“ಸೌಹಾರ್ದ ಕಾಪಾಡುವಲ್ಲಿ ಪತ್ರಕರ್ತರ ಸೇವೆ ಮಹತ್ವದ್ದು’

ಪತ್ರಿಕಾ ದಿನಾಚರಣೆ, ಬ್ರ್ಯಾಂಡ್ ‌ ಮಂಗಳೂರು ಪ್ರಶಸ್ತಿ ಪ್ರದಾನ

Team Udayavani, Jul 2, 2020, 5:19 AM IST

“ಸೌಹಾರ್ದ ಕಾಪಾಡುವಲ್ಲಿ ಪತ್ರಕರ್ತರ ಸೇವೆ ಮಹತ್ವದ್ದು’

ಮಹಾನಗರ: ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಸುಧಾರಣೆ ಮಾಡುವಲ್ಲಿ ಹಾಗೂ ಸಾಮಾಜಿಕ ಸೌಹಾರ್ದವನ್ನು ಕಾಪಾಡುವಲ್ಲಿ ಪತ್ರಕರ್ತರ ಸೇವೆ ಅತ್ಯಂತ ಮಹತ್ವದ್ದು, ಹಾಗಾಗಿ ಪೊಲೀಸರು, ಸೈನಿಕರು, ಆರೋಗ್ಯ ಸೇವಾ ಕಾರ್ಯಕರ್ತರಂತೆ ಪತ್ರಕರ್ತರು ಕೂಡ ಅತ್ಯಂತ ಗೌರ ವಾರ್ಹರು ಎಂದು ಮಂಗಳೂರು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ| ಪಿ.ಎಲ್‌. ಧರ್ಮ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳೂರು ಪ್ರಸ್‌ ಕ್ಲಬ್‌ ಮತ್ತ ಪತ್ರಿಕಾ ಭವನ ಟ್ರಸ್ಟ್‌ನ ಸಹಯೋಗ‌ದಲ್ಲಿ ಬುಧವಾರ ನಗರದ ಲೇಡಿಹಿಲ್‌ನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ, ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅವರು ಉದ್ಘಾಟಿಸಿದರು.

21ನೇ ಶತಮಾನದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮೊದಲ 10 ಆದ್ಯತೆಗಳಲ್ಲಿ ಮಾಹಿತಿಯೂ ಒಂದಾಗಿದೆ. ಪತ್ರಿಕೆ/ ಮಾಧ್ಯಮಗಳಿಲ್ಲದೆ ಸಮಾಜಕ್ಕೆ ಯಾವುದನ್ನೂ ಕಲಿಯಲು ಸಾಧ್ಯ ವಿಲ್ಲ. ಪತ್ರಕರ್ತರಿಂದ ಚರಿತ್ರೆ, ಭಾಷೆ ಪುನಾರಚನೆಯಾಗಿದೆ. ಪತ್ರಕರ್ತರು ಬರೆಯುವಾಗ ಸಣ್ಣ ತಪ್ಪುಗಳನ್ನು ಮಾಡುವುದು ಸಹಜ. ಆದರೆ ಪುನರಪಿ ತಪ್ಪು ಮಾಡಬಾರದು. ಸಂಶೋಧನೆ ಮಾಡಿ ಬರೆಯಬೇಕು. ಸಾಮಾಜಿಕ ಜವಾಬ್ದಾರಿಯನ್ನು ಮರೆಯಬಾರದು ಎಂದರು.

ಪತ್ರಕರ್ತ ಮುಹಮ್ಮದ್‌ ಅನ್ಸಾರ್‌ ಅವರ “ಸಂಬಂಧ ಗಟ್ಟಿಗೊಳಿಸಿದ ರಮಜಾನ್‌’ ಎಂಬ ವರದಿಗೆ ಈ ವರ್ಷದ ಬ್ರ್ಯಾಂಡ್ ‌ ಮಂಗಳೂರು ಪ್ರಶಸ್ತಿ ಲಭಿಸಿದ್ದು, ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮೆಸ್ಕಾಂ ಪ್ರಧಾನ ವ್ಯವಸ್ಥಾಪಕ ಎಚ್‌.ಕೆ. ಕೃಷ್ಣ ಮೂರ್ತಿ ಅವರು ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಿದರು. ಪ್ರಶಸ್ತಿಯು 5,001 ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನು ಒಳಗೊಂಡಿದೆ.

ಹಿರಿಯ ಪತ್ರಕರ್ತ ಸುರೇಶ್‌ ಬೆಳಗಜೆ ಅವರು “ಪತ್ರಕರ್ತರು ಮತ್ತು ಪತ್ರಿಕೋದ್ಯಮದ ಪ್ರಸ್ತುತತೆ’ ಎಂಬ ವಿಷಯದ ಕುರಿತು ಮಾತನಾಡಿದರು. ಪತ್ರಕರ್ತರು ಪ್ರಸ್ತುತ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ತಮ್ಮ ಆರ್ಥಿಕ ಭದ್ರತೆಗಾಗಿ ಉಳಿತಾಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಕರ್ತ ಪಿ.ಬಿ. ಹರೀಶ್‌ ರೈ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜಿಲ್ಲಾ ವಾರ್ತಾಧಿಕಾರಿ ಖಾದರ್‌ ಶಾ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.