![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 21, 2023, 10:01 AM IST
ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ಹಿನ್ನಲೆ ಕಾಡಾನೆ ಸೆರೆಗೆ ಕಾರ್ಯಾಚರಣೆಗೆ ಸಿದ್ಧತೆಗಾಗಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ ಆಗಮಿಸಿದೆ.
ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಿಗ್ಗೆ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.
ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಬಂದಿದೆ.
ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ತಂಡ ಅಲ್ಲಲ್ಲಿ ವೀಕ್ಷಣೆ ನಡೆಸಿ, ಡ್ರೋನ್ ಬಳಸಿ ಕಾಡಾನೆಯ ಚಲನ ವಲನಗಳನ್ನು ಪತ್ತೆ ಹಚ್ಚಲಾಗುತ್ತಿದೆ.ಕಾಡಾನೆಯನ್ನು ಸೆರೆ ಹಿಡಿಯಲು ಸಾಕಾನೆಗಳ ಸಹಕಾರ ಪಡೆಯಲಾಗುತ್ತದೆ. ಒಂದು ಕಾಡಾನೆ ಇರುವ ಜಾಗವನ್ನು ಪತ್ತೆ ಹಚ್ಚುವ ಕೆಲಸ ನಡೆಸುತ್ತಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ಆರಂಭಿಸಿದ್ದಾರೆ.
ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿದೆ.
ಕಾಡಾನೆ ಹಾವಳಿ ತಡೆಯಲು ಕ್ರಮ ಕೈಗೊಳ್ಳಬೇಕು. ಜನರನ್ನು ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು.
ಈ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ರವಿಕುಮಾರ್.ಎಂ.ಆರ್, ಡಿಎಫ್ಒ ದಿನೇಶ್ ಕುಮಾರ್ ಅವರು ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವ ಭರವಸೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾದ ಇಲಾಖೆ ಕಾಡಾನೆ ಸೆರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.