ಉದ್ಯೋಗದ ನಿರೀಕ್ಷೆ: 13 ಹುದ್ದೆಗಳಿಗೆ 900ಕ್ಕೂ ಹೆಚ್ಚು ಅಭ್ಯರ್ಥಿಗಳು!

Team Udayavani, Jun 18, 2020, 6:10 AM IST

ಉದ್ಯೋಗದ ನಿರೀಕ್ಷೆ: 13 ಹುದ್ದೆಗಳಿಗೆ 900ಕ್ಕೂ ಹೆಚ್ಚು ಅಭ್ಯರ್ಥಿಗಳು!

ಮಹಾನಗರ: ಸರಕಾರದ “ನರೇಗಾ'(ಉದ್ಯೋಗ ಖಾತರಿ) ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ 13 ಹುದ್ದೆಗಳ ನೇಮಕಾತಿಗೆ ನಗರದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಕಚೇರಿಯಲ್ಲಿ ಬುಧವಾರ ನಡೆದ ನೇರ ಸಂದರ್ಶನಕ್ಕೆ ನೂರಾರು ಮಂದಿ ಉದ್ಯೋಗಾಕಾಂಕ್ಷಿಗಳು ಜಮಾವಣೆಗೊಂಡರು.

“ನರೇಗಾ’ ಯೋಜನೆಯಡಿ ತಾಲೂಕು ಎಂಐಎಸ್‌ ಸಂಯೋಜಕರು (2 ), ತಾಲೂಕು ಐಇಸಿ ಸಂಯೋಜಕರು(7), ತಾಲೂಕು ತಾಂತ್ರಿಕ ಸಂಯೋಜಕರು(2) ಮತ್ತು ಡಾಟಾ ಎಂಟ್ರಿ ಆಪರೇಟರ್‌(2) ಸೇರಿದಂತೆ ಒಟ್ಟು 13 ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ನೇಮಕಾತಿ ಬಯಸಿ 900ಕ್ಕೂ ಅಧಿಕ ಮಂದಿ ಉದ್ಯೋಗಾಕಾಂಕ್ಷಿಗಳು ಆಗಮಿಸಿದರು. ಇದರಿಂದಾಗಿ ಜಿ.ಪಂ. ಆವರಣದಲ್ಲಿ ಜನಜಂಗುಳಿ ಉಂಟಾಗಿತ್ತು. ಒಂದು ಹಂತದಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕೂಡ ಅಸಾಧ್ಯ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅನಂತರ ಜಿ.ಪಂ. ಮುಖ್ಯ ದ್ವಾರದಲ್ಲಿಯೇ ಅಭ್ಯರ್ಥಿ ಗಳನ್ನು ತಡೆದು ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿದ ಬಳಿಕ ಒಬ್ಬೊಬ್ಬರನ್ನೇ ಸಭಾಂಗಣದೊಳಗೆ ಕಳುಹಿಸಿ ಕೊಡುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು.

ಹೊರಜಿಲ್ಲೆಗಳಿಂದಲೂ ಆಗಮನ
ಅರ್ಜಿ ಸಲ್ಲಿಕೆಗಾಗಿ ದ.ಕ ಜಿಲ್ಲೆ ಮಾತ್ರವಲ್ಲದೆ ಉಡುಪಿ, ಕಾಸರಗೋಡು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಂದಲೂ ಉದ್ಯೋಗಾಕಾಂಕ್ಷಿಗಳು ಆಗಮಿಸಿದ್ದರು. ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ಪೈಕಿ ಹಲವಾರು ಮಂದಿ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರಗಳಲ್ಲಿ ಉದ್ಯೋಗ ಕಳೆದುಕೊಂಡು ತಮ್ಮ ಊರಿಗೆ ವಾಪಸಾಗಿ ಉದ್ಯೋಗದ ಹುಡುಕಾಟ ನಡೆಸುತ್ತಿದ್ದವರು ಇದ್ದರು.

ಈಗ ಉದ್ಯೋಗ ಅನಿವಾರ್ಯ
“ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದೆ. ಲಾಕ್‌ಡೌನ್‌ ಸಂದರ್ಭ ಊರಿಗೆ ಬಂದಿದ್ದೆ. ಅನಂತರ ಅಲ್ಲಿನ ಉದ್ಯೋಗ ಕಳೆದುಕೊಂಡೆ. ವೇತನ ಹೆಚ್ಚೋ ಕಡಿಮೆಯೋ ಎಂಬ ಲೆಕ್ಕಾಚಾರ ಮಾಡಿಲ್ಲ. ಸದ್ಯಕ್ಕೆ ಉದ್ಯೋಗ ಅನಿವಾರ್ಯವಾಗಿದೆ. ಹಾಗಾಗಿ ಬಂದಿದ್ದೇನೆ ಎಂದು ವಿಟ್ಲದಿಂದ ಬಂದಿದ್ದ ಉದ್ಯೋಗಾಕಾಂಕ್ಷಿಯೋರ್ವರು “ಉದಯವಾಣಿ’ಗೆ ತಿಳಿಸಿದರು.

ಇಷ್ಟೊಂದು ನಿರೀಕ್ಷೆಯಿರಲಿಲ್ಲ
ಖಾಸಗಿ ಸಂಸ್ಥೆ ಗುತ್ತಿಗೆ ಆಧಾರದಲ್ಲಿ ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಬಾರಿ 900ಕ್ಕೂ ಅಧಿಕ ಅರ್ಜಿಗಳು ಹಾಗೂ ಅದಕ್ಕೆ ಪೂರಕ ದಾಖಲೆ ಸಂಗ್ರಹಿಸಲಾಗಿದ್ದು ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಸೆಲ್ವಮಣಿ ಆರ್‌. ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.