ಕೇಂದ್ರ-ರಾಜ್ಯ ಸರ್ಕಾರದಿಂದ ರೈತರ ಕತ್ತು ಹಿಸುಕುವ ಕೆಲಸ: ಯಶೋಧರ
Team Udayavani, Aug 20, 2020, 1:07 PM IST
ಚಿತ್ರದುರ್ಗ: ಸುಗ್ರಿವಾಜ್ಞೆ ಮೂಲಕ ರೈತರು ಮತ್ತು ಕಾರ್ಮಿಕರಿಗೆ ರಾಜ್ಯ ಬಿಜೆಪಿ ಸರ್ಕಾರ ಮರಣ ಶಾಸನ ಬರೆದಿದೆ ಎಂದು ಆರೋಪಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಬುಧವಾರ ನಗರದ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ ಮಾತನಾಡಿ, ರೈತರು ಮತ್ತು ಕಾರ್ಮಿಕರ ಪರವಾಗಿರಬೇಕಾಗಿದ್ದ ರಾಜ್ಯ ಮತ್ತು ಕೇಂದ್ರ
ಬಿಜೆಪಿ ಸರ್ಕಾರ ಬಂಡವಾಳ ಶಾಹಿಗಳು, ಕಾರ್ಪೊರೇಟರ್‌ಗಳಿಗೆ ಬೆಂಗಾವಲಾಗಿ ನಿಂತಿವೆ. ಅನ್ನದಾತರ ಬೆನ್ನುಮೂಳೆ ಮುರಿಯುವ ಕೆಲಸಕ್ಕೆ ಕೈಹಾಕಿವೆ. ಕೂಡಲೆ ರಾಜ್ಯ ಸರ್ಕಾರ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ
ತಿದ್ದುಪಡಿಯನ್ನು ಹಿಂದಕ್ಕೆ ಪಡೆಯಬೇಕು.
ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮುಖಂಡ ಶ್ರೀನಿವಾಸ ಗದ್ದುಗೆ ಮಾತನಾಡಿ, ಹೆಗಲಿಗೆ ಹಸಿರು ಶಾಲು ಹಾಕಿಕೊಂಡು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿ ಜಾರಿಗೆ ತರಲು
ಹೊರಟಿರುವುದು ಯಾರ ಮನವೊಲಿಸುವುದಕ್ಕಾಗಿ ಎಂದು ಪ್ರಶ್ನಿಸಿದರು.
ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಕೂಡಲೆ ಹಿಂದಕ್ಕೆ ಪಡೆದು ರೈತರು ಸ್ವಾವಲಂಬಿಯಾಗಿ ಬದುಕಲು ಅಗತ್ಯವಿರುವ ಕಾನೂನುಗಳನ್ನು ಜಾರಿಗೆ ತರಲಿ. ಚಿತ್ರದುರ್ಗಕ್ಕೆ ಮಂಜೂರಾಗಿರುವ ಮೆಡಿಕಲ್ ಕಾಲೇಜನ್ನು ಶೀಘ್ರ
ಆರಂಭಿಸಬೇಕು ಎಂದು ಆಗ್ರಹಿಸಿದರು. ಜೆಡಿಎಸ್ ತಾಲೂಕು ಘಟಕಗಳ ಅಧ್ಯಕ್ಷರಾದ ಸಣ್ಣತಿಮ್ಮಣ್ಣ, ಪಟೇಲ್ ತಿಪ್ಪೇಸ್ವಾಮಿ, ಜಿ.ಬಿ. ಶೇಖರ್, ಶಿವಪ್ರಸಾದ್ ಗೌಡ, ಗಣೇಶ್ ಕುಮಾರ್, ಜಿಲ್ಲಾ ವಕ್ತಾರ ಡಿ. ಗೋಪಾಲಸ್ವಾಮಿ ನಾಯಕ, ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ, ವೀರಣ್ಣ, ಶಂಕರಮೂರ್ತಿ, ಮಂಜುನಾಥ್, ಡಾ| ಪ್ರಸನ್ನ, ಕಿರಣ್, ಹನುಮಂತರಾಯ,
ರಂಗನಾಥ್, ಜಯಕುಮಾರ್, ಗುರುಸಿದ್ದಪ್ಪ, ಕರಿಯಪ್ಪ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.