ದಾಖಲೆ ರಹಿತ ಗ್ರಾಮಗಳ ಪುನರ್ ಸರ್ವೇ; ಕಾಗೋಡು ಒತ್ತಾಯ


Team Udayavani, Feb 17, 2022, 4:14 PM IST

ದಾಖಲೆ ರಹಿತ ಗ್ರಾಮಗಳ ಪುನರ್ ಸರ್ವೇ; ಕಾಗೋಡು ಒತ್ತಾಯ

ಸಾಗರ : ರಾಜ್ಯದಲ್ಲಿರುವ ದಾಖಲೆ ರಹಿತ ಗ್ರಾಮಗಳನ್ನು ಪುನರ್ ಸರ್ವೇ ನಡೆಸಿ ಅವುಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡುವಂತೆ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಅಸಲಿ ಗ್ರಾಮಗಳನ್ನು ಗುರುತಿಸಿ ವಿಸ್ತೀರ್ಣ, ಆಕಾರಬಾಂಧು ಮಾಡಿಸಿ, ನಕ್ಷೆ ರೂಪಿಸಬೇಕು. ಹಾಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತ್ತು ಕಂದಾಯ ಸಚಿವರು ಇದರ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ನಾನು ಕಂದಾಯ ಸಚಿವನಾಗಿದ್ದ ಸಂದರ್ಭದಲ್ಲಿ ಈ ನಿಟ್ಟಿನಲ್ಲಿ ಒಂದಷ್ಟು ಕೆಲಸ ಮಾಡಿದ್ದೇನೆ. ನಂತರ ಅದು ಅಲ್ಲಿಯೇ ನಿಂತು ಹೋಗಿದೆ. ಈಗಿನ ಜನಪ್ರತಿನಿಧಿಗಳಿಗೆ ಇದರ ಬಗ್ಗೆ ಆಸಕ್ತಿ ಇದ್ದಂತೆ ಕಾಣುತ್ತಿಲ್ಲ. ಹಿಂದೆ ಘೋಷಣೆ ಮಾಡಿದ್ದಷ್ಟೆ ಗ್ರಾಮಗಳನ್ನು ಈಗ ಇರಿಸಿಕೊಳ್ಳಲು ಸಾಧ್ಯವಿಲ್ಲ. ಊರು ಬೆಳೆದಿದೆ. ಜನವಸತಿ ಪ್ರದೇಶಗಳು ಹೆಚ್ಚಾಗಿದೆ. ಸಾವಿರಾರು ದಾಖಲೆರಹಿತ ಗ್ರಾಮಗಳು ಇರುವುದರಿಂದ ಅವುಗಳಿಗೆ ರಸ್ತೆ, ಕುಡಿಯುವ ನೀರು ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯ ತಲುಪಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಇದರ ಬಗ್ಗೆ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರದ ಮುಂದಿನ ನಡೆಯನ್ನು ನೋಡಿಕೊಂಡು ಹೋರಾಟ ರೂಪಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಾಜಿ ಸಚಿವ ಶಿವಮೂರ್ತಿ ನಾಯಕ್ ಮಾತನಾಡಿ, ರಾಜ್ಯದಲ್ಲಿ ೫೮ ಸಾವಿರಕ್ಕೂ ಹೆಚ್ಚು ದಾಖಲೆರಹಿತ ಗ್ರಾಮಗಳಿದೆ. ಇದರಲ್ಲಿ ಕೆಲವನ್ನು ಮಾತ್ರ ದಾಖಲೆಸಹಿತ ಗ್ರಾಮ ಎಂದು ಸರ್ಕಾರ ಘೋಷಣೆ ಮಾಡಿದೆ. ಉಳಿದ ಗ್ರಾಮಗಳ ಬಗ್ಗೆ ಸರ್ಕಾರ ಕಣ್ಣೆತ್ತಿ ಸಹ ನೋಡದೆ ಇರುವುದು ಬೇಸರದ ಸಂಗತಿ. ಶಿವಮೊಗ್ಗ ಜಿಲ್ಲೆಯಲ್ಲಿ ಈ ಬಗ್ಗೆ ಪ್ರಯತ್ನ ನಡೆಸಿ ಎಂದರೆ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆ ಸ್ಪಂದಿಸುತ್ತಿಲ್ಲ ಎನ್ನುವ ಸಬೂಬು ಹೇಳುತ್ತಿದ್ದಾರೆ. ಲಂಬಾಣಿ ತಾಂಡ, ಗೊಲ್ಲ ನಾಯಕರ ಹಟ್ಟಿ, ಹಕ್ಕಿಪಿಕ್ಕಿ, ಹಾವಾಡಿಗ ಸೇರಿದಂತೆ ಅನೇಕ ವಾಡಿಗಳು ದಾಖಲೆರಹಿತವಾಗಿದೆ. ದೇಶಾದ್ಯಂತ ಸಹಸ್ರಾರು ಗ್ರಾಮಗಳು ದಾಖಲೆಯಲ್ಲಿ ನಮೂದಾಗದೆ ಇರುವುದರಿಂದ ಮೂಲಭೂತ ಸೌಲಭ್ಯದಿಂದ ವಂಚಿತವಾಗಿದೆ. ದಾಖಲೆರಹಿತ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿ ಎಂದು ಪ್ರಧಾನ ಮಂತ್ರಿಗಳಿಗೆ, ಲೋಕಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದು ಎಲ್ಲ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಟೆಂಪೋ ಪಲ್ಟಿ : ಮಕ್ಕಳು, ಮಹಿಳೆಯರು ಸೇರಿ ಹಲವರಿಗೆ ಗಾಯ

ಕಾಗೋಡು ತಿಮ್ಮಪ್ಪ ಅವರು ಕಂದಾಯ ಸಚಿವರಾಗಿದ್ದಾಗ ಸ್ವಲ್ಪ ಚಾಲನೆ ಸಿಕ್ಕಿದ್ದರೂ ನಂತರ ಅದು ನೆನಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವನ್ನು ಎಚ್ಚರಿಸುವ ಹಿನ್ನೆಲೆಯಲ್ಲಿ ವಾಸಿಸುವವನೇ ನೆಲದೊಡೆಯ ಹೋರಾಟಕ್ಕೆ ಕಾಗೋಡು ನೇತೃತ್ವದಲ್ಲಿ ಚಾಲನೆ ನೀಡಲು ಉದ್ದೇಶಿಸಲಾಗಿದೆ. ರಾಜ್ಯದ ಎಲ್ಲ ದಾಖಲೆರಹಿತ ಗ್ರಾಮಗಳನ್ನು ಪುನರ್ ಸರ್ವೇ ಮಾಡಿ ಸೂಕ್ತ ದಾಖಲೆ ತಯಾರಿಸಿ ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿ ಅವರುಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟ ಅನಿವಾರ್ಯ ಎಂದರು.

ಗೋಷ್ಠಿಯಲ್ಲಿ ಬಂಜಾರು ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್ ಡಿ.ಆರ್. ದಾವಣಗೆರೆ ಜಿಲ್ಲಾಧ್ಯಕ್ಷ ಸತೀಶ್ ನಾಯ್ಕ್ ಹಾಜರಿದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.