Job: ಬ್ಯಾಂಕ್‌ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ; ಪರೀಕ್ಷಾ ಕೇಂದ್ರಗಳೆಲ್ಲಿ?

ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?

Team Udayavani, Jul 20, 2023, 11:50 AM IST

job-vacancy-thumb

ಬ್ಯಾಂಕ್‌ ಸಿಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ಸುಮಾರು 4,545 ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ?
ರಾಜ್ಯದ 11 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ (ಬೆಂಗಳೂರು, ಬೆಳಗಾವಿ, ಬೀದರ್‌, ಕಲಬುರಗಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮೈಸೂರು, ಮಂಗಳೂರು, ಶಿವಮೊಗ್ಗ ಮತ್ತು ಉಡುಪಿ. ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ(ಬೆಂಗಳೂರು ಮತ್ತು
ಹುಬ್ಬಳ್ಳಿ-ಧಾರವಾಡ ಮಂಗಳೂರು)ಮುಖ್ಯ ಪರೀಕ್ಷೆ ಆನ್‌ಲೈನ್‌ನಲ್ಲಿ ನಡೆಯಲಿದೆ.

ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆ?
ಪಂಜಾಬ್‌ ಆ್ಯಂಡ್‌ ಸಿಂಧ್‌ ಬ್ಯಾಂಕ್‌ 9, ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ 61,  ಬ್ಯಾಂಕ್‌ ಆಫ್‌ ಇಂಡಿಯಾ 3, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ 15, ಕೆನರಾ ಬ್ಯಾಂಕ್‌ನಲ್ಲಿ 165 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ. ಕರ್ನಾಟಕದಲ್ಲಿ ಒಟ್ಟು 253 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ
ಯಾವುದೇ ಸಮಾನ ಅರ್ಹತೆ. ಅಭ್ಯರ್ಥಿಯು ಕಂಪ್ಯೂಟರ್‌ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರುವುದು ಕಡ್ಡಾಯ.

ಕನ್ನಡದಲ್ಲಿ ಪರೀಕ್ಷೆ
ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್‌ ಜತೆಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್‌ ನೀಡಿದೆ. ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು.

ಸಂದರ್ಶನವಿಲ್ಲ
ಪೂರ್ವಭಾವಿ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ ಲಿಸ್ಟ್‌ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಅವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ
ವಿತರಿಸಲಾಗುತ್ತದೆ.

ಅರ್ಜಿ ಸಲ್ಲಿಕೆಯ ದಿನಾಂಕ: ಜು.1ರಿಂದ ಜು.21, 2023ರ ವರೆಗೆ. ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನಿಮ್ಮ ಆಯ್ಕೆಯ ಬ್ಯಾಂಕಿನ ಆದ್ಯತೆಯನ್ನು ನಮೂದಿಸಬೇಕು.ಮತ್ತೆ ಬದಲಾವಣೆಗೆ ಅವಕಾಶಗಳಿರುವುದಿಲ್ಲ.

ಪರೀಕ್ಷಾ ಪೂರ್ವ ತರಬೇತಿ:
ಐಬಿಪಿಎಸ್‌ ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತ ಅಭ್ಯರ್ಥಿಗಳು, ಮಾಜಿ ಸೈನಿಕರು, ವಿಕಲಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು, ತರಬೇತಿ ಸ್ಥಳದ ಖರ್ಚು ವೆಚ್ಚಗಳನ್ನು ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪರೀಕ್ಷಾ ಪೂರ್ವ ತರಬೇತಿ ಕೇಂದ್ರಗಳಿವೆ.

ಪರೀಕ್ಷಾ ಪ್ರಕ್ರಿಯೆ:
ಮೊದಲ ಹಂತ: ಆನ್‌ಲೈ ನ್‌ ಪೂರ್ವಭಾವಿ ಪರೀಕ್ಷೆ – ಸೆಪ್ಟಂಬರ್‌ 2023 ಎರಡನೇ ಹಂತ: ಆನ್‌ಲೈನ್‌ ಮುಖ್ಯ ಪರೀಕ್ಷೆ – ಸೆಪ್ಟಂಬರ್‌ ಅಕ್ಟೋಬರ್‌, 2023 ಪ್ರಾತಿನಿಧಿಕ ಹಂಚಿಕೆ: ಎಪ್ರಿಲ್‌ 2024.

ವಯೋಮಿತಿ:
01.07.2023ಕ್ಕೆ, 20 ವರ್ಷಕ್ಕಿಂತ ಕಡಿಮೆ ಇರಬಾರದು ಮತ್ತು 1.07.2023ಕ್ಕೆ 28 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 20 ವರ್ಷದಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸರಕಾರದ ನಿಯಮದಂತೆ ಎಸ್‌ಸಿ/ ಎಸ್‌ಟಿ
ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಶುಲ್ಕ ಪಾವತಿ/ಅರ್ಜಿ ಶುಲ್ಕ:
ನೋಂದಣಿ ಅನಂತರ ಅಭ್ಯರ್ಥಿಗಳು ಡೆಬಿಟ್‌ ಕಾರ್ಡ್‌/ಕ್ರೆಡಿಟ್‌ ಕಾರ್ಡ್‌/ ಇಂಟರ್ನೆಟ್‌ ಬ್ಯಾಂಕಿಂಗ್‌ ಬಳಸಿ ಆನ್‌ಲೈನ್‌ ಮೋಡ್‌ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ ಮತ್ತು ಇತರ ಹಿಂದುಳಿದ ವರ್ಗದ
ಅಭ್ಯರ್ಥಿಗಳಿಗೆ 850 ರೂ. ಹಾಗೂ ಎಸ್‌ಸಿ/ಎಸ್‌ಟಿ/ವಿಕಲಚೇತನರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್‌ ಸೇವಾ ಶುಲ್ಕ ಮತ್ತು ಇಂಟಿಮೇಷನ್‌ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗೆ ವೆಬ್‌: https://www.ibps.in/

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.