ.
ಬಿಜೆಪಿಯು ಏಳು ಕ್ಷೇತ್ರಗಳಿಗಿಂತ ಹೆಚ್ಚು ಗೆಲ್ಲದಂತೆ ನೋಡಿಕೊಂಡರೆ ಮಾತ್ರ ಪಕ್ಷಕ್ಕೆ ಭವಿಷ್ಯ. ಮತ್ತೂಮ್ಮೆ ಅಧಿಕಾರಕ್ಕೆ ಬರುವ ಅವಕಾಶ ಸಿಗಲಿದೆ. ಇದೇ ಕಾರಣಕ್ಕೆ ದೇವೇಗೌಡರು 2-3 ತಿಂಗಳಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂಬ ಮಾತನ್ನೂ ಆಡಿದ್ದಾರೆ. ಹೀಗಾಗಿ, ಉಪ ಚುನಾವಣೆ ಜೆಡಿಎಸ್‌ಗೆ ತಾನು ಗೆಲ್ಲುವ ಸಂಖ್ಯೆ ಗಿಂತ ಬಿಜೆಪಿ ಗೆಲ್ಲುವ ಸಂಖ್ಯೆ ಕಡಿಮೆಗೊಳಿಸಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಪಕ್ಷದ ವಲಯದಲ್ಲಿ ಕೇಳಿಬರುತ್ತಿದೆ.
ಕಾರ್ಯಕರ್ತರು-ಮುಖಂಡರ ಜಿಜ್ಞಾಸೆ: ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬಿಜೆಪಿ ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಹೇಳಿರುವುದು ಪಕ್ಷದ ಸ್ಥಳೀಯ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಹೊಸ ಜಿಜ್ಞಾಸೆಗೆ ಕಾರಣವಾಗಿದೆ. ಉಪ ಚುನಾವಣೆಯಲ್ಲಿ ಕುಮಾರಸ್ವಾಮಿಯವರ ಕಾರ್ಯತಂತ್ರ ಏನಿರಬಹುದು? ಬಿಜೆಪಿ ವಿರುದ್ಧ ನಾವು ಹೋರಾಟ ಮಾಡಬೇಕಾ? ಕಾಂಗ್ರೆಸ್ ವಿರುದ್ಧವಾ ಎಂಬುದು ಸ್ಪಷ್ಟತೆ ಸಿಗುತ್ತಿಲ್ಲ. ಅಭ್ಯರ್ಥಿಗಳ ಆಯ್ಕೆ ನಂತರವಷ್ಟೇ ಇದಕ್ಕೆ ಉತ್ತರ ಸಿಗುವ ಸಾಧ್ಯತೆಯಿದೆ.
* ಎಸ್. ಲಕ್ಷ್ಮಿನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.