ಸಂಘಟನೆ ಕಾರ್ಯಕ್ಕೆ ಹೆಚ್ಚಿನ ಆದ್ಯತೆ: ನಡ್ಡಾ ಸಲಹೆ
Team Udayavani, Aug 9, 2020, 10:52 AM IST
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಗೆ ಸಂಘಟನಾತ್ಮಕ ಶಕ್ತಿ ಚೆನ್ನಾಗಿದೆ. ಆದರೂ, ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.
ರಾಜ್ಯ ಬಿಜೆಪಿಯ ನೂತನ ಪದಾಧಿಕಾರಿಗಳೊಂದಿಗೆ ಶನಿವಾರ ವರ್ಚುವಲ್ ವ್ಯವಸ್ಥೆ ಮೂಲಕ ಮಾತನಾಡಿದ ಅವರು, ಕರ್ನಾಟಕವು ಕೊರೊನಾ ತಡೆಗಟ್ಟುವಲ್ಲಿ ದೇಶಕ್ಕೆ ಮಾದರಿಯಾಗಿದೆ ಮತ್ತು ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಎಲ್ಲೆಲ್ಲಿ ಸಂಘಟನೆ ದುರ್ಬಲವಾಗಿದೆಯೋ ಆ ಪ್ರದೇಶ ದಲ್ಲಿ ಸಂಘಟನ ಕಾರ್ಯ ಚುರುಕುಗೊಳಿಸಲು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಬೇಕು. ಇಲ್ಲಿ ಒಂದು ವರ್ಷದ ಯೋಜನೆಯನ್ನು ಸಿದ್ಧಪಡಿಸಿ, ಸಚಿವರು ಸಹಿತವಾಗಿ ಹೊಸ ಪದಾಧಿಕಾರಿಗಳಿಗೆ ಜವಾಬ್ದಾರಿ ನೀಡ ಬೇಕು. ಒಂದು ವರ್ಷದಲ್ಲಿ ಈ ಭಾಗದಲ್ಲಿ ಪಕ್ಷದ ಸಂಘಟನೆ ಇನ್ನಷ್ಟು ಉತ್ಕೃಷ್ಟವಾಗಿ ಬೆಳೆಯಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸಲಹೆ ನೀಡಿದರು.
ಐಟಿ ಘಟಕ ಬಲಿಷ್ಠವಾಗಬೇಕು
ಐಟಿ ಘಟಕವು ಇನ್ನಷ್ಟು ಬಲಿಷ್ಠವಾಗಬೇಕು. ಪ್ರತಿ ವಾರವು ಮಾಹಿತಿ ನೀಡುತ್ತಿರಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳು, ಮುಖ್ಯಮಂತ್ರಿ ಹಾಗೂ ಪ್ರಧಾನಿ ಹಾಗೂ ಪ್ರಮುಖ ನಾಯಕರು ಭಾಷಣ, ಯೋಜನೆಯ ಘೋಷಣೆ, ಕಾರ್ಯಕ್ರಮದ ಅನುಷ್ಠಾನ ಇತ್ಯಾದಿಗಳ ಕುರಿತ ವಿಡಿಯೋ ಕ್ಲಿಪ್ಪಿಂಗ್ ಅಥವಾ ಮಾಹಿತಿಯನ್ನು ವಾಟ್ಸ್‌ಆ್ಯಪ್ ಗ್ರೂಪ್‌ಗ್ಳಿಗೆ ಕಳುಹಿಸುವ ಕಾರ್ಯವನ್ನು ಮಾಡಬೇಕು ಎಂದರು.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ಜಗತ್ತಿನಲ್ಲೇ ಕೊರೊನಾವನ್ನು ನಮ್ಮ ದೇಶದಲ್ಲಿ ಸಮರ್ಥವಾಗಿ ನಿಭಾಯಿಸಲಾಗಿದೆ. ಅದಕ್ಕಾಗಿ ಕೇಂದ್ರ ಸರಕಾರವನ್ನು ಅಭಿನಂದಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸರಕಾರದ ಕೆಲವು ಪ್ರಮುಖ ನಿರ್ಣಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು. ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯನ್ನೂ ಮುಕ್ತಕಂಠದಿಂದ ಶ್ಲಾ ಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.