June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್ ಪ್ರಗತಿ-2024 ಉದ್ಯೋಗ ಮೇಳ’
Team Udayavani, Jun 4, 2024, 12:07 AM IST
ಮಂಗಳೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂ. 7 ಮತ್ತು 8ರಂದು “ಆಳ್ವಾಸ್ ಪ್ರಗತಿ-2024 ಉದ್ಯೋಗ ಮೇಳ’ ನಡೆಯಲಿದ್ದು, 20 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಉದ್ಯೋಗ ಮೇಳದಲ್ಲಿ ಐಟಿ ವಲಯ, ಉತ್ಪಾದನಾ ವಲಯ, ಬಿಎಫ್‌ಎಸ್‌ಐ, ಐಟಿಇಎಸ್, ಫಾರ್ಮಾ, ಆರೋಗ್ಯ, ಮಾರಾಟ, ಮಾಧ್ಯಮ, ನಿರ್ಮಾಣ, ಹಾಸ್ಪಿಟಾಲಿಟಿ ವಲಯದ ಕಂಪೆನಿಗಳು ಭಾಗವಹಿಸಲಿವೆ. ರಾಜ್ಯದವರ ಜತೆಗೆ ಹೊರ ರಾಜ್ಯದವರೂ ಭಾಗವಹಿಸಲಿದ್ದಾರೆ ಎಂದರು.
ಕಳೆದ 13 ಆಳ್ವಾಸ್ ಪ್ರಗತಿ ಹಾಗೂ 7 ಉದ್ಯೋಗ ಮೇಳಗಳಲ್ಲಿ ಒಟ್ಟು 31,896 ಮಂದಿಗೆ ಉದ್ಯೋಗಾವಕಾಶ ನೀಡಲಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ತನ್ನ ಸಿಎಸ್‌ಆರ್ ಚಟುವಟಿಕೆಯಡಿ ಉದ್ಯೋಗ ಮೇಳವನ್ನು ಉಚಿತವಾಗಿಯೇ ಆಯೋಜಿಸಿದ್ದು, ನೇಮಕಾತಿ ನಡೆಸುವ ಕಂಪೆನಿಗಳಿಗೆಗೂ ಇದು ಉಚಿತವಾಗಿದೆ. ಈವರೆಗೆ 300ಕ್ಕೂ ಅಧಿಕ ಕಂಪೆನಿಗಳು ನೋಂದಾಯಿಸಿದ್ದು, 10 ಸಾವಿರಕ್ಕೂ ಅಧಿಕ ಮಂದಿ ನೋಂದಣಿ ಮಾಡಿದ್ದಾರೆ. ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಎಂಜಿನಿಯರಿಂಗ್, ಕಲೆ, ವಾಣಿಜ್ಯ ಮತ್ತು ನಿರ್ವಹಣೆ, ವಿಜ್ಞಾನ, ನರ್ಸಿಂಗ್ ಜತೆಗೆ ಐಟಿಐ, ಡಿಪ್ಲೊಮಾ, ಪಿಯುಸಿ ಮತ್ತು ಎಸೆಸೆಲ್ಸಿ, ಇತರ ಅರ್ಹ ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಅಂತಿಮ ಸೆಮಿಸ್ಟರ್ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು, ಅನುಭವಿ ವಿದ್ಯಾರ್ಥಿಗಳೂ ಈ ಅವಕಾಶ ಬಳಸಿಕೊಳ್ಳಬಹುದು ಎಂದರು.
ಉದ್ಯೋಗಾವಕಾಶ
ಐಟಿ ವಲಯದಲ್ಲಿ 207 ಸಾಫ್ಟ್‌ವೇರ್ ಎಂಜಿನಿಯರಿಂಗ್ ಹುದ್ದೆ ಸೇರಿದಂತೆ 20 ಕಂಪೆನಿಗಳಲ್ಲಿ 843 ಉದ್ಯೋಗಾವಕಾಶ ಇದೆ. 400ಕ್ಕೂ ಅಧಿಕ ಉದ್ಯೋಗಾವಕಾಶ ಯಾವುದೇ ಹಿನ್ನೆಲೆಯ ಪದವೀಧರರಿಗೆ ಅಮೆಜಾನ್ ಹಾಗೂ ಟಿಸಿಎಸ್ ಕಂಪನಿಗಳಲ್ಲಿದೆ. ಉತ್ಪಾದನ ವಲಯದಲ್ಲಿ 70 ಸಾವಿರಕ್ಕೂ ಅಧಿಕ ಉದ್ಯೋಗದಾತಾರ 52 ಕಂಪೆನಿಗಳು ಈ ವಲಯದಲ್ಲಿವೆ ಎಂದರು.
ಆಳ್ವಾಸ್ ಪ್ರತಿಷ್ಠಾನದ ತರಬೇತಿ ಮತ್ತು ನಿಯೋಜನೆ ಮುಖ್ಯಸ್ಥ ಸುಶಾಂತ್ ಅನಿಲ್ ಲೋಬೋ, ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ಪ್ರಗತಿಯ ಉತ್ಪಾದನ ವಲಯ ಮುಖ್ಯಸ್ಥ ಡಾ| ಕುಮಾರಸ್ವಾಮಿ ಉಪಸ್ಥಿತರಿದ್ದರು.
ಆಳ್ವಾಸ್ ಪ್ರಗತಿಯ ಎರಡು ದಿನಗಳೂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ದೂರದ ಆಕಾಂಕ್ಷಿಗಳಿಗೆ ಜೂ. 6ರಿಂದ ವಾಸ್ತವ್ಯ ವ್ಯವಸ್ಥೆ ಕಲ್ಪಿಸಲಾಗುವುದು. ಉದ್ಯೋಗಾಕಾಂಕ್ಷಿಗಳ ಉಚಿತ ನೋಂದಣಿಗಾಗಿ: http://alvaspragati.com/CandidateRegistrationPage ಐಟಿಐ, ಪಿಯುಸಿ ಮತ್ತು ಎಸೆಸೆಲ್ಸಿ ಮತ್ತು ಅದಕ್ಕಿಂತ ಕಡಿಮೆ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ಹೊರತು ಪಡಿಸಿ ಎಲ್ಲರಿಗೂ ನೋಂದಣಿ ಕಡ್ಡಾಯ. ನೋಂದಣಿ ಮತ್ತು ಪಾಲ್ಗೊಳ್ಳುವ ಕಂಪೆನಿಗಳ ಮಾಹಿತಿ ಹಾಗೂ ವಿವರಕ್ಕಾಗಿ http://www.alvaspragati.com ಭೇಟಿ ನೀಡಬಹುದು ಎಂದು ಡಾ| ಮೋಹನ ಆಳ್ವ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.